Breaking News

ಇಬ್ಬರು ಮಹಿಳೆಯರ ಅಂಗಾಂಗ ದಾನ ಮಾಡಿದ್ದರಿಂದ ಹತ್ತು ಮಂದಿ ಜೀವನಕ್ಕೆ ಆಸರೆ

Spread the love

ಮೈಸೂರು: ಅಪಘಾತಕ್ಕೆ ಒಳಗಾಗಿದ್ದ ಇಬ್ಬರು ಮಹಿಳೆಯರ ಮೆದುಳು ನಿಷ್ಕ್ರಿಯವಾಗಿತ್ತು. ಅವರ ಕುಟುಂಬಸ್ಥರು ಒಪ್ಪಿಗೆ ಮೇರೆಗೆ ಈ ಮಹಿಳೆಯರ ಅಂಗಾಂಗಳನ್ನು ದಾನ ಮಾಡಲಾಯಿತು.

ಇಬ್ಬರು ಮಹಿಳೆಯರ ಅಂಗಾಂಗ ದಾನ ಮಾಡಿದ್ದರಿಂದ ಹತ್ತು ಮಂದಿ ಜೀವನಕ್ಕೆ ಆಸರೆಯಾಗಿದೆ. ನಗರದ ಬೆಲ್ಲವತ್ತ ಬಳಿ ಸಂಭವಿಸಿದ ರಸ್ತೆ ಅಪಘಾತ ಒಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುಧಾ (48) ಎಂಬುವವರನ್ನು ಅಪೋಲೋ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಆಸ್ಪತ್ರೆಯ ವೈದ್ಯರು ಘೋಷಿಸಿದ ಬಳಿಕ, ಅಂಗಾಂಗ ದಾನಕ್ಕೆ ಕುಟುಂಬಸ್ಥರು ಮುಂದೆ ಬಂದಿದ್ದಾರೆ.

ಜೊತೆಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಜು.10 ರಂದು ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಮತಿ ಗಂಗಾಂಬಿಕೆ (73) ಅವರಿಗೆ ಮೂರು ದಿನಗಳ ಕಾಲ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಸಂಬಂಧಿಕರು ಗಾಂಗಾಬಿಕೆಯ ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡಿದ್ದಾರೆ.

ಹತ್ತು ಮಂದಿ ಬದುಕಿಗೆ ನೆರವಾದ ಮಹಿಳೆಯರು: ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಇಬ್ಬರು ಮಹಿಳೆಯರ ಅಂಗಾಂಗಗಳನ್ನು ಸಂಬಂಧಿಕರ ಒಪ್ಪಿಗೆಯ ನಂತರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಬೇರೆ ರೋಗಿಗಳಿಗೆ ಕಸಿ ಮಾಡಲಾಗಿದೆ. ಸುಧಾ ಎಂಬುವವರ ದೇಹದಿಂದ ಯಕೃತ್ತು, ಎಡ ಮೂತ್ರಪಿಂಡವನ್ನು ಆಸ್ಪತ್ರೆಯಲ್ಲಿದ್ದ ರೋಗಿಗಳಿಗೆ ಯಶಸ್ವಿಯಾಗಿ ಕಸಿ ಮಾಡಲಾಗಿದೆ. ಮತ್ತೊಂದು ಮೂತ್ರಪಿಂಡ, ಹೃದಯ ಕವಾಟಗಳು, ಕಣ್ಣಿನ ಕಾರ್ನಿಯಾ, ಶ್ವಾಸಕೋಶಗಳನ್ನು ಬೇರೆ ಆಸ್ಪತ್ರೆಗೆ ರವಾನಿಸಲಾಗಿದ್ದು, ಆ ಮೂಲಕ ಸುಧಾ ಅವರು 6 ಮಂದಿ ಬದುಕಿಗೆ ನೆರವಾಗಿದ್ಧಾರೆ.


Spread the love

About Laxminews 24x7

Check Also

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕು. ಇಲ್ಲದಿದ್ದರೆ ಸರ್ಕಾರವೇ ಪತನವಾಗುತ್ತದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟ‌ರ್ ಭವಿಷ್ಯ ನುಡಿದಿದ್ದಾರೆ.

Spread the love ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕು. ಇಲ್ಲದಿದ್ದರೆ ಸರ್ಕಾರವೇ ಪತನವಾಗುತ್ತದೆ ಎಂದು ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ