Breaking News

ಕರ್ನಾಟಕ ಭಾರತ್ ಗೌರವ ಕಾಶಿ ದರ್ಶನ ಯೋಜನೆಯಡಿ ನಾಲ್ಕನೇ ರೈಲು ಜುಲೈ 29ರಂದು

Spread the love

ಬೆಂಗಳೂರು: ಕರ್ನಾಟಕ ಭಾರತ್ ಗೌರವ ಕಾಶಿ ದರ್ಶನ ಯೋಜನೆಯಡಿ ನಾಲ್ಕನೇ ರೈಲು ಜುಲೈ 29ರಂದು ಬೆಂಗಳೂರಿನಿಂದ ಹೊರಡಲಿದೆ.

ಕಾಶಿ ದರ್ಶನ ಮಾಡಲಿಚ್ಛಿಸಿರುವ ಯಾತ್ರಾತ್ರಿಗಳು ಆನ್ ಲೈನ್ ಮೂಲಕ ತಮ್ಮ ಟಿಕೆಟ್​ಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

2022-23ನೇ ಸಾಲಿನಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯದಿಂದ ಪುಣ್ಯಕ್ಷೇತ್ರಗಳಾದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗ್‌ರಾಜ್ ಕ್ಷೇತ್ರಗಳಿಗೆ ಕಡಿಮೆ ವೆಚ್ಚದಲ್ಲಿ ತೆರಳಲು ಅನುಕೂಲವಾಗುವಂತೆ ರಿಯಾಯಿತಿ ದರದಲ್ಲಿ ಪ್ಯಾಕೇಜ್‌ ರೂಪಿಸಿ “ಕರ್ನಾಟಕ ಭಾರತ್ ಗೌರವ ಕಾಶಿ ದರ್ಶನ” ಯೋಜನೆಯನ್ನು ಐಆರ್‌ಸಿಟಿಸಿ ಮತ್ತು ಭಾರತೀಯ ರೈಲ್ವೇ ಇಲಾಖೆಯ ಸಹಯೋಗದೊಂದಿಗೆ ವಿಶೇಷ ರೈಲಿನ ಮೂಲಕ ಕೈಗೊಳ್ಳಲಾಗಿದೆ.

ಈ ಯೋಜನೆಯಡಿ ಪ್ರಯಾಣಿಸುವ ಯಾತ್ರಾರ್ಥಿಗಳಿಗೆ ತಲಾ ರೂ. 20,000/-ಗಳಂತೆ ಪ್ಯಾಕೇಜ್ ರೂಪಿಸಿದ್ದು, ಈ ಮೊತ್ತದಲ್ಲಿ ತಲಾ ರೂ. 5,000/-ಗಳನ್ನು ರಾಜ್ಯ ಸರ್ಕಾರದ ವತಿಯಿಂದ ಭರಿಸಿ ಉಳಿದ ಮೊತ್ತ ರೂ. 15,000/-ಗಳನ್ನು ಯಾತ್ರಾರ್ಥಿಗಳು ಪಾವತಿಸಬೇಕಿದೆ. ವಿಶೇಷ ರೈಲಿನಲ್ಲಿ ತೆರಳುವ ಯಾತ್ರಾರ್ಥಿಗಳಿಗೆ ಉಪಹಾರ, ಊಟ, ತಂಗುವಿಕೆ, ಸ್ಥಳೀಯ ಸಾರಿಗೆ ಮತ್ತು ಸ್ಥಳೀಯ ವೀಕ್ಷಣೆ ವ್ಯವಸ್ಥೆ ಇದ್ದು, ಒಟ್ಟು 07 ದಿನಗಳ ಪ್ರವಾಸವಾಗಿದೆ ಎಂದು ಸಚಿವರು ತಿಳಿಸಿದರು.

ನಾಲ್ಕನೇ ಟ್ರಿಪ್ಪಿನಲ್ಲಿ ತೆರಳುವ ಯಾತ್ರಾರ್ಥಿಗಳು ಐಆರ್‌ಸಿಟಿಸಿ (IRCTC) ಪೋರ್ಟಲ್ ಮೂಲಕ ಅಥವಾ https://www.irctctourism.com ಲಿಂಕ್ ಮೂಲಕ ಟಿಕೆಟ್ ಕಾಯ್ದಿರಿಸಿಕೊಳ್ಳಬಹುದು. ಹೊಸದಾಗಿ ಸುಸಜ್ಜಿತ ಎಲ್‌ಹೆಚ್‌ಬಿ ಕೋಚ್‌ಗಳನ್ನು ಅಳವಡಿಸಲಾಗಿದ್ದು, ಸ್ಥಳದಲ್ಲಿಯೇ ಅಡುಗೆ ತಯಾರು ಮಾಡುವ ಅಡುಗೆ ಮನೆ (PANTRY CAR) ಒಳಗೊಂಡಿದೆ. ಯಾತ್ರಾರ್ಥಿಗಳ ಹಿತದೃಷ್ಟಿಯಿಂದ ಇಬ್ಬರು ವೈದ್ಯರು ಸಹ ಪ್ರಯಾಣಿಸುವರು. ಈ ಸೌಲಭ್ಯ ಭಕ್ತಾದಿಗಳು ಸದುಪಯೋಗಪಡಿಸಿಕೊಂಡು ಕಾಶಿ ವಿಶ್ವನಾಥ ಸ್ವಾಮಿಯ ದರ್ಶನ ಪಡೆಯುವಂತೆ ರಾಮಲಿಂಗಾರೆಡ್ಡಿ ಮನವಿ ಮಾಡಿದ್ದಾರೆ


Spread the love

About Laxminews 24x7

Check Also

ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಆದೇಶ ನೀಡಿದೆ.

Spread the loveಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ