Breaking News

ಕೇಂದ್ರದ ನಾಯಕ ಓಲೈಕೆಗಾಗಿ ರಾಜ್ಯದ ಬಿಜೆಪಿ ನಾಯಕರು ಈ ರೀತಿಯ ಸಾಹಸಗಳನ್ನು ಮಾಡುತ್ತಿದ್ದಾರೆ ಎಂದು ಡಿಕೆಶಿ

Spread the love

ಬೆಂಗಳೂರು: ದೆಹಲಿ ನಾಯಕರು ನೋಡಲಿ ಅಂತ ಬಿಜೆಪಿ ನಾಯಕರು ರೇಸ್​ನಲ್ಲಿ ಇದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆಶಿ ಟಾಂಗ್ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಹತಾಶೆಯಿಂದ ಗೂಂಡಾ ವರ್ತನೆ ತೋರುತ್ತಿದ್ದಾರೆ.

ಯಾರು ಹೆಚ್ಚಿಗೆ ಮಾತನಾಡುತ್ತಾರೆ, ಯಾರು ಹೆಚ್ಚು ಫೋಟೋಗೆ ಬರುತ್ತಾರೆ ಎಂದು ದೆಹಲಿ ನಾಯಕರು ನೋಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಮಹಾಭಾರತದಲ್ಲಿ ನಡೆಯುವಂತೆ ನಾಟಕ‌ ತೋರಿಸುತ್ತಿದ್ದಾರೆ. ಅವರಿಗೆ ಹಕ್ಕಿದೆ, ಏನು ಬೇಕಾದರು ಮಾಡಲಿ. ನಾವು ನಮ್ಮ ಕೆಲಸ ಮಾಡುತ್ತೇವೆ. ದಲಿತ ಸಭಾದ್ಯಕ್ಷರ ಮೇಲೆ ಹಲ್ಲೆ ಮಾಡಿದ್ದಾರೆ. ಸ್ವೀಕರ್ ವಿರುದ್ಧ ಅವಿಶ್ವಾಸ ನಿರ್ಣಯದಲ್ಲಿ ಯಶಸ್ವಿಯಾಗಲಿ ಎಂದು ತಿಳಿಸಿದರು.

ಬಿಜೆಪಿ ಹೋರಾಟಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಬೆಂಬಲ ವಿಚಾರವಾಗಿ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಸರ್ವೈವಲ್ ಅಂತ ಹೇಳಿದ್ದಾರೆ. ದೇವೇಗೌಡರು ಏನ್ ಹೇಳ್ತಾರೋ ನೋಡೋಣ. ಇನ್ನೂ ಸಿ. ಎಂ. ಇಬ್ರಾಹಿಂ, ಜೆಡಿಎಸ್​ ವರಿಷ್ಠ ಹೆಚ್​ ಡಿ ದೇವೇಗೌಡರು ಈ ಕುರಿತು ಮಾತನಾಡಿಲ್ಲ. ಯಾರೂ ಬೇಕಾದರೂ ಬೆಂಬಲ‌ ಕೊಡಲಿ, ನಮಗೆ ಅಭ್ಯಂತರ ಇಲ್ಲ ಎಂದು ಹೇಳಿದರು.

ನಿನ್ನೆ ವಿಧಾನಸಭೆ ಅಧಿವೇಶನದಲ್ಲಿ ವಿಪಕ್ಷಗಳ ಮಹಾಮೈತ್ರಿ ಸಭೆಯಲ್ಲಿ ಕಾಂಗ್ರೆಸ್​ ನಾಯಕರು ಶಿಷ್ಟಾಚಾರ ಪಾಲನೆಗೆ ಐಎಎಸ್​ ಅಧಿಕಾರಿಗಳನ್ನು ಬಳಸಿಕೊಂಡಿದ್ದಾರೆ ಎಂದು ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಆ ಪ್ರತಿಭಟನೆಯ ಮುಂದುವರಿದ ಭಾಗವಾಗಿ ನಿನ್ನೆ ಮಧ್ಯಾಹ್ನದ ನಂತರ ಬಿಜೆಪಿಯ ಕೆಲವು ಶಾಸಕರು ಸಭಾಧ್ಯಕ್ಷರ ಪೀಠದಲ್ಲಿ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಕುಳಿತಿದ್ದಾಗ, ವಿಧೇಯಕದ ಪ್ರತಿ ಹರಿದು ಪೀಠದ ಮೇಲೆ, ಅವರ ಮೇಲೆ ಎಸೆದಿದ್ದರು. ಮಾರ್ಷಲ್​ಗಳು ಕಾಗದ ಹರಿದು ಎಸೆಯಬೇಡಿ ಎಂದು ಹೇಳಿದರೂ ಕೇಳದೆ ಬಿಜೆಪಿ ಶಾಸಕರು ಮತ್ತೆ ಮತ್ತೆ ಕಾಗದದ ಚೂರುಗಳನ್ನು ರುದ್ರಪ್ಪ ಲಮಾಣಿ ಅವರ ಮೇಲೆ ಎಸೆಯುತ್ತಲೇ ಇದ್ದರು. ಪೀಠಕ್ಕೆ ಅಗೌರವ ತೋರಿದ್ದಕ್ಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್​ನ ವಿಪ್​ ಅಶೋಕ್​ ಪಟ್ಟಣ್​ ಒತ್ತಾಯಿಸಿದ್ದರು.


Spread the love

About Laxminews 24x7

Check Also

ಹೈಡ್ರಾಲಿಕ್ ಎಲಿವೇಟರ್​ಗೆ ಸಿಲುಕಿ ಯುವಕ ಸಾವು

Spread the loveಬೆಂಗಳೂರು, ಸೆಪ್ಟೆಂಬರ್​ 03: ಶಾರ್ಟ್​ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ (fire) ಹೊತ್ತಿಕೊಂಡು ಮಗು ಸಾವನ್ನಪ್ಪಿರುವಂತಹ (death) ಘಟನೆ ನಗರದ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ.  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ