Breaking News

ಮಧ್ಯರಾತ್ರಿ 2 ಗಂಟೆಗೆ ನಿದ್ರೆ ಮಂಪರಿನಲ್ಲಿ ಎದ್ದು ರಸ್ತೆ ಬದಿಯಲ್ಲಿ ನಿಂತಿದ್ದ 6 ವರ್ಷದ ಹೆಣ್ಣು ಮಗುವನ್ನು ರಕ್ಷಿಸಿದ ಕುಂದಾಪುರ ಅರ್ಚನಾ ಬಾರ್ ನ ಸಿಬ್ಬಂದಿ

Spread the love

ಮಧ್ಯರಾತ್ರಿ 2 ಗಂಟೆಗೆ ನಿದ್ರೆ ಮಂಪರಿನಲ್ಲಿ ಎದ್ದು ರಸ್ತೆ ಬದಿಯಲ್ಲಿ ನಿಂತಿದ್ದ 6 ವರ್ಷದ ಹೆಣ್ಣು ಮಗುವನ್ನು ರಕ್ಷಿಸಿದ ಕುಂದಾಪುರ ಅರ್ಚನಾ ಬಾರ್ ನ ಸಿಬ್ಬಂದಿಗಳು

ನಿನ್ನೆ ದಿನ ಚಾರ್ ಕೊಟ್ಟಿಗೆ ಬಾರಿನ ವಿಶ್ವನಾಥ ಪೂಜಾರಿ ರಾತ್ರಿ ಸರಿ ಸುಮಾರು 2 ಗಂಟೆ ಹೊತ್ತಿಗೆ ಬಾರಿನ ತನ್ನೆಲ್ಲ ಲೆಕ್ಕಾಚಾರವನ್ನು ಪೂರೈಸಿಕೊಂಡು ಸಿಬ್ಬಂದಿಗಳೊಂದಿಗೆ ಮನೆಗೆ ತೆರಳುತ್ತಿರುವಾಗ ದಬ್ಬೆಕಟ್ಟೆ ತೆಕ್ಕಟ್ಟೆ ರೋಡಿನಲ್ಲಿ ಆರು ವರ್ಷದ ಹೆಣ್ಣು ಮಗು ಒಂದು ಬಟ್ಟೆ ಇಲ್ಲದೆ ಸ್ವಾಮಿ ಕೊರಗಜ್ಜನ ನಾಮಫಲಕದ ಕೆಳಗೆ ನಿಂತಿರುತ್ತದೆ…

ಅಚಾನಕ್ಕಾಗಿ ಆ ಹುಡುಗಿಯನ್ನು ನೋಡಿದ ವಿಶು ಅಣ್ಣ ಒಂದು ಕ್ಷಣ ದಂಗಾಗಿ ಹೋಗುತ್ತಾರೆ ಈ ಹೊತ್ತಿನಲ್ಲಿ ಒಂಟಿ ಮಗು ಇಲ್ಲಿಗೆ ಬರಲು ಹೇಗೆ ಸಾಧ್ಯ ಎಂದು ಆಲೋಚಿಸಿ ಪ್ರತಿಯೊಂದು ಚಿತ್ರಣವನ್ನು ಮೊಬೈಲ್ ನಲ್ಲಿ ಸೆರೆಹಿಡಿದುಕೊಂಡು ಮಗುವಿನ ರಕ್ಷಣೆಗೆ ದಾವಿಸುತ್ತಾರೆ… ನಂತರ ಮಗುವಿನ ಹತ್ತಿರ ಮಗುವಿನ ಪೂರ್ವ ಪರ ವನ್ನು ವಿಚಾರಿಸಿ ಮಗುವನ್ನ ಅವರ ಮನೆಗೆ ತಲುಪಿಸಿರುತ್ತಾರೆ…

ತಾನು ಹೋಗುವ ದಾರಿಯಲ್ಲಿ ನೋಡಿದ ಮಗುವನ್ನು ನಮಗೇಕೆ ಎಂದು ಅಲ್ಲೇ ಬಿಟ್ಟು ಹೋಗಿದ್ದರೆ? ಊಹಿಸಲು ಅಸಾಧ್ಯ ….

ಮಕ್ಕಳಿಲ್ಲವೆಂದು ಕೊರಗುವ ಈ ಕಾಲದಲ್ಲಿ ಮುದ್ದಾದ ಮಗುವನ್ನು ನೀಲಕ್ಷಿಸಿದ ತಂದೆ ತಾಯಿಗೆ ಏನೆನ್ನಬೇಕು?

 


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ