Breaking News

ಪ್ರಾಂಶುಪಾಲರ ವಿರುದ್ಧ ಕಿರುಕುಳ ದೂರು: ಮತ್ತೊಂದು ಪ್ರಕರಣದಲ್ಲಿ ಯುವಕನ ಲವ್ವಿಡವ್ವಿ, ಬಾಲಕಿ ಗರ್ಭಿಣಿ

Spread the love

ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನ ಎರಡು ಪೊಕ್ಸೊ ಪ್ರಕರಣಗಳು ದಾಖಲಾಗಿವೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಪ್ರಕರಣಗಳಾಗಿವೆ.

 

ಶಿವಮೊಗ್ಗದ ಪ್ರತಿಷ್ಟಿತ ಪಿಯು ಕಾಲೇಜಿನ ಪ್ರಾಂಶುಪಾಲರು ತಮ್ಮದೆ ಕಾಲೇಜಿನ ವಿದ್ಯಾರ್ಥಿನಿಯ ಜೊತೆ ಸಂಪರ್ಕ ಬೆಳೆಸಿದ್ದಾರೆ. ಪ್ರಾಂಶುಪಾಲರಿಗೆ 48 ವರ್ಷವಾಗಿದ್ದು, ವಿದ್ಯಾರ್ಥಿನಿಗೆ 17 ವರ್ಷ ವಯಸ್ಸಾಗಿದೆ. ಪಾಠ ಮಾಡುವ ವಿದ್ಯಾರ್ಥಿನಿಗೆ ನಂಬಿಸಿ, ಆಕೆಯ ಜೊತೆ ಸಂಪರ್ಕ ಬೆಳೆಸಿದ್ದರು ಎನ್ನಲಾಗಿದೆ. ಪ್ರಾಂಶುಪಾಲರು ಕಾಲೇಜಿನಲ್ಲಿ ಚೆನ್ನಾಗಿಯೇ ಪಾಠ ಮಾಡುತ್ತಿದ್ದರು. ಎಲ್ಲಾ ಮಕ್ಕಳು ಪ್ರಾಂಶುಪಾಲರ ಪಾಠವನ್ನು ಚೆನ್ನಾಗಿ ಆಲಿಸುತ್ತಿದ್ದರು. ಇದನ್ನ ಬಳಸಿಕೊಂಡ ಪ್ರಾಂಶುಪಾಲರು 17 ವರ್ಷಷ ಅಪ್ರಾಪ್ತೆಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಮೊನ್ನೆ ಸಂಜೆ ಬಾಲಕಿಯ ತನಗೆ ಮೋಸವಾಗಿದೆ ಎಂದು ಅರಿವಾಗಿದೆ. ಬಳಿಕ ಹಾಸ್ಟೆಲ್​ನ ತನ್ನ ರೂಂನಲ್ಲಿ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಹಾಸ್ಟಲ್​ನ ಇತರ ವಿದ್ಯಾರ್ಥಿಗಳು ನೋಡಿ ವಾರ್ಡನ್​ಗೆ ಮಾಹಿತಿ ತಿಳಿಸಿದ್ದರು. ಕೂಡಲೇ ವಾರ್ಡನ್ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆಗ ಬಾಲಕಿಯ ಮೇಲೆ ದೌರ್ಜನ್ಯ ನಡೆದಿರುವ ಕುರಿತು ಮಾಹಿತಿ‌ ಬೆಳಕಿಗೆ ಬಂದಿದೆ.

ಬಾಲಕಿಯ ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಇನ್ನು ಈ ವಿಷಯ ಕುಟುಂಬಸ್ಥರಿಗೆ ತಿಳಿದಿದೆ. ಈ ಕುರಿತು ಬಾಲಕಿಯ ತಾಯಿ ದೂರಿನ ಮೇರೆಗೆ ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ. ಬಳಿಕ ಕೋರ್ಟ್​ ಆರೋಪಿಯನ್ನು ಪೊಲೀಸ್​ ಕಸ್ಟಡಿಗೆ ನೀಡಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


Spread the love

About Laxminews 24x7

Check Also

2025 – 26 ಹಂಗಾಮಿನಲ್ಲಿ ರೈತರಿಗೆ ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿ ಸರ್ಕಾರದಿಂದ ಅಧಿಕೃತ ಆದೇಶ

Spread the love ಬೆಂಗಳೂರು: 2025-26ನೇ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಹೆಚ್ಚುವರಿ ಕಬ್ಬು ಬೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ