Breaking News

ಬಿಎಸ್​ವೈ ಪುತ್ರ ವಿಜಯೇಂದ್ರ: ಅಮಿತ್ ಶಾ, ನಡ್ಡಾ ಜೊತೆ ಮಹತ್ವದ ಮಾತುಕತೆ

Spread the love

ಬೆಂಗಳೂರು : ವಿಧಾನಸಭೆ ಅಧಿವೇಶನ ನಡೆಯುತ್ತಿರುವ ನಡುವೆಯೇ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ರಾಜ್ಯ ಬಿಜೆಪಿ ಶಾಸಕ ಬಿವೈ ವಿಜಯೇಂದ್ರ ದೆಹಲಿ ಪ್ರವಾಸದಲ್ಲಿದ್ದು, ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ್ದಾರೆ.

ಪ್ರತಿಪಕ್ಷ ನಾಯಕ ಸ್ಥಾನದ ಆಯ್ಕೆ ಬಾಕಿ ಇರುವ ವೇಳೆ ವಿಜಯೇಂದ್ರ ಹೈಕಮಾಂಡ್ ಭೇಟಿ ರಾಜ್ಯ ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದೆ.

 ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ಡಾ ಅವರೊಂದಿಗೆ ಮಾತುಕತೆ ನಡೆಸಿದ ಬಿ ವೈ ವಿಜಯೇಂದ್ರರಾಜ್ಯ ಬಜೆಟ್ ಅಧಿವೇಶನದಲ್ಲಿ ಬಿಜೆಪಿಯನ್ನು ಸಮರ್ಥಿಸಿಕೊಂಡು, ಕಾಂಗ್ರೆಸ್ ಪಕ್ಷವನ್ನು ಟೀಕಿಸಿ, ಸದನದ ಗಮನ ಸೆಳೆಯುವಂತೆ ಮಾತನಾಡಿದ್ದ ಯಡಿಯೂರಪ್ಪ ಪುತ್ರ ಬಿ. ವೈ ವಿಜಯೇಂದ್ರ ಅಧಿವೇಶನ ಮುಕ್ತಾಯಕ್ಕೂ ಮೊದಲೇ ದಿಢೀರ್ ದೆಹಲಿಗೆ ತೆರಳಿದ್ದಾರೆ. ಬುಧವಾರ ರಾತ್ರಿಯೇ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ಡಾರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಸದ್ಯ ಪ್ರತಿಪಕ್ಷ ನಾಯಕನ ಸ್ಥಾನ ಖಾಲಿ ಇದ್ದು, ಈ ವಿಚಾರ ಸದನದಲ್ಲಿನ ಹೋರಾಟಕ್ಕೂ ಬಿಜೆಪಿಗೆ ಹಿನ್ನಡೆಯಾಗಿದೆ. ಅಧಿವೇಶನ ಆರಂಭದ ವೇಳೆ ಪ್ರತಿಪಕ್ಷ ನಾಯಕರ ಆಯ್ಕೆ ಮಾಡುವುದಾಗಿ ಹೇಳಿದ್ದ ಹೈಕಮಾಂಡ್ ಅಧಿವೇಶನ ಮುಗಿಯುತ್ತಾ ಬಂದರೂ ನೇಮಕ ಮಾಡಿಲ್ಲ. ಈ ಕುರಿತು ಮಾತುಕತೆ ನಡೆದಿರುವ ಸಾಧ್ಯತೆ ಇದೆ.

 ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ರಾಜ್ಯ ಬಿಜೆಪಿ ಹಿರಿಯ ನಾಯಕ ಬಿ ವೈ ವಿಜಯೇಂದ್ರಚುನಾವಣೆ ಎದುರಿಸುವ ನಿಟ್ಟಿನಲ್ಲಿ ಮಾರ್ಗದರ್ಶನ: ಈ ಕುರಿತು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ವಿಜಯೇಂದ್ರ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡಾ ಅವರನ್ನು ಬುಧವಾರ ನವದೆಹಲಿಯಲ್ಲಿ ಭೇಟಿ ಮಾಡಿ ಆಶೀರ್ವಾದ ಕೋರಲಾಯಿತು. ವಿಧಾನ ಸಭೆ ಹಾಗೂ ಹೊರಗೆ ‘ಕಾಂಗ್ರೆಸ್ ವೈಫಲ್ಯ ಹಾಗೂ ಜನವಿರೋಧಿ ಕ್ರಮಗಳ’ ವಿರುದ್ಧ ಹೋರಾಟ ರೂಪಿಸುವ ಕುರಿತು ಹಾಗೂ ಲೋಕಸಭಾ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಾರ್ಗದರ್ಶನ ಪಡೆಯಲಾಯಿತು ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಮಾರ್ಗದರ್ಶನ: ನಡ್ಡಾ ಭೇಟಿ ಬೆನ್ನಲ್ಲೇ ಬಿಜೆಪಿ ಚಾಣಾಕ್ಯ ಎಂದೇ ಕರೆಸಿಕೊಳ್ಳುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ವಿಜಯೇಂದ್ರ, ಕೆಲಕಾಲ ಮಾತುಕತೆ ನಡೆಸಿದರು. ವಿಧಾನಸಭೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿ‌ ಚರ್ಚಿಸಿದರು. ಈ ಕುರಿತು ಟ್ವೀಟ್ ಮಾಡಿರುವ ವಿಜಯೇಂದ್ರ, ಸಂಘಟನಾ ಚಾತುರ್ಯದ ಚಾಣಕ್ಯನೆಂದೇ ಬಣ್ಣಿಸಲ್ಪಡುವ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಮಾಡಲಾಯಿತು. ರಾಜ್ಯದಲ್ಲಿ ವೈಫಲ್ಯದ ಗ್ಯಾರಂಟಿ ಬೆನ್ನಿಗಂಟಿಸಿಕೊಂಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಹಾಗೂ ಮುಂದಿನ ಲೋಕಸಭಾ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಕುರಿತು ಮಾರ್ಗದರ್ಶನ ಪಡೆಯಲಾಯಿತು ಎಂದು ತಿಳಿಸಿದ್ದಾರೆ.

 ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ಡಾ ಅವರೊಂದಿಗೆ ರಾಜ್ಯ ಬಿಜೆಪಿ ಹಿರಿಯ ನಾಯಕ ಬಿ ವೈ ವಿಜಯೇಂದ್ರಸದ್ಯ ಪ್ರತಿಪಕ್ಷ ನಾಯಕರ ಸ್ಥಾನಕ್ಕೆ ಆಯ್ಕೆ ಬಾಕಿ ಇದ್ದು, ಹೊಸ ರಾಜ್ಯಾಧ್ಯಕ್ಷರ ನೇಮಕದ ಚರ್ಚೆಯೂ ಆಗುತ್ತಿದೆ. ಈ ವೇಳೆ ಅಧಿವೇಶನ ಬಿಟ್ಟು ವಿಜಯೇಂದ್ರ ವರಿಷ್ಠರ ಭೇಟಿಗೆ ದೆಹಲಿಗೆ ತೆರಳಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ