Breaking News

ಇಂದು ಸದನ‌ ಬಹಿಷ್ಕರಿಸಿರುವ ಬಿಜೆಪಿ ಶಾಸಕರು ಕಾಂಗ್ರೆಸ್​ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Spread the love

ಬೆಂಗಳೂರು: ಹತ್ತು ಮಂದಿ ಬಿಜೆಪಿ ಶಾಸಕರ ಅಮಾನತು ವಿರೋಧಿಸಿ ಸದನ‌ ಬಹಿಷ್ಕರಿಸಿ ಬಿಜೆಪಿ ಉಭಯ ಸದನ ಸದಸ್ಯರು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಎರಡನೇ ದಿನವಾದ ಇಂದೂ ಪ್ರತಿಭಟನೆ ನಡೆಸಿದರು.

ಹತ್ತು ಶಾಸಕರ ಅಮಾನತು ಖಂಡಿಸಿ, ಶಿಷ್ಟಾಚಾರ ಉಲ್ಲಂಘಿಸಿ ಐಎಎಸ್ ಅಧಿಕಾರಿಗಳನ್ನು ನಿಯೋಜನೆ ವಿರೋಧಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಸರ್ಕಾರ ಹಾಗೂ ಸ್ಪೀಕರ್ ವಿರುದ್ಧ ಧಿಕ್ಕಾರ ಕೂಗಿ ಬಿಜೆಪಿ ಶಾಸಕರು ತಮ್ಮ ಆಕ್ರೋಶ ಹೊರಹಾಕಿದರು. ಸಿದ್ದರಾಮಯ್ಯ ಹಿಟ್ಲರ್ ಎಂಬ ಘೋಷಣೆಗಳನ್ನು ಕೂಗಿ ಬಿಜೆಪಿ ಶಾಕಸರು ಧರಣಿ ನಡೆಸಿದರು. ಧರಣಿಯಲ್ಲಿ ಮಾಜಿ ಸಿಎಂ ಬಸವರಾಜು ಬೊಮ್ಮಾಯಿ, ಆರ್.ಅಶೋಕ್, ಅಶ್ವತ್ಥ್ ನಾರಾಯಣ್, ಸುನೀಲ್ ಕುಮಾರ್, ಸುರೇಶ್ ಕುಮಾರ್, ಆರಗ ಜ್ಞಾನೇಂದ್ರ, ಬಿ.ವೈ.ವಿಜಯೇಂದ್ರ, ಕೋಟಾ ಶ್ರೀನಿವಾಸ ಪೂಜಾರಿ, ಎನ್.ರವಿಕುಮಾರ್ ಮುಂತಾದವರು ಪಾಲ್ಗೊಂಡು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.

ನಿನ್ನೆಯೂ ಬಿಜೆಪಿ ಶಾಸಕರು ಸದನ ಬಹಿಷ್ಕರಿಸಿ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದ್ದರು. ಬಳಿಕ ವಿಧಾನಸೌಧದಿಂದ ರಾಜಭವನದ ವರೆಗೆ ಕಾಲ್ನಡಿಗೆ ನಡೆಸಿದ ಬಿಜೆಪಿ ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ ಸ್ಪೀಕರ್ ವಿರುದ್ದ ದೂರು ನೀಡಿದ್ದರು. ಮಾಜಿ ಸಿಎಂ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ನಾಯಕರೂ ಉಪಸ್ಥಿತರಿದ್ದರು. ಇನ್ನು ಬಿಜೆಪಿ ಶಾಸಕರ ಅಮಾನತು ಆದೇಶವನ್ನು ವಿರೋಧಿಸಿ ಪ್ರತಿಪಕ್ಷಗಳು ವಿಧಾನಸಭೆಯ ಸದನದ ಕಲಾಪವನ್ನು 2ನೇ ದಿನವಾದ ಇಂದು ಕೂಡ ಬಹಿಷ್ಕರಿಸಿದ್ದು, ಪ್ರತಿಪಕ್ಷಗಳ ಆಸನಗಳು ಖಾಲಿ ಹೊಡೆಯುತ್ತಿದ್ದವು.

ಪೊಲೀಸ್ ಠಾಣೆಗಳಲ್ಲಿ ಮಾಮೂಲು ಫಿಕ್ಸ್ ಆಗಿದೆ: ಇದೇ ವೇಳೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಶಾಲಾ ಮಕ್ಕಳಿಗೆ 2000 ಶೆಡ್ಯೂಲ್ ಬಸ್ ಕೊಡ್ತೀವಿ ಅಂದಿದ್ದೆವು. ಅದನ್ನೂ ತೆಗೆದು ಹಾಕಿದ್ದಾರೆ. ಶಾಲಾ ಮಕ್ಕಳು ಬದುಕುವ ಹಕ್ಕು ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಎಲ್ಲಿ ಬೇಕಾದರು ಕೊಲೆ ಸುಲಿಗೆ ನಡೆಯುತ್ತಿದೆ. ಕೆಲವು ಪೊಲೀಸ್ ಠಾಣೆಯಲ್ಲಿ ಮಾಮೂಲು ಫಿಕ್ಸ್ ಆಗಿದೆ. ಪೊಲೀಸ್ ಠಾಣೆಯಲ್ಲಿ ರಾಜಾರೋಷವಾಗಿ ಮಾಮೂಲು ಫಿಕ್ಸ್ ಆಗಿದೆ. ಪೊಲೀಸ್ ಠಾಣೆಯನ್ನು ಹರಾಜು ಹಾಕುತ್ತಿದ್ದಾರೆ.

ಮಾಮೂಲು ಹರಾಜು ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಸಾಮಾನ್ಯ ಜನರ ಬದುಕನ್ನು ಅಸ್ಥಿರ ಮಾಡಿದ್ದಾರೆ. ಇವರ ಬಜೆಟ್ ಜನವಿರೋಧಿ ಬಜೆಟ್. ಸಾಲವನ್ನು ಹೆಚ್ಚು ಮಾಡಿದ್ದಾರೆ. ಸಾಲದ ಕೀರ್ತಿ ಸಿದ್ದರಾಮಯ್ಯಗೆ ಸೇರುತ್ತದೆ. ಈ ಬಾರಿ 85,000 ಕೋಟಿ ಸಾಲ ಮಾಡಿದ್ದೀರ. ಎಲ್ಲಾ ಭಾಗ್ಯಗಳಿಗೆ ಎಸ್​ಸಿಪಿಟಿಎಸ್ ಪಿ ಹಣವನ್ನು ದುರ್ಬಳಕೆ ಮಾಡಿದ್ದಾರೆ ಎಂದು ಕಿಡಿ ಕಾರಿದರು.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ