Breaking News

ಬೆಳಗಾವಿ ಜಿಲ್ಲೆಯ ನದಿಗಳಲ್ಲಿ ನೀರು ಹರಿಯುವ ಪ್ರಮಾಣ ಹೆಚ್ಚಳ 16 ಸೇತುವೆಗಳು ಜಲಾವೃತ

Spread the love

ಚಿಕ್ಕೋಡಿ: ಮಹಾರಾಷ್ಟ್ರ ಪಶ್ಚಿಮ ಘಟ್ಟದಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಹರಿಯುತ್ತಿರುವ ನದಿಗಳಲ್ಲಿ ನೀರಿನ ಒಳಹರಿವು ಪ್ರಮಾಣ ಹೆಚ್ಚಾಗಿದ್ದು, ಬಂಗಾಲಿ ಬಾಬಾ ದರ್ಗಾ ಜಲದಿಗ್ಭಂಧನಕ್ಕೆ ಒಳಗಾಗಿದೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕು ಕಾರದಗಾ ಗ್ರಾಮದ ಆರಾಧ್ಯ ದೈವ ಬಂಗಾಲಿ ಬಾಬಾ ದರ್ಗಾ ಜಲದಿಗ್ಭಂಧನಕ್ಕೆ ಒಳಗಾಗಿದ್ದು, ಸದ್ಯ ಬಾಬಾನ ದರ್ಶನಕ್ಕೆ ದೂದಗಂಗಾ ನದಿ ನೀರು ತಡೆಯನ್ನು ಒಡ್ಡಿದೆ. ದೂಧಗಂಗಾ ನದಿಯ ಒಳಹರಿವು ಹೆಚ್ಚಳಗೊಂಡ ಹಿನ್ನೆಲೆ ದರ್ಗಾದ ಮುಂದೆ ಎರಡು ಅಡಿಯಷ್ಟು ನೀರು ಸುತ್ತುವರಿದೆ. ಉತ್ತರ ಕರ್ನಾಟಕದ ದೊಡ್ಡ ನದಿ ಕೃಷ್ಣಾ ನದಿಯಲ್ಲಿಯೂ ನೀರಿನ ಒಳ ಹರಿವು ಹೆಚ್ಚಳವಾಗಿದೆ. ಸದ್ಯ ಮಹಾರಾಷ್ಟ್ರ ರಾಜಾಪುರ ಬ್ಯಾರೇಜ್ ನಿಂದ 91 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.

ಮಹಾರಾಷ್ಟ್ರ ಪಶ್ಚಿಮ ಘಟ್ಟದಲ್ಲಿ ಮಳೆ ಪ್ರಮಾಣ: ಕೊಯ್ನಾ ಜಲಾಶಯ ಭಾಗದಲ್ಲಿ 133 ಮಿಲಿಮೀಟರ್ . ನವಾಜ ಭಾಗದಲ್ಲಿ 140 ಮಿಲಿ ಮೀಟರ್. ಮಹಾ ಬಬಲೇಶ್ವರ 127 ಮಿಲಿ ಮೀಟರ್, ವಾರಣ 60 ಮಿಲಿ ಮೀಟರ್, ಸಾಂಗ್ಲಿ 9 ಮಿಲಿಮೀಟರ್, ಕೊಲ್ಲಾಪುರ 29ಮಿಲಿ ಮೀಟರ್, ಕಾಳಮ್ಮವಾಡಿ 40 ಮಿಲಿ ಮೀಟರ್, ರಾಧಾ ನಗರಿ 90 ಮಿಲಿ ಮೀಟರ್, ಪಾಟಗಾಂವ್ 110 ಮಿಲಿ ಮೀಟರ್ ಕಳೆದ 24 ಗಂಟೆಗಳಲ್ಲಿ ಇಷ್ಟು ಪ್ರಮಾಣದ ಮಳೆ ಸುರಿದಿದೆ ಎಂದು ಮಹಾರಾಷ್ಟ್ರ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಏಳು ಸೇತುವೆಗಳು ಜಲಾವೃತ: ಚಿಕ್ಕೋಡಿ ತಾಲೂಕಿನ ಮಲಿಕವಾಡ -ದತ್ತವಾಡ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆಯಾಗಿದೆ. ನಿಪ್ಪಾಣಿ ತಾಲೂಕಿನ ಕಾರದಗಾ – ಭೋಜ, ಭೋಜವಾಡಿ-ಕುನ್ನೂರ, ಸಿದ್ದಾಳ-ಅಕ್ಕೋಳ, ಜತಾಟ-ಭಿವಶಿ, ಮಮದಾಪೂರ-ಹುನ್ನರಗಿ, ಕುನೂರ-ಬಾರವಾಡ ಸೇತುವೆಗಳು ನದಿಯಲ್ಲಿ ಒಳಹರಿವು ಹೆಚ್ಚಳವಾಗಿರುವ ಹಿನ್ನೆಲೆ ಜಲಾವೃತವಾಗಿವೆ. ಮುಂಜಾಗ್ರತಾ ಕ್ರಮವಾಗಿ ಚಿಕ್ಕೋಡಿ ಹಾಗೂ ನಿಪ್ಪಾಣಿ ಪೊಲೀಸರು ಸೇತುವೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಬ್ಯಾರಿಕೇಡ್ ಅಳವಡಿಸಿ ಸಂಚಾರ ಬಂದ್ ಮಾಡಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ