ಬೆಳಗಾವಿ : ಇಡೀ ಜಗತ್ತು ಮೆಚ್ಚಿರುವ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅಹಂಕಾರದಿಂದ ಹಗುರವಾಗಿ ಮಾತನಾಡಬಾರದು.
ಇದು ನಿಮಗೆ ಶೋಭೆ ತರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತ ವಿರುದ್ಧ ಶನಿವಾರ ಬೆಳಗಾವಿ ರಾಣಿ ಚೆನ್ನಮ್ಮ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಬೇರೆ ದೇಶಕ್ಕೆ ಹೋದಾಗ ಯಾವುದಾದರೂ ಪ್ರಧಾನಮಂತ್ರಿಗಳ ಕಾಲ ಮುಟ್ಟಿ ನಮಸ್ಕಾರ ಮಾಡಿದ್ದನ್ನು ನೀವು ನೋಡಿದ್ದೀರಾ?. ಈಗ ಮೋದಿಯವರ ಕಾಲು ಮುಟ್ಟಿ ನಮಸ್ಕಾರ ಮಾಡುತ್ತಿದ್ದಾರೆ. ಒಳ್ಳೆ ಕೆಲಸಗಳನ್ನು ಮಾಡುವ ಮೂಲಕ ದೇಶಕ್ಕೆ ಹೆಸರು ತಂದಿದ್ದಾರೆ. ಅಂತವರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ಇನ್ನೊಮ್ಮೆ ಅಹಂಕಾರದಿಂದ ಮೋದಿಯವರ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ, ಅಹಂಕಾರದ ಇನ್ನೊಂದು ರೂಪ ರಾವಣ, ಆ ರಾವಣನ ಹೆಸರನ್ನೇ ನಿಮಗೆ ಇಡಲು ಬಿಜೆಪಿ ಕಾರ್ಯಕರ್ತರು ಹಿಂದೆ ಮುಂದೆ ನೋಡುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.