Breaking News

ಬಾಲಗಂಗಾಧರ ತಿಲಕ್ ಸಾರ್ವಜನಿಕ ಗಣೇಶೋತ್ಸವ ಆಚರಣೆ ಮಾಡುವ ಮೂಲಕ ಜನರನ್ನು ಒಗ್ಗೂಡಿಸಿ ಸ್ವಾತಂತ್ರ್ಯವನ್ನು ತಂದು ಕೊಟ್ಟಿದ್ದಾರೆ ಎಂದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Spread the love

ಮೈಸೂರು: ಸ್ವಾತಂತ್ರ್ಯ ಪೂರ್ವದಲ್ಲಿ ಗಣೇಶೋತ್ಸವ ಆಚರಣೆ ಮಾಡುವ ಮೂಲಕ ಜನರನ್ನು ಒಟ್ಟು ಸೇರಿಸಿ, ಶ್ರಮಪಟ್ಟು ನಮಗೆ ಸ್ವಾತಂತ್ರ್ಯ ತಂದು ಕೊಟ್ಟವರು ಬಾಲಗಂಗಾಧರ ತಿಲಕ್ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ವೀರ ಸಾವರ್ಕರ್ ಯುವಬಳಗದ ವತಿಯಿಂದ ಭಾನುವಾರ ಸಂಜೆ ನಗರದ ತಿಲಕ್ ನಗರದಲ್ಲಿ ಆಯೋಜಿಸಿದ್ದ ಬಾಲಗಂಗಾಧರ ತಿಲಕರ 167ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಲೋಕ ಮಾನ್ಯ ಬಾಲಗಂಗಾಧರ ತಿಲಕರ 167ನೇ ಜಯಂತ್ಯುತ್ಸವವನ್ನು ತಿಲಕ್​ ನಗರದಲ್ಲಿ ಆಚರಿಸುತ್ತಿರುವುದು ಅತ್ಯಂತ ಮಹತ್ವಪೂರ್ಣದ್ದಾಗಿದೆ. ನಾವು ಇವರಿಗೆ ಎಷ್ಟು ಕೃತಜ್ಞತೆಗಳನ್ನು ಸಲ್ಲಿಸಿದರು ಅದು ಕಡಿಮೆ. ಯಾಕೆಂದರೆ ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯವನ್ನು ದೊರಕಿಸಿಕೊಟ್ಟವರು ಅವರು. ಅವರು ಪಟ್ಟಿರುವ ಶ್ರಮ ಊಹಿಸಲೂ ಅಸಾಧ್ಯ. ಹಿಂದೆ ನಮ್ಮ ಸಮಾಜವನ್ನು ಒಗ್ಗೂಡಿಸುವುದೇ ದೊಡ್ಡ ಕಷ್ಟಕರವಾದ ಕಾರ್ಯವಾಗಿತ್ತು. ಅವರು ಸಾರ್ವಜನಿಕ ಗಣೇಶೋತ್ಸವ ಆಚರಣೆ ಮಾಡುವ ಮೂಲಕ ಜನರನ್ನು ಒಗ್ಗೂಡಿಸಿ ಸ್ವಾತಂತ್ರ್ಯವನ್ನು ತಂದು ಕೊಟ್ಟಿದ್ದಾರೆ ಎಂದರು.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ