Breaking News

K.I.A.D.B. ಕಚೇರಿಗಳಲ್ಲಿ ದಲ್ಲಾಳಿಗಳಿಗೆ ಲಗಾಮು: ಸರ್ಕಾರದಿಂದ ಸುತ್ತೋಲೆ ಪ್ರಕಟ

Spread the love

ಬೆಂಗಳೂರು: ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗಾಗಿ ಭೂಮಿ ಕಳೆದುಕೊಂಡ ರೈತರ ಪರವಾಗಿ ಕೆಐಎಡಿಬಿ ಕೇಂದ್ರ ಕಚೇರಿ ಮತ್ತು ವಲಯ ಕಚೇರಿಗಳಲ್ಲಿ ಕಾಣಿಸಿಕೊಳ್ಳುವ ದಲ್ಲಾಳಿಗಳು, ಮಧ್ಯವರ್ತಿಗಳು ಹಾಗೂ ಅವರ ಜೊತೆ ಕೈಜೋಡಿಸುವ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ್​ ಎಚ್ಚರಿಸಿದ್ದು, ಈ ಸಂಬಂಧ ಸುತ್ತೋಲೆ ಹೊರಡಿಸಲಾಗಿದೆ.

 

ಈ ಬಗ್ಗೆ ಮಾತನಾಡಿರುವ ಸಚಿವರು, “ಕೆಐಎಡಿಬಿ ಕಚೇರಿಗಳಲ್ಲಿ ಸಂತ್ರಸ್ತ ರೈತರ ಪರವಾಗಿ ಮತ್ತು ಕೈಗಾರಿಕಾ ನಿವೇಶನಗಳು ಮಂಜೂರಾಗಿರುವ ಉದ್ಯಮಿಗಳ ಅಥವಾ ನಿವೇಶನದಾರರ ಹೆಸರಿನಲ್ಲಿ ಕೆಲವು ಅನಪೇಕ್ಷಿತ ವ್ಯಕ್ತಿಗಳು ಲಪಟಾಯಿಸುತ್ತಿರುವುದು ಗಮನಕ್ಕೆ ಬಂದಿದೆ. ಸಹಿಸಿಕೊಳ್ಳಲು ಸಾಧ್ಯವಿಲ್ಲ. ಜಮೀನು ಕಳೆದುಕೊಂಡ ರೈತರು ಅಥವಾ ಕಾನೂನುಬದ್ಧ ವಾರಸುದಾರರು, ಪ್ರತಿನಿಧಿಗಳು ಮಾತ್ರ ಕಚೇರಿಗಳಿಗೆ ಭೇಟಿ ನೀಡಿ, ಅಹವಾಲು ಸಲ್ಲಿಸಬಹುದು” ಎಂದಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ