Breaking News
Home / ರಾಜಕೀಯ / ಐವರು I.A.S. ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಐವರು I.A.S. ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

Spread the love

ಬೆಂಗಳೂರು : ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

  • ಡಾ. ವೆಂಕಟೇಶ್ ಎಂ.ವಿ.- ಜಿಲ್ಲಾಧಿಕಾರಿ ದಾವಣಗೆರೆ ಜಿಲ್ಲೆ.
    ಗಂಗೂಬಾಯಿ ರಮೇಶ್ ಮಾನಕರ- ಉಪ ಆಯುಕ್ತರು, ಉತ್ತರ ಕನ್ನಡ ಜಿಲ್ಲೆ.
  • ಗಂಗಾಧರಸ್ವಾಮಿ ಜಿ.ಎಂ- ನಿರ್ದೇಶಕರು, ಕೃಷಿ ಮಾರುಕಟ್ಟೆ ಇಲಾಖೆ, ಬೆಂಗಳೂರು ಎಂದು ಪೋಸ್ಟ್ ಮಾಡಲಾಗಿದೆ.
  • ಶ್ರೀ ನಾಗೇಂದ್ರ ಪ್ರಸಾದ್ ಕೆ.- ನಿರ್ದೇಶಕರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ.
    ಅಶ್ವಿಜಾ ಬಿ. ವಿ- ಆಯುಕ್ತರು, ತುಮಕೂರು ಮಹಾನಗರ ಪಾಲಿಕೆ, ತುಮಕೂರು.

ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ : ಇನ್ನೊಂದೆಡೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ (ಜುಲೈ 12-2023) ಆದೇಶ ಹೊರಡಿಸಿತ್ತು. ಪೊಲೀಸ್ ಹೆಡ್ ಕ್ವಾರ್ಟರ್ಸ್ ಐಜಿಪಿಯಾಗಿದ್ದ ಎಸ್. ಎನ್ ಸಿದ್ದರಾಮಪ್ಪ ಅವರನ್ನ ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿ, ರಾಜ್ಯ ಆಂತರಿಕ ಭದ್ರತಾ ವಿಭಾಗದ ಎಸ್​ಪಿಯಾಗಿದ್ದ ಡಿ. ಆರ್ ಸಿರಿಗೌರಿ ಅವರನ್ನ ಬೆಂಗಳೂರು ಪೊಲೀಸ್ ಆಡಳಿತ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಅವರ ಸ್ಥಾನಕ್ಕೆ ಸ್ಟೇಟ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ ಎಸ್​ಪಿಯಾಗಿದ್ದ ವರ್ತಿಕಾ ಕಟಿಯಾರ್​ ಅವರನ್ನ ನೂತನ ಎಸ್​ಪಿಯಾಗಿ ವರ್ಗಾವಣೆ ಮಾಡಲಾಗಿತ್ತು.

ಬೆಂಗಳೂರು ಪೊಲೀಸ್ ಆಡಳಿತ ವಿಭಾಗದ ಡಿಸಿಪಿಯಾಗಿದ್ದ ಡಾ. ಅನೂಪ್.ಎ ಶೆಟ್ಟಿಯವರು ಬಿಟ್ ಕಾಯಿನ್ ಹಗರಣ ತನಿಖೆಗೆ ರಚನೆಯಾಗಿರುವ ಎಸ್‌ಐಟಿ ತಂಡದ ಪ್ರಮುಖ ಅಧಿಕಾರಿಯಾಗಿರುವುದರಿಂದ, ಅವರನ್ನು ಸಿಐಡಿ ಎಸ್​ಪಿಯಾಗಿ ವರ್ಗಾವಣೆ ಮಾಡಲಾಗಿತ್ತು.

9 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ: ಇನ್ನು ರಾಜ್ಯ ಸರ್ಕಾರ ಜು.10 ರಂದು ಆಯುಷ್ ಇಲಾಖೆ ಆಯುಕ್ತ ಮಂಜುನಾಥ್ ಸೇರಿದಂತೆ ಒಟ್ಟು 9 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಆಯುಷ್ಯ ಇಲಾಖೆಯ ಆಯುಕ್ತರಾಗಿದ್ದ ಮಂಜುನಾಥ್ ಅವರನ್ನು ಸರ್ವೇ ಇತ್ಯರ್ಥ ಮತ್ತು ಭೂಮಿ ದಾಖಲೆಗಳ ಆಯುಕ್ತರನ್ನಾಗಿ ವರ್ಗಾಯಿಸಲಾಗಿತ್ತು.

ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯ ನಿರ್ದೇಶಕರಾಗಿದ್ದ ಶ್ರೀಮತಿ ಸತ್ಯಭಾಮ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿತ್ತು. ಗ್ರಾಮೀಣ ಅಭಿವೃದ್ಧಿ ಇಲಾಖೆಯ ಆಯುಕ್ತರಾಗಿದ್ದ ಶ್ರೀಮತಿ ಶಿಲ್ಪ ನಾಗ ಅವರನ್ನು ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿಯನ್ನಾಗಿ ವರ್ಗಾಯಿಸಲಾಗಿತ್ತು. ಬಾಗಲಕೋಟೆಯ ಜಿಲ್ಲಾ ಪಂಚಾಯತಿ ಸಿಇಒ ಆಗಿದ್ದ ಭೂಬಲನ್ ಅವರನ್ನು ವಿಜಯಪುರ ಜಿಲ್ಲಾಧಿಕಾರಿಯನ್ನಾಗಿ ನೇಮಿಸಲಾಗಿತ್ತು.

ತುಮಕೂರಿನ ನಗರಸಭೆಯ ಆಯುಕ್ತರಾಗಿದ್ದ ದರ್ಶನ ಹೆಚ್ ಅವರನ್ನು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿತ್ತು. ಹುದ್ದೆಯ ನಿರೀಕ್ಷೆಯಲ್ಲಿದ್ದ ಅನುರಾಧ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯತ್ ಸಿಇಓ ಆಗಿ ವರ್ಗಾವಣೆ ಮಾಡಲಾಗಿತ್ತು. ರಾಜ್ಯದ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ಜಂಟಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶ್ರೀಮತಿ ಪದ್ಮ ಬಸವಂತಪ್ಪ ಅವರನ್ನು ಕೋಲಾರ ಜಿಲ್ಲಾ ಪಂಚಾಯತಿಯ ಸಿಇಓ ಆಗಿ ವರ್ಗಾವಣೆ ಮಾಡಲಾಗಿತ್ತು.


Spread the love

About Laxminews 24x7

Check Also

ಬೈಲಹೊಂಗಲದಲ್ಲಿ ಇದ್ದಾರೆ ‘ಹತ್ತು ರೂಪಾಯಿ’ ಡಾಕ್ಟ್ರು

Spread the love ಬೈಲಹೊಂಗಲ: ಇದು ದುಬಾರಿ ಯುಗ. ಇಂದು ಬಹುತೇಕ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಶುಲ್ಕ ಜನರ ಕೈಸುಡುತ್ತಿದೆ. ಆದರೆ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ