Breaking News

ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ

Spread the love

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ನಾಳೆ ( ಜು. 26 ) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

 

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ತುರ್ತು ಕ್ರಮಗಳನ್ನು ಕೈಗೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ , ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಗ್ರಾಮೀಣ ಮತ್ತು ದೂರ ಪ್ರದೇಶಗಳಿಂದ ಬರುವ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಕಾಲೇಜಿಗೆ ಹಾಜರಾಗಲು ಅನಾನೂಕೂಲವಾಗುವ ಸಂದರ್ಭದಲ್ಲಿ ಆನ್​ಲೈನ್ ಮೂಲಕ ತರಗತಿಗಳನ್ನು ನಡೆಸಲು ಸಂಬಂಧಪಟ್ಟ ವಿದ್ಯಾ ಸಂಸ್ಥೆಗಳು ಅವಕಾಶ ಕಲ್ಪಿಸುವುದು. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು. ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ