Breaking News

ಗೋಡೆ ಕುಸಿದು ಬಿದ್ದು ಹೆಣ್ಣು ಮಗು ಸಾವು 5 ಲಕ್ಷ ಪರಿಹಾರ ನೀಡಿದ D.C.

Spread the love

ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಕುಂಬಳೂರು ಗ್ರಾಮದಲ್ಲಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಮೃತಪಟ್ಟ ಮಗುವಿನ ಮನೆಗೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಭೇಟಿ ನೀಡಿದ್ದಾರೆ.

ಅಲ್ಲದೇ ಈ ಮೂಲಕ ಕುಟುಂಬಕ್ಕೆ ಐದು ಲಕ್ಷ ಪರಿಹಾರ ನೀಡಿದ್ದಾರೆ.

 ಅವಘಡ ಸಂಭವಿಸಿದ ಮನೆಗೆ ಆಗಮಿಸಿದ ಡಿಸಿ ಶಿವಾನಂದ ಕಾಪಶಿಜಿಲ್ಲೆಯಲ್ಲಿ ಮಳೆ ಹೆಚ್ಚಾಗಿ ಬೀಳುತ್ತಿರುವ ಬೆನ್ನಲ್ಲೇ ಇಂದು ಬೆಳಗಿನ ಜಾವ ಈ ಘಟನೆ ನಡೆದಿತ್ತು. ಘಟನೆಯಲ್ಲಿ ಸ್ಪೂರ್ತಿ (01) ಸಾವನಪ್ಪಿ ತಂದೆ ಕೆಂಚಪ್ಪ (32) ಗಾಯಗೊಂಡಿದ್ದರು. ಅವರಿಗೆ ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಕಳೆದ ಮೂರು‌ ದಿನಗಳಿಂದ ಜಿಲ್ಲೆಯಲ್ಲಿ ನಿರಂತರ ಮಳೆ ಬೀಳುತ್ತಿರುವ ಬೆನ್ನಲ್ಲೇ ಈ ಘಟನೆ ಜರುಗಿದೆ.

ನಿರಂತರವಾಗಿ ಮಳೆ ಬೀಳುತ್ತಿರುವುದರಿಂದ ಗಾಯಗೊಂಡ ಕೆಂಚಪ್ಪಗೆ ಸೇರಿದ ಮನೆ ಸಂಪೂರ್ಣವಾಗಿ ಹಾಳಾಗಿತ್ತು.‌ ಗೋಡೆಗಳು ಕೂಡ ಬಿರುಕು ಬಿಟ್ಟಿದ್ದವು. ಮಳೆ ಬೀಳ್ತಿರುವುದರಿಂದ ಎಲ್ಲ ಗೋಡೆಗಳು ಹಸಿಯಾಗಿ ಕುಸಿದಿವೆ. ಇದರಿಂದ ಅವಘಡ ಸಂಭವಿಸಿದೆ. ಕಳೆದ ದಿನ ಮಳೆ ಹೆಚ್ಚಾಗಿದ್ದರಿಂದ ಮುಂಜಾಗ್ರತಾ ಕ್ರಮ ವಹಿಸದ ಕೆಂಚಪ್ಪ ಕುಟುಂಬ ರಾತ್ರಿ ವೇಳೆ ಅದೇ ಮನೆಯಲ್ಲಿ ನಿದ್ದೆಗೆ ಜಾರಿದ್ದಾರೆ.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ