ಕಲಬುರಗಿ: ಕನ್ನಡ ರಾಜ್ಯೋತ್ಸವ ಬಹಿಷ್ಕರಿಸಿ, ಪ್ರತ್ಯೇಕ ರಾಜ್ಯದ ಧ್ವಜಾರೋಹಣ ನೆರವೇರಿಸಲು ಯತ್ನಿಸಿದ ಹತ್ತು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಸೇರಿದ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಸದಸ್ಯರು ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದರು. ತಕ್ಷಣ ಎಚ್ಚೆತ್ತುಕೊಂಡು ಪೊಲೀಸರು ಧ್ವಜಾರೋಹಣ 10 ಜನರ ವಶಕ್ಕೆ ಪಡೆದರು.
ಯಾವುದೇ ಸರ್ಕಾರ ಅಸ್ತಿತ್ವಕ್ಕೆ ಬಂದರೂ ಕಲ್ಯಾಣ ಕರ್ನಾಟಕ ಭಾಗವನ್ನು ಪದೇ ಪದೇ ನಿರ್ಲಕ್ಷಿಸಲಾಗುತ್ತಿದೆ. ನಮಗೆ ಪ್ರತ್ಯೇಕ ರಾಜ್ಯ ಬೇಕು ಎಂದು ಘೋಷಣೆ ಕೂಗಿದರು.
ಈ ವೇಳೆ ಎಂ.ಎಸ್.ಪಾಟೀಲನರಿಬೋಳ ಸೇರಿದಂತೆ ಹತ್ತಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದರು.
ಪ್ರತ್ಯೇಕ ರಾಜ್ಯಕ್ಕೆ ಒತ್ತಾಯಿಸಿ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೂ ಸ್ಪರ್ಧೆ ಮಾಡಲಾಗುವುದು ಎಂದು ಸಮಿತಿ ಅದ್ಯಕ್ಷ ಎಂ.ಎಸ್. ಪಾಟೀಲ ತಿಳಿಸಿದ್ದಾರೆ.
Laxmi News 24×7