Breaking News

ಮೊಬೈಲ್ ಚಾರ್ಜ್ ಹಾಕಲು ಹೋಗಿ ಯುವಕ ವಿದ್ಯುತ್ ತಗುಲಿ ಸಾವ ಸಂಭವಿಸಿದೆ

Spread the love

ಚಿಕ್ಕೋಡಿ: ಮೊಬೈಲ್ ಚಾರ್ಜ್ ಹಾಕಲು ಹೋಗಿ ಯುವಕ ವಿದ್ಯುತ್ ತಗುಲಿ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕೋಡಿಯಲ್ಲಿ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಶಿರಪ್ಪೆವಾಡಿ ಗ್ರಾಮದ ಆಕಾಶ ಸಂಕಪಾಳ (27) ಸಾವನ್ನಪ್ಪಿದ ದುರ್ದೈವಿ ಎಂದು ಗುರುತಿಸಲಾಗಿದೆ.

 

ಮುಂಜಾನೆ ಎಂಟು ಗಂಟೆ ಸುಮಾರಿಗೆ ಮನೆಯಲ್ಲಿ ಮೊಬೈಲ್ ಚಾರ್ಚ್ ಹಾಕುವುದಕ್ಕೆ ಯುವಕ ಮುಂದಾಗಿದ್ದಾನೆ. ಆಕಸ್ಮಿಕವಾಗಿ ವಿದ್ಯುತ್ ಕೈಗೆ ತಗುಲಿ ಸಾವು ಸಂಭವಿಸಿದೆ ಎಂದು ಮೃತ ಯುವಕನ ತಂದೆ ನಿಪ್ಪಾಣಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ನಿಪ್ಪಾಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿಪ್ಪಾಣಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಬೆಳಗಾವಿ ಎಸ್ಪಿ ಡಾ ಸಂಜೀವ್​ ಪಾಟೀಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ವಿದ್ಯುತ್​ ತಗುಲಿ ಯುವಕ ಸಾವು: ಜಿಮ್​ನಲ್ಲಿ ಟ್ರೆಡ್​ಮಿಲ್​ ಮೇಲೆ ರನ್ನಿಂಗ್​ ಮಾಡುತ್ತಿದ್ದ ವೇಳೆ ವಿದ್ಯುತ್​ ಹರಿದು ಯುವಕ ಸಾವನಪ್ಪಿರುವ ಘಟನೆ ಇತ್ತೀಚೆಗೆ ನವದೆಹಲಿಯಲ್ಲಿ ನಡೆದಿತ್ತು. ದೆಹಲಿಯ ರೋಹಿಣಿ ಪ್ರದೇಶದ ಸಕ್ಷಮ್​ ಸಾವನ್ನಪ್ಪಿರುವ ಯುವಕ. ಎಂದಿನಂತೆ ಬೆಳಗ್ಗೆ ರೋಹಿಣಿ ಪ್ರದೇಶದಲ್ಲಿರುವ ಜಿಮ್​ಗೆ ಬಂದಿದ್ದ ಸಕ್ಷಮ್​ ಟ್ರೆಡ್​ಮಿಲ್​ನಲ್ಲಿ ರನ್ನಿಂಗ್​ ಮಾಡುತ್ತಿದ್ದ. ಈ ವೇಳೆ, ವಿದ್ಯುತ್​ ಪ್ರವಹಿಸಿ ಸಕ್ಷಮ್​ ಅಲ್ಲೇ ಕುಸಿದು ಬಿದ್ದಿದ್ದನು. ತಕ್ಕಣವೇ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಯಾವುದೇ ಪ್ರಯೋಜನವಾಗಿರಲಿಲ್ಲ. ಸಕ್ಷಮ್​ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದನು. ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಹಂತದಲ್ಲಿ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದರು.


Spread the love

About Laxminews 24x7

Check Also

ಇನ್ನೂ ಎರಡು ದಿನ ಮಹಾಮಳೆ

Spread the loveಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ (ಜು.7) ಜೋರು ಗಾಳಿ ಸಹಿತ ಮಳೆಯಾಗುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ