Breaking News

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಒಪ್ಪಿಗೆ

Spread the love

ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ನಂದಿನಿ ಹಾಲಿಗೆ 3 ರೂ. ಹೆಚ್ಚಳಕ್ಕೆ ಸಂಪುಟ ಸಭೆ ತೀರ್ಮಾನಿಸಿದೆ. ಕಳೆದ ವಾರ ಕೆಎಂಎಫ್ ಜೊತೆ ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಾಲಿನ ದರ 3 ರೂ. ಹೆಚ್ಚಿಸಲು ನಿರ್ಧರಿಸಲಾಗಿತ್ತು.

ಈ ಸಂಬಂಧ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಅದರಂತೆ ಇದೀಗ ಸಚಿವ ಸಂಪುಟ ಸಭೆಯಲ್ಲಿ ದರ ಏರಿಕೆಗೆ ತೀರ್ಮಾನಿಸಲಾಗಿದೆ. ಆ ಮೂಲಕ ಆಗಸ್ಟ್ 1ರಿಂದ ಹಾಲಿನ ದರ 3 ರೂ. ಹೆಚ್ಚಳವಾಗಲಿದೆ.

ಅಕ್ರಮ ಕಲ್ಲು ಗಣಿಗಾರಿಕೆಗೆ ದಂಡ ವಸೂಲಿಗೆ ತೀರ್ಮಾನ: ಕಲ್ಲುಗಣಿ ಗುತ್ತಿಗೆ ಪ್ರದೇಶದಲ್ಲಿ ಒತ್ತುವರಿ ಮಾಡಿದಂತಹ ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆಯನ್ನು ಮಾಡಿ ಹೆಚ್ಚಿಗೆ ಉಪಖನಿಜ ತೆಗೆದು ಸಾಗಣೆ ಮಾಡಿದವರಿಗೆ, 6,105 ಕೋಟಿ ರೂ.‌ ದಂಡ ಮತ್ತು ರಾಯಧನ ವಸೂಲಿಗೆ ತೀರ್ಮಾನ ಮಾಡಲಾಗಿದೆ‌. ಒನ್ ಟೈಂ ಸೆಟ್ಲೆಮೆಂಟ್ ಮೂಲಕ ಹಣ ವಸೂಲಿಗೆ ತೀರ್ಮಾನಿಸಲಾಗಿದ್ದು, ಈ ಸಂಬಂಧ ಸಚಿವ ಸಂಪುಟ ಉಪ ಸಮಿತಿ ರಚನೆಗೆ ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ