Breaking News

ನಮ್ಮ ನಾಯಕ ಡಿಕೆಶಿ, ಸಿಎಂ ಸಿದ್ದರಾಮಯ್ಯ ಅವರ ಜೊತೆ ಸೇರಿ ಪಕ್ಷ ಕಟ್ಟಿದ್ದರಿಂದ ಇಂದು ರಾಜ್ಯದಲ್ಲಿ ಅಧಿಕಾರ ಹಿಡಿದಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Spread the love

ಬೆಂಗಳೂರು : ಯುವಕರೇ ದೇಶದ ಆಸ್ತಿ, ಯುವಕರಿಂದಲೇ ದೇಶ ಮುನ್ನಡೆಯಬೇಕು. ದೇಶದ ಉಳಿವಿಗಾಗಿ ಯುವಕರು ಎಚ್ಚೆತ್ತುಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಕರೆ ನೀಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಯುವ ಕಾಂಗ್ರೆಸ್ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, 2024ರ ಚುನಾವಣೆ ನಮ್ಮ ಮುಂದಿನ ಗುರಿಯಾಗಿದ್ದು, ಈ ಗುರಿ ತಲುಪಬೇಕಿದೆ ಎಂದರು.

ಭವಿಷ್ಯದ ನಾಯಕರನ್ನು ರೂಪಿಸಲು ಯುವ ಘಟಕಗಳು ಪ್ರಮುಖ ಪಾತ್ರ ವಹಿಸುತ್ತವೆ. ನಾನು ಕೂಡ ಪಂಚಾಯತಿ ಮಟ್ಟದಲ್ಲಿ ರಾಜಕೀಯ ಆರಂಭಿಸಿ, ಇಂದು ಕರ್ನಾಟಕದಲ್ಲಿ ಸಚಿವೆಯಾಗಿರುವೆ. ಎರಡು ಬಾರಿ ಚುನಾವಣೆಯಲ್ಲಿ ಸೋತರೂ ಎದೆಗುಂದದೇ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ ಇಂದು ಸಚಿವೆಯಾಗಿರುವೆ ಎಂದರು.

ಕಾಂಗ್ರೆಸ್ ಇಂದು ಕರ್ನಾಟಕದಲ್ಲಿ ಅಧಿಕಾರ ಹಿಡಿದಿದೆ: ನಮ್ಮೆಲ್ಲರ ನಾಯಕ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿ ಜೈಲಿಗಟ್ಟಿದರೂ ಎದೆಗುಂದದೆ ಮುನ್ನಡೆದರು. ಅವರ ರಾಜ್ಯದ ಅಚ್ಚುಮೆಚ್ಚಿನ ನಾಯಕ ಸಿದ್ದರಾಮಯ್ಯ ಕೂಡಾ ಜತೆಗೂಡಿ ಪಕ್ಷ ಕಟ್ಟಿದ ಫಲವಾಗಿ ಕಾಂಗ್ರೆಸ್ ಇಂದು ಕರ್ನಾಟಕದಲ್ಲಿ ಅಧಿಕಾರ ಹಿಡಿದಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​​ ಹೇಳಿದರು.

ಯುವ ಕಾಂಗ್ರೆಸ್​ನಿಂದ ಅನೇಕ ನಾಯಕರು ಬೆಳೆದು ಬಂದಿದ್ದಾರೆ: ಯುವ ಸಮುದಾಯ ಎಂದರೆ ಭವಿಷ್ಯ ಎಂಬುದನ್ನು ಅರಿತ ಇಂದಿರಾ ಗಾಂಧಿ ಅವರು, ಭವಿಷ್ಯದ ನಾಯಕರ ನಿರ್ಮಾಣಕ್ಕೆ ಯುವ ಕಾಂಗ್ರೆಸ್ ಆರಂಭಿಸಿದರು. ಪರಿಣಾಮ ಯುವ ಕಾಂಗ್ರೆಸ್​ನಿಂದ ಅನೇಕ ನಾಯಕರು ಬೆಳೆದು ಬಂದಿದ್ದಾರೆ. ರಾಜ್ಯದಲ್ಲಿ ನಾನು ಸೇರಿದಂತೆ ಅನೇಕ ನಾಯಕರು ಯುವ ಕಾಂಗ್ರೆಸ್​ನಲ್ಲಿ ಪಳಗಿದವರು. ನಾಯಕತ್ವ, ಹೋರಾಟದ ಗುಣಗಳನ್ನು ಬೆಳೆಯಿಸಿಕೊಳ್ಳಲು ಯುವ ಕಾಂಗ್ರೆಸ್ ಗರಡಿ ಮನೆಯಂತೆ, ನೀವು ಆ ಗರಡಿ ಮನೆಯಲ್ಲಿ ಎಂತಹ ಪಟ್ಟುಗಳನ್ನು ಕಲಿಯುತ್ತೀರಿ ಎಂಬುದರ ಮೇಲೆ ನಿಮ್ಮ ಭವಿಷ್ಯ ನಿರ್ಧಾರವಾಗುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.


Spread the love

About Laxminews 24x7

Check Also

ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಆದೇಶ ನೀಡಿದೆ.

Spread the loveಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ