Breaking News
Home / ರಾಜಕೀಯ / ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳ ನೇಮಕ ಮಾಡಿ ಸರ್ಕಾರ ಆದೇಶ

ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳ ನೇಮಕ ಮಾಡಿ ಸರ್ಕಾರ ಆದೇಶ

Spread the love

ಬೆಂಗಳೂರು : ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

 

15ನೇ ಆಗಸ್ಟ್, 2023ರ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ (ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ) ಈ ಕೆಳಗೆ ಸೂಚಿಸಿದಂತೆ ಸಚಿವರುಗಳನ್ನು ಧ್ವಜಾರೋಹಣ ಮಾಡಲು ನೇಮಿಸಲಾಗಿದೆ.

 ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳ ನೇಮಕ

  1. ಗೃಹ ಸಚಿವ ಡಾ. ಜಿ. ಪರಮೇಶ್ವರ್ – ತುಮಕೂರು.
  2. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ – ಗದಗ.
  3. ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ- ಬೆಂಗಳೂರು ಗ್ರಾಮಾಂತರ.
  4. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ- ರಾಮನಗರ.
  5. ಇಂಧನ ಸಚಿವ ಕೆ.ಜೆ. ಜಾರ್ಜ್- ಚಿಕ್ಕಮಗಳೂರು.
  6. ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್- ವಿಜಯಪುರ.
  7. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್- ದಕ್ಷಿಣ ಕನ್ನಡ.
  8. ಸಮಾಜ ಕಲ್ಯಾಣ ಇಲಾಖೆ ಸಚಿವ ಡಾಕ್ಟರ್ ಹೆಚ್.ಸಿ. ಮಹದೇವಪ್ಪ- ಮೈಸೂರು.
  9. ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ- ಬೆಳಗಾವಿ.
  10. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ- ಕಲಬುರಗಿ.
  11. ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ್ ಪಾಟೀಲ್- ಹಾವೇರಿ.
  12. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ – ವಿಜಯನಗರ.
  13. ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರ – ಯಾದಗಿರಿ.
  14. ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ – ಬೀದರ್.
  15. ಕೃಷಿ ಸಚಿವ ಎನ್.ಚಲುವರಾಯಸ್ವಾಮಿ – ಮಂಡ್ಯ.
  16. ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ – ದಾವಣಗೆರೆ.
  17. ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ – ಧಾರವಾಡ.
  18. ವೈದ್ಯಕೀಯ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ – ರಾಯಚೂರು.
  19. ಅಬಕಾರಿ ಸಚಿವ ತಿಮ್ಮಾಪುರ ರಾಮಪ್ಪ ಬಾಳಪ್ಪ- ಬಾಗಲಕೋಟೆ.
  20. ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ – ಚಾಮರಾಜನಗರ.
  21. ಹಿಂದುಳಿದ ವರ್ಗಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ- ಕೊಪ್ಪಳ.
  22. ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ – ಚಿತ್ರದುರ್ಗ.
  23. ಯುವಜನ ಸೇವೆಗಳು, ಕ್ರೀಡೆಗಳು ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ- ಬಳ್ಳಾರಿ.
  24. ಸಹಕಾರ ಸಚಿವ ಕ್ಯಾತ್ಸಂದ್ರ ಎನ್. ರಾಜಣ್ಣ- ಹಾಸನ.
  25. ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಭೈರತಿ ಸುರೇಶ್- ಕೋಲಾರ.
  26. ಮಹಿಳಾ ಮತ್ತು ಮಕ್ಕಳಾಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್- ಉಡುಪಿ.
  27. ಮೀನುಗಾರಿಗೆ, ಬಂದರು, ಒಳನಾಡು ಜಲ ಸಾರಿಗೆ ಸಚಿವ ಮಂಕಾಳ ವೈದ್ಯ- ಉತ್ತರ ಕನ್ನಡ.
  28. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ- ಶಿವಮೊಗ್ಗ.
  29. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್- ಚಿಕ್ಕಬಳ್ಳಾಪುರ.
  30. ಸಣ್ಣ, ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್. ಬೋಸರಾಜು- ಕೊಡಗು ಜಿಲ್ಲೆ.

ಅನಾರೋಗ್ಯ ಅಥವಾ ಇತರ ಕಾರಣಗಳಿಂದಾಗಿ ಸಚಿವರು ಧ್ವಜಾರೋಹಣ ಕಾರ್ಯಕ್ರಮಕ್ಕೆ ಅನುಪಸ್ಮಿತರಿದ್ದಲ್ಲಿ, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡಲು ಆದೇಶದಲ್ಲಿ ತಿಳಿಸಲಾಗಿದೆ.

ಹೆಚ್ಚುವರಿ ಹೊಣೆಗಾರಿಕೆ : ಯೋಜನಾ ಮತ್ತು ಸಾಂಖಿಕ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ(ಡಿಪಿಎಆರ್) (ಇ-ಆಡಳಿತ) ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹೊಣೆಗಾರಿಕೆಯನ್ನು ಹೆಚ್ಚುವರಿಯಾಗಿ ವಹಿಸಿ ಸರ್ಕಾರ ಆದೇಶಿಸಿದೆ.


Spread the love

About Laxminews 24x7

Check Also

ಬೈಲಹೊಂಗಲದಲ್ಲಿ ಇದ್ದಾರೆ ‘ಹತ್ತು ರೂಪಾಯಿ’ ಡಾಕ್ಟ್ರು

Spread the love ಬೈಲಹೊಂಗಲ: ಇದು ದುಬಾರಿ ಯುಗ. ಇಂದು ಬಹುತೇಕ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಶುಲ್ಕ ಜನರ ಕೈಸುಡುತ್ತಿದೆ. ಆದರೆ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ