ಆರೋಗ್ಯ ಸೌಧದಲ್ಲಿವಿಶ್ವ ಹೆಪಟೈಟಿಸ್ ದಿನಾಚರಣೆ ಕಾರ್ಯಕ್ರಮ

Spread the love

ಬೆಂಗಳೂರು: ”ವಿದ್ಯಾರ್ಥಿಗಳ ಪಠ್ಯಕ್ರಮದಲ್ಲಿ ಆರೋಗ್ಯ ಶಿಕ್ಷಣ ನೀಡುವ ಮೂಲಕ ಯುವಕರಲ್ಲಿ ಆರೋಗ್ಯ ಜಾಗೃತಿ ಮೂಡಿಸುವುದು ಅತಿ ಅವಶ್ಯವಾಗಿದೆ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಶುಕ್ರವಾರ ವಿಶ್ವ ಹೆಪಟೈಟಿಸ್ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹೆಪಟೈಟಿಸ್ ಸೋಂಕು ಆಹಾರ ಮತ್ತು ಜೀವನಶೈಲಿಯಲ್ಲಿ ಆಗುವ ಬದಲಾವಣೆಗಳಿಂದ ಬರುತ್ತದೆ. ಮಾನವನ ಅಂಗಾಂಗದಲ್ಲಿ ಲಿವರ್​ಗೆ ನಾವು ಹೆಚ್ಚು ಪ್ರಾಮುಖ್ಯತೆ ನೀಡಬೇಕಾಗಿದೆ. ಲಿವರ್​ನ್ನು ನಾವು ಎಷ್ಟು ಚೆನ್ನಾಗಿ ನೋಡಿಕೊಳ್ಳುತ್ತೇವೋ, ಅದು ನಮಗೆ ಅಷ್ಟೇ ಉತ್ತಮ ಆರೋಗ್ಯವನ್ನು ನೀಡುವಂತಹ ಒಂದು ಅಂಗಾಂಗವಾಗಿದೆ ಎಂದರು.

ಮಾನವನ ದೇಹದಲ್ಲಿ ಲಿವರ್ 500 ಕ್ಕೂ ಹೆಚ್ವು ಕಾರ್ಯವನ್ನು ಮಾಡುವ ಪ್ರಮುಖ ಅಂಗಾಂಗ. ಎ, ಬಿ, ಸಿ, ಡಿ ಮತ್ತು ಇ ರೀತಿಯ ಹೆಪಟೈಟಿಸ್ ವೈರಸ್​ಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ ಬಿ ಮತ್ತು ಸಿ ವೈರಸ್ ಲಿವರ್ ಡ್ಯಾಮೇಜ್ ಮಾಡುವ ವೈರಸ್ ಗಳಾಗಿದ್ದು, ಮಾರಕ ಕಾಯಿಲೆಯನ್ನು ಉಂಟುಮಾಡುತ್ತವೆ ಎಂದು ಸಚಿವರು ಹೇಳಿದರು.

ಹೆಪಟೈಟಿಸ್ ವೈರಸ್ ನಿಂದಾಗಿ ದೇಶದಲ್ಲಿ 3.5 ಕೋಟಿಗೂ ಹೆಚ್ಚು ಜನರು ಇಂದು ಲಿವರ್ ಸಮಸ್ಯೆ ಎದುರಿಸುತ್ತಿದ್ದಾರೆ. ಕರ್ನಾಟದಲ್ಲಿ ಶೇ. 1 ರಷ್ಟು ಹೆಪಟೈಟಿಸ್ ಸೋಂಕು ಕಂಡು ಬಂದಿದೆ. 2030 ರೊಳಗೆ ಹೆಪಟೈಟಿಸ್ ಸಿ ವೈರಸ್ ಮುಕ್ತ ರಾಜ್ಯವನ್ನಾಗಿ ಮಾಡುವ ಗುರಿ ಹೊಂದಲಾಗಿದ್ದು, ಹೆಪಟೈಟಿಸ್ ಬಿ ವೈರಸ್ ಅನ್ನು ಕೂಡಾ ನಿಯಂತ್ರಣದಲ್ಲಿಡಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಚಿವರು ಹೇಳಿದರು.
ಈ ನಿಟ್ಟಿನಲ್ಲಿ ಸಮಾಜದಲ್ಲಿ ಜಾಗೃತಿ ಅತ್ಯವಶ್ಯಕವಾಗಿದೆ. ಹೆಪಟೈಟಿಸ್ ವೈರಸ್ ಒಂದೇ ಅಲ್ಲ, ಕಿಡ್ನಿ ವೈಫಲ್ಯದಂತ ಮಾರಕ ಕಾಯಿಲೆಗಳಿಂದ ಯುವಕರನ್ನು ದೂರವಿಡಲು ವಿದ್ಯಾರ್ಥಿಗಳ ಪಠ್ಯದಲ್ಲಿಯೇ ಆರೋಗ್ಯ ಶಿಕ್ಷಣ ನೀಡುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಯುವಕರು ಒಂದೆಡೆ ವ್ಯಸನಗಳಿಗೆ ಮಾರುಹೋಗಿ ನಂತರದ ದಿನಗಳಲ್ಲಿ ಕಾಯಿಲೆಗಳಿಗೆ ಈಡಾಗುತ್ತಾರೆ. ಅಲ್ಲದೇ ಆಹಾರ ಪದ್ಧತಿ, ಜೀವನ ಶೈಲಿಯಲ್ಲಾಗುವ ಬದಲಾವಣೆಗಳು ಇಂದು ಮಾರಕ ವೈರಸ್​ಗಳು ಮನಷ್ಯನ ಅಂಗಾಂಗಗಳಿಗೆ ಸಮಸ್ಯೆಯುಂಟು ಮಾಡುತ್ತಿವೆ ಎಂದು ಸಚಿವರು ಕಳವಳ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ