Breaking News
Home / ರಾಜಕೀಯ / ಭಾರತದ ವಿರುದ್ಧ ನಡೆದ 2ನೇ ಏಕದಿನ ಪಂದ್ಯದಲ್ಲಿ ವಿಂಡೀಸ್​ ತಂಡ 6 ವಿಕೆಟ್​ಗಳ ಗೆಲುವು

ಭಾರತದ ವಿರುದ್ಧ ನಡೆದ 2ನೇ ಏಕದಿನ ಪಂದ್ಯದಲ್ಲಿ ವಿಂಡೀಸ್​ ತಂಡ 6 ವಿಕೆಟ್​ಗಳ ಗೆಲುವು

Spread the love

ಬಾರ್ಬಡೋಸ್​: ತವರಿನಲ್ಲಿ ನಡೆಯುವ ಏಕದಿನ ಕ್ರಿಕೆಟ್ ವಿಶ್ವಕಪ್​ಗೆ ಇನ್ನೂ ಪ್ರಯೋಗ ನಡೆಸುತ್ತಿರುವ ಭಾರತ ತಂಡ, ವೆಸ್ಟ್ ಇಂಡೀಸ್​ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿದೆ.

ನಾಯಕ ರೋಹಿತ್​ ಶರ್ಮಾ, ವಿರಾಟ್​ ಕೊಹ್ಲಿಗೆ ವಿಶ್ರಾಂತಿ ನೀಡಿದ ಪಂದ್ಯದಲ್ಲಿ ಭಾರತದ ಕಳಪೆ ಬ್ಯಾಟಿಂಗ್​ನಿಂದಾಗಿ ವಿಂಡೀಸ್​ 6 ವಿಕೆಟ್​ಗಳ ಗೆಲುವು ಸಾಧಿಸಿತು. ಈ ಮೂಲಕ ಭಾರತದ ವಿರುದ್ಧ 2019ರ ಬಳಿಕ ಮೊದಲ, ತವರಿನಲ್ಲಿ 6 ವರ್ಷಗಳ ನಂತರ ಪ್ರಥಮ ಗೆಲುವು ದಾಖಲಿಸಿದೆ.

ಮೊದಲು ಬ್ಯಾಟ್​ ಮಾಡಿದ ಭಾರತ ಹಲವು ಬಾರಿ ಮಳೆ ಅಡ್ಡಿ ನಡುವೆ ಬ್ಯಾಟಿಂಗ್​ ವೈಫಲ್ಯ ಕಂಡು 40.5 ಓವರ್​ಗಳಲ್ಲಿ ಕೇವಲ 181 ರನ್​ ಮಾತ್ರ ಗಳಿಸಿತು. ಇದಕ್ಕುತ್ತರವಾಗಿ ಕೆರಿಬಿಯನ್​ ತಂಡದ ನಾಯಕ ಶಾಯ್​ ಹೋಪ್​ರ ಅಜೇಯ ಅರ್ಧಶತಕ ಬಲದಿಂದ ನಿರಾಯಾಸವಾಗಿ 36.4 ಓವರ್​ಗಳಲ್ಲಿ 4 ವಿಕೆಟ್​ಗೆ ನಷ್ಟಕ್ಕೆ ಗುರಿ ದಾಟಿ ಸರಣಿಯನ್ನು 1-1ರಲ್ಲಿ ಸಮಬಲ ಮಾಡಿಕೊಂಡಿತು.


Spread the love

About Laxminews 24x7

Check Also

ಬೈಲಹೊಂಗಲದಲ್ಲಿ ಇದ್ದಾರೆ ‘ಹತ್ತು ರೂಪಾಯಿ’ ಡಾಕ್ಟ್ರು

Spread the love ಬೈಲಹೊಂಗಲ: ಇದು ದುಬಾರಿ ಯುಗ. ಇಂದು ಬಹುತೇಕ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಶುಲ್ಕ ಜನರ ಕೈಸುಡುತ್ತಿದೆ. ಆದರೆ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ