ಬೆಂಗಳೂರು : ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಶನಿವಾರ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಸಭೆಯ ನೇತೃತ್ವವನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಲೋಕಸಭಾ ಚುನಾವಣಾ ಉಸ್ತುವಾರಿ ವಿನೋದ್ ತಾವ್ಡೆ ವಹಿಸಿಕೊಂಡಿದ್ದರು. ಬೆಂಗಳೂರಿನ 3 ಲೋಕಸಭೆ ಕ್ಷೇತ್ರಗಳ ಸಿದ್ಧತೆ, ಪಕ್ಷ ಸಂಘಟನೆ ಮತ್ತು ಮೋದಿ ಸರ್ಕಾರದ ಸಾಧನೆಯನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಸಲಹೆ, ಸೂಚನೆಗಳನ್ನು ನೀಡಲಾಯಿತು.
ಬಳಿಕ ಮಾತನಾಡಿದ ವಿನೋದ್ ತಾವ್ಡೆ, “ಲೋಕಸಭಾ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಕೇಂದ್ರ ನಾಯಕರು, ರಾಜ್ಯ ನಾಯಕರು ಪಂಚಾಯತ್ ಮಟ್ಟದಿಂದ ಪಕ್ಷ ಕಟ್ಟುತ್ತಿದ್ದೇವೆ. ಬೆಂಗಳೂರಿನ ಮೂರು ಕ್ಷೇತ್ರದ ಬಿಜೆಪಿ ಮುಖಂಡರಿಗೆ ಈಗಾಗಲೇ ಸಿದ್ಧತೆಗಳ ಬಗ್ಗೆ ಸಲಹೆ, ಸೂಚನೆಗಳನ್ನು ನೀಡಲಾಗಿದೆ” ಎಂದರು.
Laxmi News 24×7