Breaking News

ಕ. ಸಾ.ಪ.​ ವತಿಯಿಂದ ನೀಡಲಾಗುವ ಡಾ.ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.

Spread the love

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್​ 2018, 2019, 2020, 2021, 2022 ಹಾಗೂ 2023ನೇ ಸಾಲಿನ ಡಾ.ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.

ದಲಿತ ಸಾಹಿತ್ಯದಲ್ಲಿ ಗಣನೀಯ ಸಾಧನೆ ಮಾಡಿದ ಸಾಹಿತ್ಯ ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಕಳೆದ 6 ವರ್ಷಗಳಿಂದ ಈ ಪ್ರಶಸ್ತಿಯನ್ನು ಪ್ರದಾನ ಮಾಡದಿರುವುದರಿಂದ ಈ ಬಾರಿ 6 ಮಂದಿ ಸಾಧಕರಿಗೆ ಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2018ನೇ ಸಾಲಿನ ʻಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿʼ ಪ್ರಶಸ್ತಿಗಾಗಿ ದಲಿತ ಸಾಹಿತ್ಯ ಕ್ಷೇತ್ರದಲ್ಲಿ ಅಗಣಿತ ಸಾಧನೆ ಮಾಡಿರುವ ಕೋಲಾರದ ಕೋಟಿಗಾನಹಳ್ಳಿ ರಾಮಯ್ಯ, 2019ನೇ ಸಾಲಿನ ಪ್ರಶಸ್ತಿಗೆ ಕಲಬುರಗಿಯ ಡಾ. ಎಚ್.ಟಿ. ಪೋತೆ, 2020ನೇ ಸಾಲಿನ ಪ್ರಶಸ್ತಿಗಾಗಿ ವಿಜಯಪುರದ ಇಂದುಮತಿ ಲಮಾಣಿ, 2021ನೇ ಸಾಲಿನ ಪ್ರಶಸ್ತಿಗಾಗಿ ಬೆಂಗಳೂರಿನ ಡಾ. ಕಾ.ವೆಂ. ಶ್ರೀನಿವಾಸಮೂರ್ತಿ, 2022ನೇ ಸಾಲಿನ ಪ್ರಶಸ್ತಿಗಾಗಿ ಗದಗದ ಡಾ. ಅರ್ಜುನ ಗೊಳಸಂಗಿ ಹಾಗೂ 2023ನೇ ಸಾಲಿನ ಪ್ರಶಸ್ತಿಯನ್ನು ಹಾಸನದ ನಾಗರಾಜ ಹೆತ್ತೂರು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಹೇಶ ಜೋಶಿ ಮಾಹಿತಿ ನೀಡಿದ್ದಾರೆ.

 


Spread the love

About Laxminews 24x7

Check Also

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರ ನದಿಗೆ ತ್ಯಾಜ್ಯ ಬಿಸಾಡಿದರೆ ಬೀಳುತ್ತೆ ದಂಡ

Spread the loveಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಕುಕ್ಕೆಯ ಕುಮಾರಧಾರ ನದಿಯ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಹಾಗೂ ಪೊಲೀಸ್ ಇಲಾಖೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ