Breaking News

ಅಕ್ರಮವಾಗಿ ಪಿಸ್ತೂಲ್ ಅನ್ನು ವಶದಲ್ಲಿರಿಸಿಕೊಂಡು ತಿರುಗಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Spread the love

ಮಂಗಳೂರು (ದಕ್ಷಿಣ ಕನ್ನಡ): ಅಕ್ರಮವಾಗಿ ಪಿಸ್ತೂಲ್​ ಅನ್ನು ವಶದಲ್ಲಿರಿಸಿಕೊಂಡು ತಿರುಗಾಡುತ್ತಿದ್ದ ಹಳೆಯ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮಿಯಾಪದವು, ಚಿಗುರುಪಾದೆಯ ಅಬ್ಬಾಸ್ ಯಾನೆ ಬೆಡಿ ಅಬ್ಬಾಸ್ (61) ಮತ್ತು ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಪೈವಳಿಕೆಯ ಯಶವಂತ್ ಕುಮಾರ್ (45) ಬಂಧಿತರು.

ಪಿಸ್ತೂಲ್​ ಹಿಡಿದುಕೊಂಡು ತಿರುಗಾಡುತ್ತಿದ್ದ ಆರೋಪಿಗಳು: ಈ ಇಬ್ಬರು ಆರೋಪಿಗಳು ಮಂಗಳೂರು ತಾಲೂಕು ಬಜಪೆ ಗ್ರಾಮದ ಒಡ್ಡಿದಕಲ ಎಂಬಲ್ಲಿ ಬೈಕ್​ನಲ್ಲಿ ಯಾವುದೇ ಪರವಾನಗಿ ಇಲ್ಲದೇ ಅಕ್ರಮವಾಗಿ ಮಾರಕಾಯುಧವಾದ ಪಿಸ್ತೂಲ್ ಅನ್ನು ವಶದಲ್ಲಿರಿಸಿಕೊಂಡು ತಿರುಗಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಅಕ್ರಮ ಪಿಸ್ತೂಲ್ ಹೊಂದಿದ ಇಬ್ಬರನ್ನು ಬಂಧಿಸಿದ್ದಾರೆ. ಅವರಿಂದ 1 ಪಿಸ್ತೂಲ್, 2 ಮೊಬೈಲ್ ಫೋನುಗಳು ಹಾಗೂ ಹೀರೋ ಹೊಂಡಾ ಫ್ಯಾಶನ್ ಪ್ಲಸ್ ಬೈಕ್ ಅನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ರೂ. 1 ಲಕ್ಷದ 45 ಸಾವಿರ ರೂಪಾಯಿ ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ