Breaking News

ಮಳೆ ಹೆಚ್ಚಿರುವ ಕಾರಣ ಇಂದಿನಿಂದ ಕೊಡಚಾದ್ರಿ ಬೆಟ್ಟಕ್ಕೆ ಪ್ರವೇಶ ನಿಷೇಧ

Spread the love

ಶಿವಮೊಗ್ಗ: ಮುಂಗಾರು ಮಳೆ ಹೆಚ್ಚಿರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಪ್ರಮುಖ ಜಲಪಾತ, ಸಫಾರಿ ಮತ್ತು ಚಾರಣ ತಾಣಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಕುದುರೆಮುಖದ ವನ್ಯಜೀವಿ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ರಾಜ್ಯದ ಪ್ರಸಿದ್ಧ ಧಾರ್ಮಿಕ ಹಾಗೂ ಚಾರಣ ತಾಣವಾದ ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಯ ಗಡಿಭಾಗವಾದ ಕೊಡಚಾದ್ರಿ ಬೆಟ್ಟಕ್ಕೂ ಪ್ರವೇಶ ನಿಷೇಧಿಸಲಾಗಿದೆ.

ಮುಂಗಾರು ಮಳೆ ತೀವ್ರಗೊಂಡಿದ್ದು, ‌ಜಲಪಾತಗಳ ವೀಕ್ಷಣೆಗೆ ಹೆಚ್ಚಿನ ಪ್ರವಾಸಿಗರು ಬರುವ ಸಾಧ್ಯತೆ ಇದೆ. ಪ್ರವಾಸಿಗರು ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಕೊಡಚಾದ್ರಿ ಮತ್ತು ಇತರ ತಾಣಗಳ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಕೊಡಚಾದ್ರಿ ಬೆಟ್ಟದ ಜೊತೆಗೆ ಸ್ಥಳೀಯ ಜಲಪಾತಗಳಿಗೂ ಪ್ರವೇಶ ಸಹ‌ ನಿಷೇಧವಿದೆ. ಕೊಡಚಾದ್ರಿಗೆ ನಿಷೇಧ ಹೇರಿರುವುದರಿಂದ ಸ್ಥಳೀಯ ವ್ಯಾಪಾರಿಗಳಿಗೆ ಹಾಗೂ ಜೀಪ್ ಚಾಲಕರಿಗೆ ತೀವ್ರ ತೊಂದರೆ ಉಂಟಾಗಿದೆ.

 ಕೊಡಚಾದ್ರಿ, ಫಾಲ್ಸ್, ಚಾರಣ ತಾಣಗಳ ಪ್ರವೇಶ ನಿಷೇಧಈ ಜಲಪಾತಗಳ ವೀಕ್ಷಣೆಗೂ ನಿರ್ಬಂಧ: ಮುನ್ನೆಚ್ಚರಿಕಾ ಕ್ರಮವಾಗಿ ಈ ವಲಯದಲ್ಲಿರುವ ಅರಿಶಿನಗುಂಡಿ, ಕೂಡ್ಲು, ಬರ್ಕಳ, ಹಿಡ್ಲುಮನೆ, ವನಕಬ್ಬಿ, ಬಂಡಾಜೆ ಜಲಪಾತ್ರಗಳ ಪ್ರವೇಶಕ್ಕೂ ನಿರ್ಬಂಧ ವಿಧಿಸಲಾಗಿದೆ.


Spread the love

About Laxminews 24x7

Check Also

ಗರ್ಲಗುಂಜಿಯಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನಿಂದ ವೃಕ್ಷಾರೋಪಣ…

Spread the love ಗರ್ಲಗುಂಜಿಯಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನಿಂದ ವೃಕ್ಷಾರೋಪಣ… ಪರಿಸರ ಜಾಗೃತಿಯ ಸಂದೇಶ ಖಾನಾಪೂರ ತಾಲೂಕಿನ ಗರ್ಲಗುಂಜಿ ಗ್ರಾಮದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ