Breaking News

ಮೆಹ್ರಮ್ ಇಲ್ಲದೆ 4 ಸಾವಿರ ಮುಸ್ಲಿಂ ಮಹಿಳೆಯರ ಹಜ್ ಯಾತ್ರೆ: ಮೋದಿ ಮೆಚ್ಚುಗೆ

Spread the love

ನವದೆಹಲಿ: ಈ ವರ್ಷ ನಾಲ್ಕು ಸಾವಿರಕ್ಕೂ ಹೆಚ್ಚು ಮುಸ್ಲಿಂ ಮಹಿಳೆಯರು ಮೆಹ್ರಮ್ (ಪುರುಷರ ನೆರವಿಲ್ಲದೆ) ಇಲ್ಲದೆ ಹಜ್ ಯಾತ್ರೆ ಕೈಗೊಂಡಿರುವುದು ಅತಿ ದೊಡ್ಡ ಪರಿವರ್ತನೆಯಾಗಿದೆ.

ಕಳೆದ ಕೆಲವು ವರ್ಷಗಳಿಂದ ತಮ್ಮ ಸರ್ಕಾರವು ಹಜ್ ನೀತಿಯಲ್ಲಿ ಮಾಡಿದ ಬದಲಾವಣೆಗಳಿಂದ ಹೆಚ್ಚು ಹೆಚ್ಚು ಜನರು ವಾರ್ಷಿಕ ಯಾತ್ರೆಗೆ ಹೋಗಲು ಅವಕಾಶವನ್ನು ಪಡೆಯುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇಂದು ರೆಡಿಯೋದಲ್ಲಿ ಪ್ರಸಾರವಾದ ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮೋದಿ, ಪುರುಷರ ನೆರವಿಲ್ಲದೆ (ಮೆಹ್ರಮ್) ಈ ವರ್ಷ ಹಜ್ ಯಾತ್ರೆ ಕೈಗೊಂಡ ಮುಸ್ಲಿಂ ಮಹಿಳೆಯರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮುಸ್ಲಿಂ ಮಹಿಳೆಯರ ಈ ಪ್ರಯಾಣವು ಹಲವು ವಿಧಗಳಲ್ಲಿ ಬಹಳ ವಿಶೇಷವಾಗಿದೆ. ಯಾವುದೇ ಪುರುಷ ಸಹಚರ ಅಥವಾ ಮೆಹ್ರಮ್ ಇಲ್ಲದೆ ಹಜ್ ಯಾತ್ರೆ ಮಾಡಿದ ಮಹಿಳೆಯರು ಮತ್ತು ಸಂಖ್ಯೆ 50 ಅಥವಾ 100 ಅಲ್ಲ. ಅದು 4,000ಕ್ಕಿಂತ ಹೆಚ್ಚು. ಇದೊಂದು ದೊಡ್ಡ ಪರಿವರ್ತನೆಯಾಗಿದೆ ಎಂದು ಬಣ್ಣಿಸಿದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ