Breaking News

ರಾಜ್ಯದಲ್ಲಿ ಶಕ್ತಿ ಯೋಜನೆಯಿಂದ ಆರ್ಥಿಕ ಸಂಕಷ್ಟ ಮತ್ತು ಹಲವು ಸಮಸ್ಯೆಗೆ ಕಾರಣವಾಗುತ್ತಿದೆ ಎಂದು ಕಾನೂನು ವಿದ್ಯಾರ್ಥಿಗಳಿಂದ ಪಿಐಎಲ್​

Spread the love

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರಿಗೆ ಕಲ್ಪಿಸಿರುವ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸುವ ಶಕ್ತಿ ಯೋಜನೆಯಿಂದ ಆರ್ಥಿಕ ಸಂಕಷ್ಟದ ಜೊತೆಗೆ ದಿನನಿತ್ಯ ಆವಾಂತರಗಳಿಗೆ ಕಾರಣವಾಗುತ್ತಿದೆ ಎಂದು ಆಕ್ಷೇಪಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ಬೆಂಗಳೂರಿನ ವಿವಿಧ ಕಾನೂನು ಕಾಲೇಜುಗಳ ಕಾನೂನು ವಿದ್ಯಾರ್ಥಿಗಳಾದ ಅಶ್ವಿನ್ ಶಂಕರ್ ಭಟ್, ನೇಹಾ ವೆಂಕಟೇಶ್ ಹಾಗೂ ಯಾಶಿಕಾ ಸರವಣ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿಯಲ್ಲಿ ಸಾರಿಗೆ ಇಲಾಖೆ, ಕೆಎಸ್‌ಆರ್‌ಟಿ, ಬಿಎಂಟಿಸಿ, ಎನ್‌ಡಬ್ಲ್ಯೂ ಕೆಎಸ್‌ಆರ್‌ಟಿ, ಕೆಕೆಆರ್‌ಟಿಸಿ ಈ ನಾಲ್ಕು ಸಾರಿಗೆ ನಿಗಮಗಳನ್ನು ಅರ್ಜಿಯಲ್ಲಿ ಪ್ರತಿವಾದಿಯನ್ನಾಗಿ ಮಾಡಲಾಗಿದ್ದು, ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಶಕ್ತಿ ಯೋಜನೆ ಜಾರಿಗೆ ಬಂದಾಗಿನಿಂದ ಬಸ್‌ಗಳಲ್ಲಿ ಜನದಟ್ಟಣೆ ಹೆಚ್ಚಾಗಿದೆ. ಬಸ್‌ಗಳಲ್ಲಿ ಸೀಟು ಪಡೆದುಕೊಳ್ಳಲು ಗಲಾಟೆ, ಹೊಡೆದಾಟ ಸಂಭವಿಸಿದ ಘಟನೆಗಳು ನಡೆದಿವೆ. ಹಿರಿಯ ನಾಗರಿಕರು, ಮಕ್ಕಳು ಬಸ್‌ಗಳಲ್ಲಿ ಹತ್ತಲು ಆಗುತ್ತಿಲ್ಲ. ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ಶಾಲಾ-ಕಾಲೇಜು ತಲುಪಲು ಆಗುತ್ತಿಲ್ಲ. ಇದರಿಂದ ಬಸ್ ಹಾಗೂ ಬಸ್ ನಿಲ್ದಾಣಗಳಲ್ಲಿ ಅನುಚಿತ ವರ್ತನೆ, ಅಹಿತಕರ ಘಟನೆಗಳು ನಡೆಯುತ್ತಿವೆ. ಬಸ್ ನಿಲ್ದಾಣ ಮತ್ತು ಸರ್ಕಾರಿ ಬಸ್‌ಗಳು ಯುದ್ಧ ಭೂಮಿ, ಮೀನು ಮಾರುಕಟ್ಟೆ ಆಗಿವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಯೋಜನೆ ಜಾರಿಗೆ ಬಂದ ದಿನದಿಂದ ಮೂರು ಕೋಟಿ ಮಹಿಳೆಯರು ಉಚಿತವಾಗಿ ಬಸ್‌ಗಳಲ್ಲಿ ಪ್ರಯಾಣ ಮಾಡಿದ್ದಾರೆ. ಇದರಿಂದ ವಾರಕ್ಕೆ 100 ಕೋಟಿ ರೂ. ತೆರಿಗೆದಾರರ ಹಣ ಸರ್ಕಾರಕ್ಕೆ ನಷ್ಟವಾಗುತ್ತಿದೆ. ಈ ಯೋಜನೆಗೆ ವಾರ್ಷಿಕ 3,200ರಿಂದ 3,400 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಜತೆಗೆ, ಶಾಲಾ ಮಕ್ಕಳು ಹಿರಿಯ ನಾಗರಿಕರಿಗೆ ಬಸ್ ಹತ್ತಿ-ಇಳಿಯಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ದೂರದ ಊರಿಗಳಿಗೆ ತೆರಳುವ ಬಸ್‌ಗಳಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರಿಗೆ ಬಸ್‌ಗಳಲ್ಲಿ ಹತ್ತಲು ಮೊದಲು ಅವಕಾಶ ಮಾಡಿಕೊಡಬೇಕು. ದೂರದ ಊರುಗಳಿಗೆ ನಿಂತು ಪ್ರಯಾಣಿಸುವುದನ್ನು ನಿಷೇಧಿಸಬೇಕು. ಟಿಕೆಟ್ ಪಡೆದವರಿಗೆ ಶೇ.50ರಷ್ಟು ಸೀಟುಗಳನ್ನು ಮೀಸಲಿಡಬೇಕು. ಕಿಟಕಿ ಹಾಗೂ ಚಾಲಕರ ದ್ವಾರದ ಮೂಲಕ ಪ್ರಯಾಣಿಕರು ಹತ್ತುವುದನ್ನು ನಿರ್ಬಂಧಿಸಬೇಕು. ಶಾಲಾ ಮಕ್ಕಳಿಗೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.


Spread the love

About Laxminews 24x7

Check Also

ಏರ್​ಗನ್​ನಿಂದ ಹಾರಿದ ಗುಂಡು: ಶಿರಸಿಯಲ್ಲಿ 9 ವರ್ಷದ ಬಾಲಕ ಸಾವು

Spread the love ಶಿರಸಿ(ಉತ್ತರಕನ್ನಡ): ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾಲಕನ ಕೈಯ್ಯಿಂದ ಏರ್​ಗನ್​ ಗುಂಡು ಹಾರಿ ಇನ್ನೊಂದು ಬಾಲಕ ಮೃತಪಟ್ಟ ಹೃದಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ