Breaking News

ಎಸ್‌ಸಿಎಸ್‌ಪಿ/ಟಿಎಸ್‌ಪಿ ಅಡಿ 4030 ಕೋಟಿ ರೂ. ಅನುದಾನ ಹೆಚ್ಚಳ: H.C. ಮಹದೇವಪ್ಪ

Spread the love

ಬೆಂಗಳೂರು : ಎಸ್​ಸಿಎಸ್​ಪಿ/ಟಿಎಸ್​ಪಿ ಅಧಿನಿಯಮ, 2013ರಡಿ ಹಂಚಿಕೆಯಾಗುವ ಅನುದಾನ ಆ ಸಮುದಾಯಗಳ ಒಳಿತಿಗಾಗೇ ಬಳಕೆಯಾಗಬೇಕೆಂಬುದು ಬಹಳ ವರ್ಷಗಳ ಬೇಡಿಕೆ.

ಕಾಯ್ದೆಯಲ್ಲಿನ ಸಣ್ಣ ಲೋಪವನ್ನು ಬಳಸಿಕೊಂಡು ಅನ್ಯ ಉದ್ದೇಶಕ್ಕೆ ಬಳಸಿಕೊಳ್ಳಲಾಗುತ್ತಿತ್ತು. ಇದೀಗ ಕಾಯ್ದೆ ಸೆಕ್ಷನ್ 7(ಡಿ) ಕೈಬಿಡುವ ಮೂಲಕ ಅನುದಾನವನ್ನು ಆ ಸಮುದಾಯಗಳಿಗೆ ಖರ್ಚು ಮಾಡಬೇಕೆಂಬ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆ ನಡೆದಿದೆ ಎಂದು ಸಮಾಜ ಕಲ್ಯಾಣ ಸಚಿವ ಹೆಚ್ ಸಿ ಮಹದೇವಪ್ಪ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಅನುಸೂಚಿತ ಜಾತಿ/ ಅನುಸೂಚಿತ ಬುಡಕಟ್ಟುಗಳ ರಾಜ್ಯ ಅಭಿವೃದ್ಧಿ ಪರಿಷತ್‌ ಸಭೆ ನಡೆಯಿತು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, 2023-24ನೇ ಸಾಲಿನ ಎಸ್​ಸಿಎಸ್​ಪಿ/ಟಿಎಸ್​ಪಿ ಅಡಿ 34,293.69 ಕೋಟಿ ರೂ. ಗಳ ಕ್ರಿಯಾ ಯೋಜನೆ ಅನುಮೋದನೆ ನೀಡಲಾಗಿದೆ. ಯೋಜನಾ ವೆಚ್ಚಕ್ಕೆ ಅನುಗುಣವಾಗಿ ಎಸ್‌ಸಿ, ಎಸ್‌ಟಿ ಸಮುದಾಯಗಳ ಅಭಿವೃದ್ಧಿಗೆ ಅ‌ನುದಾನ ಮೀಸಲಿಡಲು ಈ ಹಿಂದೆಯೇ ನಿರ್ಧರಿಸಲಾಗಿತ್ತು. ಎಸ್‌ಸಿಎಸ್‌ಪಿ/ಟಿಎಸ್‌ಪಿ ವಿಶೇಷ ಉಪಯೋಜನೆಯಡಿ ಅನುದಾನ ದುರ್ಬಳಕೆ ಆಗುತ್ತಿತ್ತು. ಬೇರೆ ಬೇರೆ ವಲಯಗಳಿಗೂ ಈ ಅನುದಾನ ಬಳಸಲಾಗಿತ್ತು.

ಇದೀಗ ಬಜೆಟ್‌ನಲ್ಲಿ ಈ ಯೋಜನೆಗಳಡಿ ಬೇರೆ ವಲಯಗಳಿಗೆ ಅನುದಾನ ಬಳಸಿಕೊಳ್ಳುವುದಕ್ಕೆ‌ ನಿರ್ಬಂಧ ಹಾಕಲಾಗಿದೆ. ಇದಕ್ಕಾಗಿ ಈ ಯೋಜನೆಯಲ್ಲಿ ಬರುವ 7ಡಿ ನಿಯಮ ರದ್ದು ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಕಾಯ್ದೆ ಜಾರಿಗೆ ತರುವ ಹಿಂದೆ ಮುಖ್ಯಮಂತ್ರಿಗಳ ಸಾಮಾಜಿಕ ಬದ್ಧತೆಯನ್ನು ಅರ್ಥ ಮಾಡಿಕೊಳ್ಳಬೇಕು. ಮುಖ್ಯಮಂತ್ರಿಗಳ ಮತ್ತು ಕಾಯ್ದೆಯ ಆಶಯ, ಉದ್ದೇಶಕ್ಕೆ ಧಕ್ಕೆ ಆಗದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಇದೇ ವೇಳೆ ಅಧಿಕಾರಿಗಳಿಗೆ ಸೂಚಿಸಿದರು.

 


Spread the love

About Laxminews 24x7

Check Also

ಭೋವಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ: ಅಧ್ಯಕ್ಷ ರವಿಕುಮಾರ್‌ ಕೊನೆಗೂ ರಾಜೀನಾಮೆ

Spread the loveಬೆಂಗಳೂರು, (ಸೆಪ್ಟೆಂಬರ್ 05): ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ (Bhovi Development Corporation) ಅಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ