Breaking News

ಸಮೃದ್ಧಿ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಕಾರ್ಯದ ವೇಳೆ ಗರ್ಡರ್ ಬಿದ್ದು ಸಾವು ನೋವು

Spread the love

ಮಹಾರಾಷ್ಟ್ರ: ಸಮೃದ್ಧಿ ಹೆದ್ದಾರಿಯಲ್ಲಿ ಗರ್ಡರ್‌ಗಳನ್ನು ಅಳವಡಿಸುವಾಗ ದುರಂತ ಸಂಭವಿಸಿದೆ. ಫ್ಲೈಓವರ್ ಗರ್ಡರ್ ಲಾಂಚಿಂಗ್ ಮಷಿನ್ ಕುಸಿದು 14 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಥಾಣೆ ಜಿಲ್ಲೆಯ ಶಹಪುರದ ಸರ್ಲಾಂಬೆ ಗ್ರಾಮದಲ್ಲಿ6 ಪಥಗಳ ಸಮೃದ್ಧಿ ಎಕ್ಸ್‌ಪ್ರೆಸ್ ಹೆದ್ದಾರಿಯ ಮೂರನೇ ಹಂತದ ನಿರ್ಮಾಣದ ವೇಳೆ ಈ ದುರಂತ ಘಟನೆ ನಡೆದಿದೆ.

ಶಹಾಪುರ ತಾಲೂಕಿನಲ್ಲಿ ಮುಂಬೈ ನಾಗಪುರ ಸಮೃದ್ಧಿ ಹೆದ್ದಾರಿಯ ಅಂತಿಮ ಹಂತದ ಕಾಮಗಾರಿ ನಡೆಯುತ್ತಿರುವಾಗಲೇ ಗರ್ಡರ್ ಕೆಲಸ ಮಾಡುತ್ತಿದ್ದ ಕಾರ್ಮಿಕರು ಗರ್ಡರ್ ಲಾಂಚರ್ ಮಷಿನ್ ಸಹಿತ ಕುಸಿದು ಬಿದ್ದಿದ್ದಾರೆ. ಈ ಭೀಕರ ಅಪಘಡದಲ್ಲಿ ಈವರೆಗೆ 14 ಮಂದಿ ಕಾರ್ಮಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೂವರು ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಶಹಾಪುರ ತಾಲೂಕಿನ ಮುಂಬೈ ನಾಸಿಕ್ ಹೆದ್ದಾರಿಯಿಂದ 5 ರಿಂದ 6 ಕಿ.ಮೀ ದೂರದಲ್ಲಿರುವ ಸರ್ಲಾಂಬೆ ಗ್ರಾಮದ ವ್ಯಾಪ್ತಿಯಲ್ಲಿ ಸಮೃದ್ಧಿ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ 17 ಕಾರ್ಮಿಕರು ಮತ್ತು 9 ಎಂಜಿನಿಯರ್‌ಗಳ ಸಮ್ಮುಖದಲ್ಲಿ ಕಾಮಗಾರಿ ನಡೆಯುತ್ತಿದ್ದಾಗ ಏಕಾಏಕಿ ಲಾಂಚರ್‌ ಮಷಿನ್​ ಕುಸಿದು ಬಿದ್ದಿದೆ. ಘಟನೆ ತಿಳಿದ ತಕ್ಷಣ ಗ್ರಾಮಸ್ಥರು ನೆರವಿಗೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ. ಬಳಿಕ ಸ್ಥಳೀಯ ಪೊಲೀಸರು ಹಾಗೂ ಹೆದ್ದಾರಿ ಆಡಳಿತ ಕಾರ್ಯಕರ್ತರು ಗರ್ಡರ್ ಅಡಿ ಸಿಲುಕಿದ್ದ ಕಾರ್ಮಿಕರನ್ನು ಕ್ರೇನ್ ಸಹಾಯದಿಂದ ಹೊರತೆಗೆದಿದ್ದು, ಇನ್ನೂ 4 ರಿಂದ 5 ಮಂದಿ ಕಾರ್ಮಿಕರು ಗರ್ಡರ್ ಅಡಿ ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ.


Spread the love

About Laxminews 24x7

Check Also

ಶಿಕ್ಷಕರ ದಿನಾಚರಣೆ ಅಂಗವಾಗಿ ಬೆಳಗಾವಿಯಲ್ಲಿ ನೆಡದ ಕಾರ್ಯಕ್ರಮ

Spread the love ಶಿಕ್ಷಕರ ದಿನಾಚರಣೆ ಅಂಗವಾಗಿ ಬೆಳಗಾವಿಯಲ್ಲಿ ನೆಡದ ಕಾರ್ಯಕ್ರಮ ಬೆಳಗಾವಿ ನಗರದಲ್ಲಿರುವ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ