Breaking News

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇವತ್ತು ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಂತೋಷ ಕಕಮರಿ 31 ಮತ ಪಡೆದು ಆಯ್ಕೆ

Spread the love

ಚಿಕ್ಕೋಡಿ: ರಾಜ್ಯದಲ್ಲೇ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆ ಪಡೆದಿರುವ ಸಂಕೋನಟ್ಟಿ ಗ್ರಾಪಂ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅಚ್ಚರಿಯ ಎಂಬಂತೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದು, ಸ್ಥಳೀಯ ಶಾಸಕರು ಹಾಗೂ ಕಾಂಗ್ರೆಸ್ ವಲಯಕ್ಕೆ ಭಾರಿ ನಿರಾಸೆ ಮೂಡಿಸಿದೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇವತ್ತು ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಂತೋಷ ಕಕಮರಿ 31 ಮತ ಪಡೆದು ಆಯ್ಕೆಯಾಗಿದ್ದಾರೆ, ಉಪಾಧ್ಯಕ್ಷರಾಗಿ ರೂಪಾಲಿ ಸೋನಕರ ಆಯ್ಕೆಗೊಂಡಿದ್ದಾರೆ.
56 ಸದಸ್ಯರ ಸ್ಥಾನ ಹೊಂದಿರುವ ಸಂಕೋನಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಬೆಂಬಲಿತ 48 ಸದಸ್ಯರನ್ನು ಶಾಸಕರ ಆಪ್ತರು ಮೂರು ದಿನಗಳಿಂದ ರೆಸಾರ್ಟ್ ನಲ್ಲಿ ಇರಿಸಿದ್ದರು.

ಇಂದು ನೇರವಾಗಿ ಸರ್ಕಾರಿ ಬಸ್​​ನ ಮೂಲಕ 48 ಸದಸ್ಯರನ್ನು ಮತಗಟ್ಟೆಗೆ ತಂದು ಕಾಂಗ್ರೆಸ್ ಅಭ್ಯರ್ಥಿ ಶಂಕರ ಗಡದೆ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವಂತೆ ಸೂಚನೆ ಕೂಡ ನೀಡಿದ್ದರು. ಆದರೆ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ರಮೇಶ್ ಜಾರಕಿಹೊಳಿ ಬೆಂಬಲಿಗ ಸಂತೋಷ್ ಕಕಮರಿ ಅವರನ್ನು ಆಯ್ಕೆ ಮಾಡಿ ಅಥಣಿ ಕಾಂಗ್ರೆಸ್ ವಲಯಕ್ಕೆ ಭಾರಿ ನಿರಾಸೆ ಮೂಡಿಸಿದ್ದಾರೆ.ಈ ಚುನಾವಣೆಯಲ್ಲಿ ಶಂಕರ್ ಗಡದೆ 24 ಮತವನ್ನು ಪಡೆದುಕೊಂಡ ಸೋಲು ಅನುಭವಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸೋಲಿನಿಂದ ಅಥಣಿ ಬಿಜೆಪಿ ವಲಯದಲ್ಲಿ ವಿಜಯೋತ್ಸವ ಆಚರಣೆ ಮಾಡಿ ಸಿಹಿ ಹಂಚಿ ಸಂಭ್ರಮಿಸಿದರು. ಅಥಣಿ ಮಾಜಿ ಶಾಸಕ ಮಹೇಶ ಕುಮಠಳ್ಳಿ ವಿಜಯೋತ್ಸವದಲ್ಲಿ ಭಾಗವಹಿಸಿ ನೂತನ ಅಧ್ಯಕ್ಷರಿಗೆ ಸನ್ಮಾನಿಸಿ ಶುಭಾಶಯವನ್ನು ಕೋರಿದರು.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ