Breaking News

ರಾಜ್ಯದಲ್ಲಿ ಆನ್​ಲೈನ್ ಗೇಮ್ ನಿಷೇಧಕ್ಕೆ ಚಿಂತನೆ: C.M.

Spread the love

ಮಂಗಳೂರು: ರಾಜ್ಯದಲ್ಲಿ ಆನ್​​ಲೈನ್ ಗೇಮ್ ನಿಷೇಧ ಮಾಡುವ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಆನ್​​ಲೈನ್ ಗೇಮ್​​ಗಳ ಮೂಲಕ ಸಾಕಷ್ಟು ಜನರು ಹಣವನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆನ್​​ಲೈನ್ ಗೇಮ್​ಗಳನ್ನು ನಿಷೇಧ ಮಾಡಲು ಚಿಂತಿಸಲಾಗಿದೆ ಎಂದರು.

ಮಂಗಳೂರಿನಲ್ಲಿ ಮಾದಕ ವಸ್ತು ಹಾವಳಿ ವಿಪರೀತ ಹೆಚ್ಚಾಗುತ್ತಿದೆ. ಈ ಬಗ್ಗೆ ಏನು ಕ್ರಮ ತೆಗೆದುಕೊಂಡಿದ್ದೀರಿ ಎಂದು ಪೊಲೀಸ್ ಆಯುಕ್ತರನ್ನು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಆಯುಕ್ತರ ಉತ್ತರದಿಂದ ಸಮಾಧಾನಗೊಳ್ಳದ ಮುಖ್ಯಮಂತ್ರಿಗಳು, ಗೂಂಡಾಕಾಯ್ದೆ ಅಡಿಯಲ್ಲಿ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಿದರು. ಅನೈತಿಕ ಪೊಲೀಸ್​​ಗಿರಿ ವಿಚಾರದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು. ಯಾವುದೇ ಗುಂಪು, ಯಾವುದೇ ಸಿದ್ಧಾಂತದವರು ಕಾನೂನು ಕೈಗೆತ್ತಿಕೊಂಡು ಅನೈತಿಕ ಪೊಲೀಸ್​ಗಿರಿ ನಡೆಸಿದರೆ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲು ಸ್ಪಷ್ಟ ಸೂಚನೆ ನೀಡಿದರು.

ಮಳೆಯಿಂದ ಪೂರ್ತಿ ಹಾನಿಯಾದ ಮನೆಗಳಿಗೆ 5 ಲಕ್ಷ ಪರಿಹಾರಕ್ಕೆ ಇಂದೇ ಆದೇಶ ಹೊರಡಿಸುತ್ತೇನೆ. ಮೊದಲಿದ್ದ ರೀತಿಯಲ್ಲೇ ಎ, ಬಿ, ಸಿ ಕೆಟಗರಿಯಲ್ಲಿ ವಿಂಗಡಿಸಿ ಪರಿಹಾರ ನೀಡುತ್ತೇವೆ. ಕಡಲಕೊರೆತಕ್ಕೆ ಶಾಶ್ವತ ಪರಿಹಾರಕ್ಕೆ ಕ್ರಮ ವಹಿಸಲು ತೀರ್ಮಾನಿಸಿದ್ದೇವೆ. ಕಡಲ ಕೊರೆತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳನ್ನು ಸೇರಿಸಿ ಸಮಗ್ರ ಚರ್ಚೆ ನಡೆಸಿ ಶಾಶ್ವತ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಭರವಸೆ ನೀಡಿದರು.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ