Breaking News

ಮಕ್ಕಳ ಅಶ್ಲೀಲ ಚಿತ್ರಗಳು ಮತ್ತು ಅತ್ಯಾಚಾರ ಘಟನೆಗಳಿಗೆ ಸಂಬಂಧಿಸಿದ ವಿಡಿಯೋಗಳ ಹರಡುವಿಕೆಯನ್ನು ತಡೆಯುವಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಗುರುತಿಸಿದೆ.

Spread the love

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳು ಮತ್ತು ಅತ್ಯಾಚಾರದ ವಿಡಿಯೋಗಳನ್ನು ಹರಡುವುದನ್ನು ನಿಯಂತ್ರಿಸಲು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಕ್ತಾಯಗೊಳಿಸಿದೆ. ಈ ಸಂಬಂಧ ಸುಪ್ರೀಂ ಕೋರ್ಟ್ ನೇಮಿಸಿದ್ದ ತಜ್ಞರ ಸಮಿತಿ ನೀಡಿದ ವರದಿಯನ್ನು ನ್ಯಾಯಾಲಯ ಪರಿಶೀಲಿಸಿದೆ. ತಜ್ಞರ ವರದಿ ಪರಿಶೀಲಿಸಿದ ಬಳಿಕ ಪ್ರಕರಣದ ತನಿಖೆಯನ್ನು ಮುಕ್ತಾಯಗೊಳಿಸಲಾಗಿದೆ ಎಂದು ಸುಪ್ರೀಂ ಕೋರ್ಟ್​ ತನ್ನ ಆದೇಶದಲ್ಲಿ ತಿಳಿಸಿದೆ.

2015 ರಲ್ಲಿ, ವಾಟ್ಸ್​ಆಯಪ್​ ಸೇರಿದಂತೆ ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಮಕ್ಕಳ ಅಶ್ಲೀಲತೆ ಮತ್ತು ಅತ್ಯಾಚಾರದ ವಿಡಿಯೋಗಳು ವ್ಯಾಪಕವಾಗಿ ಹರಡುತ್ತಿರುವ ಬಗ್ಗೆ ‘ಪ್ರಜ್ವಲ’ ಎಂಬ ಎನ್‌ಜಿಒ ಅಂದಿನ ಸಿಜೆಐ ಎಚ್‌ಎಲ್ ದತ್ತು ಅವರಿಗೆ ಪತ್ರ ಬರೆದಿತ್ತು. ಈ ಪತ್ರದ ಆಧಾರದ ಮೇಲೆ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಪಿಐಎಲ್ ಸಲ್ಲಿಸಿ ವಿಚಾರಣೆಯನ್ನು ಕೈಗೆತ್ತಿಕೊಂಡಿತು. ಈ ಆದೇಶದಲ್ಲಿ, ವಿಡಿಯೋಗಳ ಹರಡುವಿಕೆಯನ್ನು ತಡೆಯಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ತಜ್ಞರ ಸಮಿತಿಯನ್ನು ಸಹ ರಚಿಸಿತ್ತು. ಆ ಸಮಿತಿಯ ಕಾರ್ಯವೈಖರಿಯನ್ನು ನ್ಯಾಯಾಲಯವು ಕಾಲಕಾಲಕ್ಕೆ ಪರಿಶೀಲಿಸುತ್ತಿತ್ತು.

ಫೇಸ್‌ಬುಕ್ ಮತ್ತು ವಾಟ್ಸ್​​ಆಯಪ್​ ಸೇರಿದಂತೆ ಸಾಮಾಜಿಕ ಮಾಧ್ಯಮಗಳ ಪ್ರತಿನಿಧಿಗಳು, ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ, ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ ಮಹಾನಿರ್ದೇಶಕರು, ಸುಪ್ರೀಂ ಕೋರ್ಟ್ ನೇಮಿಸಿದ ಅಮಿಕಸ್ ಕ್ಯೂರಿ ಮತ್ತು ಇತರರು ಈ ಸಮಿತಿಯ ಸದಸ್ಯರಾಗಿದ್ದಾರೆ. ಸಮಿತಿಯು ಇತ್ತೀಚೆಗೆ ನ್ಯಾಯಾಲಯಕ್ಕೆ ತನ್ನ ವರದಿಯನ್ನು ಸಲ್ಲಿಸಿದೆ. ಪರಿಶೀಲಿಸಿದ ನ್ಯಾಯಮೂರ್ತಿ ಬಿ.ಆರ್.ಗವಾಯಿ ಹಾಗೂ ನ್ಯಾಯಮೂರ್ತಿ ವಿಕ್ರಮ್ ನಾಥ್ ಅವರಿದ್ದ ವಿಭಾಗೀಯ ಪೀಠ, ಈ ವಿಶಾಲ ವಿಚಾರದಲ್ಲಿ ಒಮ್ಮತಕ್ಕೆ ಬಂದಿರುವುದಾಗಿ ಹೇಳಿದೆ.

 


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ