Home / ರಾಜಕೀಯ / 15 ತಿಂಗಳಿನಿಂದ ಅಂಗನವಾಡಿ ಕೇಂದ್ರಗಳ ಇಲಾಖೆಯಿಂದ ಬಾಡಿಗೆ ಹಣ ಬಂದಿಲ್ಲ.

15 ತಿಂಗಳಿನಿಂದ ಅಂಗನವಾಡಿ ಕೇಂದ್ರಗಳ ಇಲಾಖೆಯಿಂದ ಬಾಡಿಗೆ ಹಣ ಬಂದಿಲ್ಲ.

Spread the love

ಬೆಳಗಾವಿ: 15 ತಿಂಗಳಿನಿಂದ ಬಾಕಿಯಿರುವ ಅಂಗನವಾಡಿ ಕೇಂದ್ರಗಳ ಬಾಡಿಗೆ ನೀಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು) ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

1975ರಲ್ಲಿ ಪ್ರಾರಂಭವಾದ ICDS ಯೋಜನೆಯಡಿ ಸುಮಾರು 30 ರಿಂದ 40 ವರ್ಷಗಳಿಂದ ಗೌರವಧನದ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಅಂಗನವಾಡಿ ನೌಕರರ ಜೀವನ ಕಷ್ಟಕರವಾಗಿದೆ. ಗರ್ಭಿಣಿ, ಬಾಣಂತಿಯರ ಆರೈಕೆ, 3 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡುವುದು, ಪೌಷ್ಟಿಕ ಆಹಾರ ನೀಡುವುದಕ್ಕಾಗಿ ಈ ಯೋಜನೆ ಜಾರಿಗೆ ತರಲಾಗಿದೆ. ಆದರೆ ಕಳೆದ ಹಲವಾರು ವರ್ಷಗಳಿಂದ ಸರ್ಕಾರದ ಹಲವಾರು ಯೋಜನೆಗಳಲ್ಲಿ ಅಂಗನವಾಡಿ ನೌಕರರನ್ನು ದುಡಿಸಿಕೊಳ್ಳುತ್ತಿದ್ದಾರೆ. ಅದನ್ನು ಪ್ರಶ್ನಿಸಿದರೆ ಕೆಲಸದಿಂದ ತೆಗೆದು ಹಾಕುತ್ತೇವೆಂದು ಅಧಿಕಾರಿಗಳು ಹೆದರಿಸುತ್ತಿದ್ದಾರೆ ಎಂದು ಪ್ರತಿಭಟನಾ ನಿರತರು ಆರೋಪಿಸಿದರು.

ಸ್ವಂತ ಕಟ್ಟಡವಿಲ್ಲದ ಕಾರಣ ಗುಡಿ ಗುಂಡಾರಗಳಲ್ಲಿ ಅಂಗನವಾಡಿ ಕೇಂದ್ರಗಳು ನಡೆಯುತ್ತಿದ್ದವು. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದಾಗ ಬಾಡಿಗೆ ಕಟ್ಟಡ ಪಡೆದು ಅಂಗನವಾಡಿ ಕೇಂದ್ರ ನಡೆಸುವಂತೆ ಅಧಿಕಾರಿಗಳು ಸೂಚಿಸಿದ್ದರು. ಆ ಪ್ರಕಾರ ಬಾಡಿಗೆ ಕಟ್ಟಡದಲ್ಲಿ ಕೇಂದ್ರ ನಡೆಸುತ್ತಿದ್ದೆವು. ಆದರೆ ಕಳೆದ 15 ತಿಂಗಳಿನಿಂದ ಇಲಾಖೆಯಿಂದ ಬಾಡಿಗೆ ಹಣ ಬಂದಿಲ್ಲ. ಇದರಿಂದ ಕಟ್ಟಡ ಮಾಲೀಕರು ಜಾಗ ಖಾಲಿ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಅಧಿಕಾರಿಗಳ ಗಮನಕ್ಕೆ ತಂದರೂ ದುಡ್ಡು ಬಂದ ಮೇಲೆ ಕೊಡುವುದಾಗಿ ಎಂದು ದಬಾಯಿಸುತ್ತಾರೆ. ಇದರಿಂದ ನಮಗೆ ಬಹಳಷ್ಟು ತೊಂದರೆಯಾಗುತ್ತಿದೆ. ತಕ್ಷಣ ಬಾಡಿಗೆ ಹಣ ಬಿಡುಗಡೆಗೊಳಿಸುವಂತೆ ಸಿಐಟಿಯು ಜಿಲ್ಲಾಧ್ಯಕ್ಷೆ ದೊಡ್ಡವ್ವ ಪೂಜಾರಿ ಆಗ್ರಹಿಸಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ. ಎಂ. ಜೈನೇಖಾನ್ ಮಾತನಾಡಿ, ಇತ್ತೀಚೆಗೆ ಬೆಳಗಾವಿಯ ದರ್ಬಾರ್ ಗಲ್ಲಿಯ ಅಂಗನವಾಡಿ ಕಾರ್ಯಕರ್ತೆ ಶಬಾನಾ ಎಂಬುವವರು ತಮ್ಮ ಕೊರಳಲ್ಲಿನ ಚಿನ್ನದ ಮಾಂಗಲ್ಯದ ಸರ ಒತ್ತೆ ಇಟ್ಟು ಬಾಡಿಗೆ ಹಣ ಕೊಟ್ಟಿದ್ದರು. ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಜಿಲ್ಲೆಯಲ್ಲೇ ಈ ರೀತಿ ಘಟನೆ ನಡೆದಿರುವುದು ನಿಜಕ್ಕೂ ದೊಡ್ಡ ದುರಂತ ಎಂದು ಅಸಮಾಧಾನ ವ್ಯಕ್ತಪಡಿಸಿದರು


Spread the love

About Laxminews 24x7

Check Also

ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು

Spread the love ಮಹಾಲಿಂಗಪುರ: ರೈತ ಸಮುದಾಯವು ಜಾಣತನದಿಂದ ಒಕ್ಕಲುತನ ಮಾಡಿದರೆ ಕಡಿಮೆ ಜಮೀನು, ಅಲ್ಪಾವಧಿಯಲ್ಲಿಯೇ ಲಾಭವನ್ನು ಮಾಡಿಕೊಳ್ಳಬಹುದು ಎಂಬುದನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ