Home / ರಾಜಕೀಯ / ಹೆಚ್‌.ಡಿ.ಕುಮಾರಸ್ವಾಮಿ ಅವರ ಪೆನ್ ಡ್ರೈವ್​ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಹೆಚ್‌.ಡಿ.ಕುಮಾರಸ್ವಾಮಿ ಅವರ ಪೆನ್ ಡ್ರೈವ್​ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

Spread the love

ಬೆಂಗಳೂರು: ”ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸ್ ಅಷ್ಟೇ.

ವರ್ಗಾವಣೆ ವಿಚಾರದಲ್ಲಿ ಅನಗತ್ಯ ಆರೋಪ ಮಾಡಿದ್ದಾರೆ. ಪೆನ್ ಡ್ರೈವ್ ವಿಚಾರ ಬಿಡಲ್ಲ ಎಂದಿದ್ದಾರೆ. ಆದರೆ, ಪೆನ್ ಡ್ರೈವ್​ನಲ್ಲಿ ಏನಾದರೂ ಇದ್ದರಲ್ಲವೇ ಅವರು ಅದನ್ನು ಹೊರಬಿಡೋದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ಕೊಟ್ಟರು.

ನಗರದ ಖಾಸಗಿ ಹೋಟೆಲ್​ನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಹಿಂದೆ ಪೆನ್‍ಡ್ರೈವ್ ತೋರಿಸಿದ್ದರು. ಅದನ್ನು ಸಾಬೀತು ಮಾಡಿ ಎಂದರೆ ಮಾಡಿದರಾ? ಸುಮ್ಮನೆ ಆರೋಪ ಮಾಡುತ್ತಾರೆ” ಎಂದು ವ್ಯಂಗ್ಯವಾಡಿದರು.

”ದೆಹಲಿ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ್ದೆ. ಕೇವಲ ಉಭಯ ಕುಶಲೋಪರಿ ವಿಚಾರಿಸಿದೆ ಬೇರೆ ಯಾವುದೇ ಮಾತುಕತೆ ನಡೆಸಿಲ್ಲ. ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡುವ ಬಗ್ಗೆ ಈಗಾಗಲೇ ಕೇಂದ್ರ ಸರ್ಕಾರದ ಜೊತೆ ಪಿಯೂಶ್ ಗೋಯಲ್ ಅವರೊಂದಿಗೆ ಮಾತನಾಡಿದ್ದು, ಅಕ್ಕಿ ನೀಡುವುದಿಲ್ಲ ಎಂದು ಹೇಳಿದ್ದಾರೆ. ಈ ವಿಚಾರದಲ್ಲಿ ಅವರು ರಾಜಕೀಯ ಮಾಡಿದ್ದಾರೆ” ಎಂದು ಸಿಎಂ ಅಸಮಾಧಾನ ವ್ಯಕ್ತಪಡಿಸಿದರು.

‘ವೈಎಸ್‌ಟಿ ಟ್ಯಾಕ್ಸ್’- ಹೆಚ್.ಡಿ. ಕುಮಾರಸ್ವಾಮಿ: ರಾಜ್ಯದಲ್ಲಿ ವೈಎಸ್‌ಟಿ ಟ್ಯಾಕ್ಸ್ ಶುರುವಾಗಿದೆ ಎಂದು ಈ ಹಿಂದೆ ಆರೋಪಿಸಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಮತ್ತೆ ವೈಎಸ್‌ಟಿ ಟ್ಯಾಕ್ಸ್ ಬಾಂಬ್‌ ಸಿಡಿಸಿದ್ದಾರೆ. ಯುರೋಪ್ ಪ್ರವಾಸ ಮುಸಿಕೊಂಡು, ನಿನ್ನೆ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ ಕುಮಾರಸ್ವಾಮಿ ಅವರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ವೈಎಸ್‌ಟಿ ನವರಿಗೆ ಏನು ಕೆಲಸ ಎಂದು ಪ್ರಶ್ನಿಸಿದರು. ಬೆಂಗಳೂರಿನ ಗರುಡ ಮಹಲ್‌ನಲ್ಲಿ ಪೊಲೀಸ್ ಡ್ರೆಸ್‌ನಲ್ಲಿ ಗೃಹ ಇಲಾಖೆಯ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಚರ್ಚೆ ಮಾಡುವಾಗ ವೈಎಸ್‌ಟಿನವರು ಏಕೆ ಇದ್ದರು ಎಂದು ಪ್ರಶ್ನಿಸಿದರು. ಸಚಿವರನ್ನು ಜೊತೆಗಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಹೋಗಿ ಕಾಂಗ್ರೆಸ್ ಹೈಕಮಾಂಡ್‌ಗೆ ರಿಪೋರ್ಟ್ ಕಾರ್ಡ್ ಕೊಟ್ಟಿದ್ದಾರೆ. ರಿಪೋರ್ಟ್ ಕಾರ್ಡ್‌ನ್ನು ಹೈಕಮಾಂಡ್‌ಗೆ ಕೊಡುವುದಲ್ಲ. ಜನತೆಯ ಮುಂದಿಡಬೇಕು” ಎಂದರು.


Spread the love

About Laxminews 24x7

Check Also

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

Spread the love ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ