Breaking News

ಲಾಲ್ ಬಾಗ್​ನ ಫಲಪುಷ್ಪ ಪ್ರದರ್ಶನ ಸಿಎಂ ಚಾಲನೆ; ಸಾರ್ವಜನಿಕರಿಗೆ ಅವಕಾಶ

Spread the love

ಬೆಂಗಳೂರು: ಲಾಲ್‌ಬಾಗ್ ಇಡೀ ವಿಶ್ವದಲ್ಲಿಯೇ ಪ್ರಸಿದ್ಧಿ ಪಡೆದ ಉದ್ಯಾನವನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಸ್ಮರಣಾರ್ಥ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಇಂದು ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಸುಮಾರು 240 ಎಕರೆ ವಿಸ್ತೀರ್ಣವಿರುವ ಈ ಉದ್ಯಾನವನದಲ್ಲಿ ವಿವಿಧ ಬಗೆಯ ಮರ,ಗಿಡಗಳಿವೆ.

ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾದ ಉದ್ಯಾನವನಕ್ಕೆ ಐತಿಹಾಸಿಕ ಮಹತ್ವವಿದೆ ಎಂದರು.

ಬ್ರಿಟಿಷ್ ಆಳ್ವಿಕೆಯ ಕಾಲದಲ್ಲಿ 140 ಎಕರೆ ಪ್ರದೇಶದಲ್ಲಿದ್ದ ಈ ಉದ್ಯಾನವನಕ್ಕೆ ಕೆಂಗಲ್ ಹನುಮಂತಯ್ಯನವರು ಇನ್ನೂ 100 ಎಕರೆ ಪ್ರದೇಶ ಸ್ವಾಧೀನಪಡಿಸಿಕೊಂಡು ಒಟ್ಟು 240 ಎಕರೆ ಪ್ರದೇಶದಲ್ಲಿ ಅತಿ ದೊಡ್ಡ ಉದ್ಯಾನವನ್ನಾಗಿ ಪರಿವರ್ತಿಸಿದರು. ಪ್ರತಿ ವರ್ಷದಂತೆ ಈ ವರ್ಷವೂ ಫಲಪುಷ್ಪ ಪ್ರದರ್ಶವನ್ನು ಅತ್ಯುತ್ತಮವಾಗಿ ಆಯೋಜಿಸಲಾಗಿದೆ ಎಂದು ತಿಳಿಸಿದರು.

ರಾಹುಲ್‌ ಗಾಂಧಿ ಶಿಕ್ಷೆಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದ ವಿಚಾರವಾಗಿ ಮಾತನಾಡಿ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸರ್ವೋಚ್ಛ ನ್ಯಾಯಾಲಯ ಎತ್ತಿ ಹಿಡಿದಿದೆ. ರಾಹುಲ್ ಗಾಂಧಿಯವರಿಗೆ ದೊರೆತ ನ್ಯಾಯ ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ ಎಂದು ಸಂತಸ ವ್ಯಕ್ತಪಡಿಸಿದರು


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ