Breaking News

ಸಿಎಂ- ಡಿಸಿಎಂ ನಡುವೆ ಬಣ ಬಡಿದಾಟ; ಆಪರೇಷನ್ ಸಿಂಗಾಪೂರ್ ಎಂದ ಡಿಕೆಶಿಯಿಂದಲೇ ಕರ್ನಾಟಕದಲ್ಲಿ ಚೆಸ್ ಆಟ’

Spread the love

ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಸಿಂಗಾಪುರದಲ್ಲಿ ಷಡ್ಯಂತ್ರ ನಡೆಸಲಾಗುತ್ತಿದೆ ಎಂಬ ಆರೋಪ ಮಾಡಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ ಬಿಜೆಪಿ ತಿರುಗೇಟು ನೀಡಿದೆ. ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಸಿಂಗಾಪುರದಲ್ಲಿ ಷಡ್ಯಂತ್ರ ನಡೆಸಲಾಗುತ್ತಿದೆ ಎಂಬ ಆರೋಪ ಮಾಡಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ ಬಿಜೆಪಿ ತಿರುಗೇಟು ನೀಡಿದೆ.
ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಪಕ್ಷದಲ್ಲಿ ನಡೆಯತ್ತಿರುವ ಬಣ ರಾಜಕೀಯದ ಬಗ್ಗೆ ವ್ಯಂಗ್ಯವಾಡಿದೆ. ‘ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಮೂಲ V/s ವಲಸೆ ಫೈಟ್ ಶುರುವಾಗಿದೆ. ಸಿಎಂ ಮತ್ತು ಡಿಸಿಎಂ ನಡುವಿನ ಕಿತ್ತಾಟದಿಂದ ಬಣ ಬಡಿದಾಟ ಜೋರಾಗಿದೆ. ಡಿಸಿಎಂ ಹೋಗುವ ಕಾರ್ಯಕ್ರಮಕ್ಕಿಲ್ಲ ಸಿಎಂಗೆ ಎಂಟ್ರಿ, ಸಿಎಂ ಹೋಗುವ ಕಾರ್ಯಕ್ರಮಕ್ಕೆ ಹೋಗಲ್ಲ ಡಿಸಿಎಂ!

 

‘ಹಣ ತಂದಿದ್ದರೆ ಒಳಗೆ ಬನ್ನಿ, ಇಲ್ಲದಿದ್ದರೆ ಹೊರಗೆ ಇರಿ ಎಂದು ಹೇಳುತ್ತಾರಂತೆ… ಕಾಂಗ್ರೆಸ್ ಇರೋದು ವಸೂಲಿಗೆ’: ದಳಪತಿ ಸಿಡಿಮಿಡಿಸಿದ್ದರಾಮಯ್ಯ ಬಣ ಹೋಗುವ ಮುನ್ನವೇ ಡಿಕೆ ಶಿವಕುಮಾರ್ ಬಣ ದಿಲ್ಲಿಗೆ ಶಿಫ್ಟ್, ನಿಗಮ ಮಂಡಳಿ ಸ್ಥಾನಗಳಿಗಾಗಿ ನಡೆಯುತ್ತಿದೆ ಸಿಎಂ- ಡಿಸಿಎಂ ಫೈಟ್, ಡಿಸಿಎಂಗೆ ದೆಹಲಿಯಲ್ಲಿ ಹಿನ್ನಡೆಯಾದ ಬೆನ್ನಲ್ಲೇ ಕರ್ನಾಟಕದಲ್ಲಿ ಬಣ ಉಲ್ಬಣ, ಸಿಂಗಾಪೂರ್ ಎಂದ ಡಿ.ಕೆ.ಶಿವಕುಮಾರ್ ಅವರಿಂದ ಕರ್ನಾಟಕದಲ್ಲೇ ಚೆಸ್ ಆಟ, ಡಿಕೆಶಿಯವರ ‘ಕುರ್ಚಿಗಾಗಿ ಹೋರಾಟ’ ಅಭಿಯಾನ ಸಿಂಗಾಪುರ್ ಬದಲು ಕರ್ನಾಟಕದಲ್ಲಿ ಇದೀಗ ಶುರುವಾಗಿದೆ’ ಎಂದು ಬಿಜೆಪಿ ಟೀಕಿಸಿದೆ.


Spread the love

About Laxminews 24x7

Check Also

ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್! ಅರ್ಜಿ ಸಲ್ಲಿಕೆ ಹೇಗೆ?

Spread the love ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ