Breaking News

40 ಕೋಟಿ ಪಾಲಿಕೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ: ಕೋರ್ಟ್ ಮೆಟ್ಟಿಲು ಏರಲು ಸಿದ್ಧ…!

Spread the love

ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕಾರಣ ಮಾಡುವುದು ಸಹಜ. ಆದರೆ ಚುನಾಯಿತರಿಗೆ ಅನುದಾನ ನೀಡುವಲ್ಲಿ ತಾರತಮ್ಯ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಪ್ರಕರಣ ವಿರುದ್ಧ ಚುನಾಯಿತ ಪ್ರತಿನಿಧಿಗಳು ಜಿಲ್ಲಾಧಿಕಾರಿಗೆ‌ ದೂರು ಸಲ್ಲಿಸಿದ್ದಾರೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ..: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರ ಅನುದಾನ ಹಂಚಿಕೆಯಲ್ಲಿ ತಾರತಮ್ಯದ ಆರೋಪವೊಂದು ಗಂಭೀರವಾಗಿ ಕೇಳಿಬಂದಿದೆ. ಹೌದು.. ಬಿಜೆಪಿ ತೆಕ್ಕೆಯಲ್ಲಿರೋ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಅನುದಾನ ತಾರತಮ್ಯ ಕೇಳಿ ಬಂದಿದ್ದು, 15 ನೇ ಹಣಕಾಸಿನಲ್ಲಿ ಬಿಡುಗಡೆಯಾದ ಬರೋಬ್ಬರಿ 40 ಕೋಟಿ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿದೆಯಂತೆ. ಬಿಜೆಪಿ ಪಾಲಿಕೆ ಸದಸ್ಯರಿಗೆ ಹೆಚ್ಚು ಅನುದಾನ ನೀಡಿರೋ ಆಡಳಿತ ಪಕ್ಷ. ಕಾಂಗ್ರೆಸ್ ಪಾಲಿಕೆ ಸದಸ್ಯರಿಗೆ ಅನುದಾನ ತಾರತಮ್ಯ ಮಾಡಿರುವ ಬಗ್ಗೆ ಆಡಳಿತ ಪಕ್ಷದ ವಿರುದ್ಧ ವಿರೋಧ ಪಕ್ಷ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದೆ.


Spread the love

About Laxminews 24x7

Check Also

ಮೂನ್ನೂರು ರೂಪಾಯಿ ಹಣಕ್ಕಾಗಿ ಕಲ್ಲು ಎತ್ತಿ ಹಾಕಿ ಅಪರಿಚಿತ ವ್ಯಕ್ತಿಯ ಕೊಲೆ

Spread the loveಬಳ್ಳಾರಿ: ಕುಡಿದ ಮತ್ತಿನಲ್ಲಿ ಹಣ ನೀಡಲಿಲ್ಲ ಎನ್ನುವ ಕಾರಣಕ್ಕೆ ಅಪರಿಚಿತ ವ್ಯಕ್ತಿಯೊಬ್ಬನ ಬಳಿ ಇದ್ದ ಮೂನ್ನೂರು ರೂಪಾಯಿ ಕಸಿದುಕೊಂಡು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ