ಈ ದೇಶವನ್ನು ದಿವಾಳಿ ಮಾಡಿದ್ದು ಮೋದಿ ಸರ್ಕಾರವೇ ಹೊರತು‌ ನಾವು ಯಾರೂ ಅಲ್ಲ:

Spread the love

ಕಲಬುರಗಿ: ಐದು ಗ್ಯಾರಂಟಿ ಕೊಟ್ಟರೆ ಕರ್ನಾಟಕ ದಿವಾಳಿ ಆಗುತ್ತೆ ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ.

ಆದರೆ ಈ ದೇಶವನ್ನು ದಿವಾಳಿ ಮಾಡಿದ್ದು ಮೋದಿ ಸರ್ಕಾರವೇ ಹೊರತು‌ ನಾವು ಯಾರೂ ಅಲ್ಲ. ಈಗಾಗಲೇ ಉಚಿತ‌ ಅಕ್ಕಿ, ಶಕ್ತಿ ಯೋಜನೆ, ಇಂದು ಗೃಹಜ್ಯೋತಿ ಯೋಜನೆ ಜಾರಿಗೆ ತಂದಿದ್ದೇವೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಜೊತೆಗೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಈಡೇರಿಸಿ ಕರ್ನಾಟಕ‌ದ ಸಮಗ್ರ ಅಭಿವೃದ್ಧಿ ಮಾಡಿ ಮಾದರಿಯಾಗುತ್ತೇವೆ.‌ ಬಿಜೆಪಿಯವರೇ ತಾಕತ್ತಿದ್ದರೆ ನಮ್ಮ ಗ್ಯಾರಂಟಿಗಳನ್ನು ದೇಶದ ಎಲ್ಲೆಡೆ ಜಾರಿಗೆ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ‌.

ನಗರದ ಎನ್ ವಿ‌ ಮೈದಾನದಲ್ಲಿ ಆಯೋಜನೆ ಮಾಡಿದ್ದ ಗೃಹಜ್ಯೋತಿ ಯೋಜ‌ನೆ ಲೋಕಾರ್ಪಣೆ ಮಾಡಿ ಮಾತನಾಡಿದ ಸಿಎಂ, ಈ ಹಿಂದಿನ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ 165 ಭರವಸೆ ಕೊಟ್ಟು 158 ಭರವಸೆ ಈಡೇರಿಸಿ ಹೆಚ್ಚುವರಿ ಇತರೆ 30 ಕಾರ್ಯಕ್ರಮಗಳನ್ನು ನೀಡಿದ್ದೆವು. ನಮ್ಮನ್ನು ನಂಬಿ ಮತ್ತೊಮ್ಮೆ ಗೆಲ್ಲಿಸಿದ ರಾಜ್ಯದ ಜನರಿಗೆ ನಮ್ಮ ಸರ್ಕಾರ ನೀಡಿರುವ ಐದು ಗ್ಯಾರಂಟಿಗಳನ್ನು ಜಾರಿಗೆ ತರುವುದರ ಜೊತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿರುವ 75 ಭರವಸೆಗಳನ್ನು ಬಜೆಟ್‌ ಮೂಲಕ ಈಡೇರಿಸುತ್ತೇವೆ ಎಂದು‌ ಭರವಸೆ ನೀಡಿದರು.

ಪ್ರಮಾಣವಚನ ಸ್ವಿಕಾರ ಮಾಡಿ ಎರಡೂವರೆ ತಿಂಗಳಲ್ಲಿ ಜನರ ವಿಶ್ವಾಸ ಉಳಿಸಿಕೊಳ್ಳವ ಕೆಲಸ ಮಾಡಿದ್ದೇವೆ. ಐದು ಗ್ಯಾರಂಟಿಗಳಲ್ಲಿ ಜೂನ್​ 11ರಂದು ಶಕ್ತಿ ಯೋಜನೆ ಚಾಲನೆ ನೀಡಿದ್ದೆವು. ಶಕ್ತಿ ಯೋಜನೆಯಡಿಯಲ್ಲಿ ಪ್ರತಿನಿತ್ಯ 55 ಲಕ್ಷ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ. ದೇವಸ್ಥಾನ ಸೇರಿದಂತೆ ಅವಶ್ಯಕತೆ ಇರುವ ಕಡೆಗೆ ಹೋಗುತ್ತಿದ್ದಾರೆ. ಇದು‌ ಬಿಜೆಪಿ ನಾಯಕರ ಹೊಟ್ಟೆ ಉರಿಗೆ ಕಾರಣವಾಗಿದೆ ಎಂದು ಸಿಎಂ ಕಿಡಿಕಾರಿದರು.

ಬಿಜೆಪಿಯವರು ಗ್ಯಾರಂಟಿ ಯೋಜನೆ ಬಗ್ಗೆ ಅಪಪ್ರಚಾರ ಮಾಡ್ತಿದ್ದಾರೆ. ದೇಶದ ಪ್ರಧಾನಿಯವರು ರಾಜಸ್ಥಾನದಲ್ಲಿ ಕರ್ನಾಟಕ ಬಗ್ಗೆ ಮಾತನಾಡ್ತಾರೆ. ಗ್ಯಾರಂಟಿ ಕೊಡುವ ಮೂಲಕ ಕರ್ನಾಟಕ ರಾಜ್ಯ ದಿವಾಳಿ ಆಗಲಿದೆ ಎಂದು ಹೇಳಿದ್ದಾರೆ. ಆದರೆ ಕರ್ನಾಟಕ ರಾಜ್ಯ ಮಾತ್ರವಲ್ಲ, ದೇಶವನ್ನು ದಿವಾಳಿ‌ ಮಾಡಿದ್ದು ನೀವು ನಾವಲ್ಲ ಎಂದು ಮೋದಿಗೆ ಟಾಂಗ್ ನೀಡಿದರು.


Spread the love

About Laxminews 24x7

Check Also

Bigg Boss ಸೀಸನ್​-11ಕ್ಕೆ ಎಂಟ್ರಿ ಪಡೆದ ನಾಲ್ವರು ಸ್ಫರ್ಧಿಗಳು

Spread the love ಬೆಂಗಳೂರು: ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್​ಬಾಸ್ (Bigg Boss)​ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿಯೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ