Breaking News

ರಾಜ್ಯ ಕಾಂಗ್ರೆಸ್​ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಸೋಮವಾರ ವಿವಿಧ ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಪ್ರತಿಭಟನೆ

Spread the love

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಆಗಸ್ಟ್ 7 ರಂದು (ನಾಳೆ) ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಮೋರ್ಚಾ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ ತಿಳಿಸಿದ್ದಾರೆ.

 

ಆಡಳಿತರೂಢ ಕಾಂಗ್ರೆಸ್ ಸರ್ಕಾರವೂ ಬಿಜೆಪಿ ಸರ್ಕಾರ ತಂದಿದ್ದ ರೈತ ಪರ ಯೋಜನೆಗಳನ್ನು ಕೈ ಬಿಟ್ಟಿದ್ದು, ರಾಜ್ಯದ ಅನ್ನದಾತರ ವಿರುದ್ಧವಾಗಿ ನಡೆದುಕೊಂಡಿದೆ. ರೈತ ವಿರೋಧಿ ನೀತಿಯನ್ನು ಖಂಡಿಸಿ ಸೋಮವಾರ ವಿವಿಧ ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈತರು ತಾವು ಬೆಳೆದ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡುವ ಸ್ವಾತಂತ್ರ್ಯವನ್ನು ಎಪಿಎಂಸಿ ಕಾಯ್ದೆ ಮುಖಾಂತರ ಬಿಜೆಪಿ ಸರ್ಕಾರ ಕೊಟ್ಟಿತ್ತು. ಇದರಿಂದ ರೈತರಿಗೆ ಸಾಗಾಣಿಕೆ ವೆಚ್ಚ, ದಲ್ಲಾಳಿಗಳ ಕಮಿಷನ್ ಮತ್ತು ಇತರೆ ಖರ್ಚುಗಳು ಉಳಿತಾಯವಾಗುತ್ತಿತ್ತು. ಇದೀಗ ಕಾಂಗ್ರೆಸ್ ಸರ್ಕಾರವು ಎಪಿಎಂಸಿ ಕಾನೂನನ್ನು ರದ್ದು ಮಾಡಿ ರೈತರ ಆದಾಯಕ್ಕೆ ಕುತ್ತು ತಂದಿದೆ ಎಂದು ಟೀಕಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ