Breaking News

ಟೊಮ್ಯಾಟೊ ಬೆಳೆದು ಕೋಟ್ಯಧಿಪತಿಗಳಾದ ಅಣ್ತಮ್ಮ

Spread the love

ಈ ಕುಟುಂಬ ಮೊದಲಿಗೆ ಸ್ವಂತ ಜಮೀನಿನಲ್ಲಿ ಮಳೆ ಆಶ್ರಿತ ಬೆಳೆ ಬೆಳೆದು ಜೀವನ ಸಾಗಿಸುತ್ತಿತ್ತು. ಬಳಿಕ ಸಹೋದರರು ಎಸ್​ಎಸ್​ಎಲ್​ಸಿ ಮುಗಿಸಿ, ಕಾಲೇಜು ಮೆಟ್ಟಿಲು ಏರದೆ ಕೃಷಿ ಮಾಡುವ ನಿರ್ಧಾರ ಕೈಗೊಂಡರು.

3-4 ವರ್ಷಗಳಿಂದ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಸಹೋದರರು ಟೊಮ್ಯಾಟೊ ಬೆಳೆಯುವುದನ್ನೇ ರೂಢಿಯಾಗಿಸಿಕೊಂಡಿದ್ದಾರೆ. 2 ವರ್ಷಗಳ ಹಿಂದೆ ಟೊಮ್ಯಾಟೊ ಬೆಲೆ ಕಡಿಮೆ ಇದ್ದ ಕಾರಣ ಅಷ್ಟೇನೂ ಲಾಭ ಸಿಕ್ಕಿರಲಿಲ್ಲ.

ಹಿಂದಿನ ವರ್ಷವೂ ಖರ್ಚು ಸಿಕ್ಕಿತ್ತೇ ಹೊರತು ಲಾಭ ಕಂಡಿರಲಿಲ್ಲ. ಆದರೂ ಟೊಮ್ಯಾಟೊ ಬೆಳೆಯುವುದನ್ನು ನಿಲ್ಲಿಸದ ಸಹೋದರರು ಜೂನ್​ನಲ್ಲಿ ಸಂಪೂರ್ಣ 12 ಎಕರೆ ಜಮೀನಿನಲ್ಲೂ ಸುಮಾರು 80 ಸಾವಿರ ಪೈರನ್ನು ನಾಟಿ ಮಾಡಿದ್ದರು.

ಬಿಸಿಲಿನಿಂದಾಗಿ 20-30 ಸಾವಿರ ಗಿಡಗಳು ಒಣಗಿಹೋದವು. ಉಳಿದ 50 ಸಾವಿರ ಗಿಡಗಳಿಂದ ಈಗಾಗಲೇ 2-3 ಕೊಯ್ಲು ಮಾಡಿದ್ದು, 50-60 ಟನ್ ಟೊಮ್ಯಾಟೊ ಬಂದಿದೆ. ಇದರಿಂದ 40 ಲಕ್ಷ ರೂ. ಸಂಪಾದಿಸಿದ್ದಾರೆ. ಇನ್ನೂ 100-150 ಟನ್ ಟೊಮ್ಯಾಟೊ ಕೊಯ್ಲು ಸಿಗುವ ಸಾಧ್ಯತೆ ಇದ್ದು, ಒಟ್ಟಾರೆ ಸುಮಾರು 2 ಕೋಟಿ ರೂ. ಆದಾಯ ನಿರೀಕ್ಷೆ ಮಾಡಿದ್ದಾರೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ