Breaking News

ಇತ್ತೀಚೆಗೆ ಸುರಿದ ಮಳೆಯಿಂದ ಶತಮಾನ ಕಂಡಿರುವ ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿದೆ

Spread the love

ಬಾಗಲಕೋಟೆ: ಇತ್ತೀಚೆಗೆ ಸುರಿದ ಮಳೆಯಿಂದ ಶತಮಾನ ಕಂಡಿರುವ ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಜಿಲ್ಲೆಯ ಇಲಕಲ್ಲ ತಾಲೂಕಿನ ಗುಡೂರ ಎಸ್.

ಸಿ. ಗ್ರಾಮದಲ್ಲಿರುವ ಸರಕಾರಿ ಶಾಲೆ ಇದಾಗಿದೆ. ಮಳೆಯಿಂದ ಸಂಪೂರ್ಣ ಶಾಲೆಯ ಮೇಲ್ಛಾವಣಿ ಜಖಂಗೊಂಡಿದೆ.

ಈ ಸರ್ಕಾರಿ ಶಾಲೆಯು 150 ವರ್ಷದ ಹಳೆಯದಾಗಿದೆ. ಶಾಲೆಯ ಕಟ್ಟಡ ಶಿಥಿಲಗೊಂಡಿತ್ತು. ಕೆಲವು ದಿನಗಳ ಹಿಂದೆ ಸುರಿದ ಭಾರಿ ಮಳೆ ಹೆಂಚಿನ ಮೇಲ್ಛಾವಣಿ ಕಸಿದುಬಿದ್ದಿದೆ. ಶಾಲೆಯ ಒಟ್ಟು ಐದು ಕೊಠಡಿಗಳು ಹೆಂಚಿನ ಮೇಲ್ಛಾವಣಿ ಹೊಂದಿವೆ. ಈಗಾಗಲೇ ಮೂರು ಕೊಠಡಿಗಳ ಮೇಲ್ಛಾವಣಿ ಹಾನಿಯಾಗಿವೆ. ಇನ್ನು ಎರಡು ಕೊಠಡಿಗಳು ಬೀಳುವ ಹಂತಕ್ಕೆ ತಲುಪಿವೆ. ಅಧಿಕಾರಿಗಳ ನಿರ್ಲಕ್ಷವೇ ಇದಕ್ಕೆ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಶಾಲೆಯ ಕಟ್ಟಡ ಹಳೆಯದಾಗಿದ್ದು, ಶಾಲೆಯ ಕಟ್ಟಡವನ್ನು ದುರಸ್ತಿಗೊಳಿಸುವಂತೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ಮುಖ್ಯ ಶಿಕ್ಷಕ ಎಂ.ಜಿ. ಮಾದರ ತಿಳಿಸಿದ್ದಾರೆ. ಶಾಲೆಯಲ್ಲಿ 389 ವಿದ್ಯಾರ್ಥಿಗಳು ಓದುತ್ತಿದ್ದು, ಆದಷ್ಟು ಬೇಗನೆ ಅಧಿಕಾರಿಗಳು ಶಾಲಾ ಕಟ್ಟಡವನ್ನು ದುರಸ್ತಿಗೊಳಿಸುವ ಕಾರ್ಯಕ್ಕೆ ಮುಂದಾಗಿ, ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲ ಮಾಡಿಕೊಡಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಗರ್ಲಗುಂಜಿಯಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನಿಂದ ವೃಕ್ಷಾರೋಪಣ…

Spread the love ಗರ್ಲಗುಂಜಿಯಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನಿಂದ ವೃಕ್ಷಾರೋಪಣ… ಪರಿಸರ ಜಾಗೃತಿಯ ಸಂದೇಶ ಖಾನಾಪೂರ ತಾಲೂಕಿನ ಗರ್ಲಗುಂಜಿ ಗ್ರಾಮದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ