ಧಾರವಾಡ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಮೇಲೆ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸಿ ಧಾರವಾಡ ಹೈಕೋರ್ಟ್ ತೀರ್ಪು ನೀಡಿದೆ.
ವಿಧಾನಸಭಾ ಚುನಾವಣೆ ವೇಳೆ ಜೆಪಿ ನಡ್ಡಾ ಅವರ ಮೇಲೆ ಎಫ್‌ಐಆರ್ ದಾಖಲಾಗಿತ್ತು.
ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಮೇ 11, 2023ರಂದು ಮತದಾರರಿಗೆ ಆಮಿಷವೊಡ್ಡಿದ ಆರೋಪದಡಿ ದೂರು ದಾಖಲಾಗಿತ್ತು. ಮೇ 7, 2023 ರಂದು ಬಹಿರಂಗ ಸಭೆ ನಡೆದಿತ್ತು. ಬಹಿರಂಗ ಸಭೆಯಲ್ಲಿ ಜೆ ಪಿ ನಡ್ಡಾ ಭಾಷಣ ಮಾಡಿದ್ದರು.
ಮಾಧ್ಯಮಗಳಲ್ಲಿನ ಸುದ್ದಿ ಆಧರಿಸಿ ಸ್ವಯಂ ಪ್ರೇರಿತರಾಗಿ ಪೊಲೀಸರು ದೂರು ದಾಖಲಿಸಿಕೊಂಡಿದ್ದರು.
ಬಳಿಕ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿನ ಎಫ್‌ಐಆರ್ ರದ್ದು ಮಾಡುವಂತೆ ನಡ್ಡಾ ಹೈಕೋರ್ಟ್ ಮೊರೆ ಹೋಗಿದ್ದರು. ಎಫ್‌ಐಆರ್ ರದ್ದು ಮಾಡಿ ಧಾರವಾಡ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.