Breaking News
Home / ರಾಜಕೀಯ / ತನ್ನ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದಿರುವ ಪತಿ

ತನ್ನ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದಿರುವ ಪತಿ

Spread the love

ಬೆಂಗಳೂರು : ಪತಿಯೋರ್ವ ತನ್ನ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಲಹಳ್ಳಿಯಲ್ಲಿ ಭಾನುವಾರ ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮೃತಳನ್ನು ಸರಿತಾ(35) ಎಂದು ಗುರುತಿಸಲಾಗಿದೆ. ತಾರಾನಾಥ್​ ಕೊಲೆಗೈದ ಆರೋಪಿ. ಪತ್ನಿ ಸರಿತಾಳ ಕುತ್ತಿಗೆಗೆ ಹಗ್ಗದಿಂದ ಬಿಗಿದು ಹತ್ಯೆಗೈದಿರುವ ಪತಿ ತಾರಾನಾಥ್ ವೈಟ್ ಫೀಲ್ಡ್ ಠಾಣೆಗೆ ಬಂದು ಶರಣಾಗಿದ್ದಾನೆ.

ಮೂಲತಃ ಮಂಗಳೂರಿನವರಾದ ಈ ದಂಪತಿ ಬೆಂಗಳೂರಿನಲ್ಲಿ ನೆಲೆಸಿ, ಪಾನೀಪುರಿ ಅಂಗಡಿ ನಡೆಸುತ್ತಿದ್ದರು. ಭಾನುವಾರ ಸಂಜೆ ಪತ್ನಿಯನ್ನು ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ತಾರಾನಾಥ್ ಧೈರ್ಯ ಸಾಲದೇ ಪೊಲೀಸರಿಗೆ ಶರಣಾಗಿದ್ದಾನೆ. ಸರಿತಾ ವಿರುದ್ಧ ಈ ಹಿಂದೆ ಮಂಗಳೂರಿನ ಮೂಲ್ಕಿ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿತ್ತು. “ಪರಿಚಿತರು ಪತ್ನಿಯನ್ನು ಕಳ್ಳಿ‌ ಕಳ್ಳಿ ಎನ್ನುತ್ತಿದ್ದರು. ಸಹಿಸಲಾರದೇ ಪತ್ನಿಯನ್ನು ಹತ್ಯೆಗೈದಿರುವುದಾಗಿ ಆರೋಪಿ ಪೊಲೀಸರ ಮುಂದೆ ಹೇಳಿಕೊಂಡಿದ್ದಾನೆ. ಶರಣಾಗಿರುವ ಆರೋಪಿಯನ್ನು ಬಂಧಿಸಲಾಗಿದ್ದು, ವೈಟ್ ಫೀಲ್ಡ್ ಠಾಣಾ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ವೈಟ್ ಫೀಲ್ಡ್ ವಿಭಾಗ ಡಿಸಿಪಿ ಎಸ್.ಗಿರೀಶ್, ಮಂಗಳೂರು ಮೂಲದ ತಾರಾನಾಥ್​ ಎಂಬವರು ಇಲ್ಲಿನ ವೈಟ್ ಫೀಲ್ಡ್​ ಠಾಣಾ ವ್ಯಾಪ್ತಿಯಲ್ಲಿ ಪಾನಿಪುರಿ ಅಂಗಡಿ ಇಟ್ಟುಕೊಂಡಿದ್ದರು. ಕಳೆದ 11 ವರ್ಷಗಳ ಹಿಂದೆ ತಾರಾನಾಥ್​ ಅವರಿಗೆ ಮದುವೆಯಾಗಿತ್ತು. ಭಾನುವಾರ ತಾರಾನಾಥ್​ ಏಕಾಏಕಿ ತನ್ನ ಹೆಂಡತಿಯ ಕುತ್ತಿಗೆ ಹಿಸುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಳಿಕ ಆತನೇ ವೈಟ್​ಫೀಲ್ಡ್​ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ