Breaking News
Home / ಹುಬ್ಬಳ್ಳಿ / ಹುಬ್ಬಳ್ಳಿ ಕಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳನ್ನು ಒಂದು ವಾರ ಕಾಲೇಜಿನಿಂದ ಪ್ರಿನ್ಸಿಪಾಲ್ ಡಾ. ಈಶ್ವರ ಹೊಸಮನಿ ಅಮಾನತ್ತು

ಹುಬ್ಬಳ್ಳಿ ಕಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳನ್ನು ಒಂದು ವಾರ ಕಾಲೇಜಿನಿಂದ ಪ್ರಿನ್ಸಿಪಾಲ್ ಡಾ. ಈಶ್ವರ ಹೊಸಮನಿ ಅಮಾನತ್ತು

Spread the love

ಹುಬ್ಬಳ್ಳಿ : ನರ್ಸ್​ಗಳನ್ನು ಕುರಿತು ಕನ್ನಡ ಚಿತ್ರವೊಂದರ ಹಾಡಿಗೆ ರೀಲ್ಸ್ ಮಾಡಿ ಕಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.

ಈ ಹಿನ್ನೆಲೆ ಕಿಮ್ಸ್ ಆಸ್ಪತ್ರೆಯ ನರ್ಸ್​ಗಳಿಗೆ ಅಪಮಾನ ಮಾಡಲಾಗಿದೆ. ಈ 11 ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಅವರಿಗೆ ನರ್ಸ್ ಅಸೋಸಿಯೇಷನ್ ಅಧ್ಯಕ್ಷೆ ಸುನೀತಾ ನಾಯ್ಕ ಸೋಮವಾರ ದೂರು ಸಲ್ಲಿಸಿದ್ದರು.

ಹುಬ್ಬಳ್ಳಿ ಕಿಮ್ಸ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿಗಳ ನರ್ಸ್​ಗಳನ್ನು ಗುರಿಯಾಗಿಟ್ಟುಕೊಂಡು ಯಾವುದೇ ಅನುಮತಿ ಪಡೆಯದೆ ರೀಲ್ಸ್ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಅಲ್ಲದೆ ಕರ್ನಾಟಕ ರಾಜ್ಯ ನರ್ಸ್ ಅಸೋಸಿಯೇಷನ್ ಮತ್ತು ಧಾರವಾಡ ಜಿಲ್ಲಾ ಶುಶ್ರೂಷಕರ ಸಂಘ ವಿರೋಧ ವ್ಯಕ್ತಪಡಿಸಿತ್ತು. ಈ ವಿಚಾರವಾಗಿ ಮಾತನಾಡಿದ ನರ್ಸ್ ಅಸೋಸಿಯೇಷನ್ ಅಧ್ಯಕ್ಷೆ ಸುನೀತಾ ನಾಯ್ಕ ಅವರು, ವಿಡಿಯೋವನ್ನು ನರ್ಸ್ ಗಳನ್ನು ಅಸಭ್ಯವಾಗಿ, ಅಗೌರವಿಸುವ ರೀತಿಯಲ್ಲಿ ಮಾಡಲಾಗಿದೆ. ಈ ಮೂಲಕ ನರ್ಸ್ ಗಳಿಗೆ ಅವಮಾನ ಮಾಡಲಾಗಿದ್ದು, ರಾಜ್ಯದೆಲ್ಲೆಡೆ ವಿಡಿಯೋ ವೈರಲ್​ ಆಗಿದೆ. ಕೂಡಲೇ ಅವಮಾನ ‌ಮಾಡಿದ ವಿದ್ಯಾರ್ಥಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದರು.

 


Spread the love

About Laxminews 24x7

Check Also

‘ಬರ ಪರಿಹಾರ ನೀಡದೇ ಕಾಂಗ್ರೆಸ್ ದಿವಾಳಿ’

Spread the loveಹುಬ್ಬಳ್ಳಿ: ‘ರಾಜ್ಯ ಸರ್ಕಾರಕ್ಕೆ ಬರ ಪರಿಹಾರ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಯಾವತ್ತು ಹೇಳಿಲ್ಲ. ಕೇಂದ್ರ ಸರ್ಕಾರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ