Breaking News

SC-ST ಕಾಯಿದೆಯಡಿಯ ಸುಳ್ಳು ಪ್ರಕರಣಗಳು ನ್ಯಾಯಾಂಗ ವ್ಯವಸ್ಥೆಗೆ ಅಡ್ಡಿ: ಹೈಕೋರ್ಟ್

Spread the love

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಡಗಳ (ದೌರ್ಜನ್ಯ ತಡೆ) ಕಾಯಿದೆಯಡಿ ದಾಖಲಾಗುತ್ತಿರುವ ಸುಳ್ಳು ಕ್ರಿಮಿನಲ್​ ಪ್ರಕರಣಗಳು ನ್ಯಾಯಾಂಗ ವ್ಯವಸ್ಥೆಗೆ ಅಡ್ಡಿ ಪಡಿಸುತ್ತಿವೆ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.

ಅಲ್ಲದೇ, ಈ ರೀತಿಯ ಪ್ರಕರಣಗಳು ನ್ಯಾಯಾಂಗ ಕ್ಷೇತ್ರದ ಅಮೂಲ್ಯ ಸಮಯ ವ್ಯರ್ಥ ಮಾಡುತ್ತಿವೆ ಎಂದು ತಿಳಿಸಿದೆ.

ಪರಿಶಿಷ್ಟ ಜಾತಿ ಮತ್ತು ಪಂಗಡ ದೌರ್ಜನ್ಯ ಕಾಯಿದೆಯಡಿ ದಾಖಲಾಗಿದ್ದನ್ನು ಪ್ರಶ್ನಿಸಿ ರಸಿಕ್ ಲಾಲ್ ಮತ್ತು ಪುರುಷೋತ್ತಮ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತ ಪಡಿಸಿದೆ. ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯಿದೆ ಅಡಿ ಸುಳ್ಳು ಪ್ರಕರಣಗಳು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗಲಿದ್ದು, ನಿಯಂತ್ರಿಸುವಲ್ಲಿ ವಿಫಲವಾದಲ್ಲಿ ಇಡೀ ಅಪರಾಧ ನ್ಯಾಯ ವ್ಯವಸ್ಥೆಗೆ ದೊಡ್ಡ ಹೊರೆಯಾಗಬಹುದು ಎಂದು ತಿಳಿಸಿದೆ.

ಜತೆಗೆ, ಈ ಸಂಬಂಧ ಪ್ರಕರಣದಲ್ಲಿ ಸಿಲುಕುವವರಿಗೆ ಕಿರುಕುಳ ಮುಂದುವರೆಯಲಿದೆ ಮತ್ತು ನ್ಯಾಯ ತಪ್ಪಿದಂತಾಗಬಹುದು ಎಂದು ಪೀಠ ಅಭಿಪ್ರಾಯ ವ್ಯಕ್ತ ಪಡಿಸಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವರ್ಗಗಳ ಜನತೆಯ ಮೇಲಿನ ದೌರ್ಜನ್ಯಗಳನ್ನು ತಡೆಯುವ ಉದ್ದೇಶದಿಂದ ಕಾಯಿದೆ ಜಾರಿ ಮಾಡಲಾಗಿದೆ. ಆದರೆ, ಈ ಕಾಯಿದೆ ಉಲ್ಲಂಘನೆ ಮಾಡಿರುವುದಕ್ಕೆ ಪ್ರಸ್ತುತದ ಪ್ರಕರಣ ಒಂದು ಉತ್ತಮ ನಿರ್ದಶನವಾಗಿದೆ ಎಂದು ನ್ಯಾಯಪೀಠ ತಿಳಿಸಿದೆ.

ಅಲ್ಲದೇ, ಈ ರೀತಿಯ ಪ್ರಕರಣಗಳಿಂದ ನಿಜವಾಗಿಯೂ ಸಮಸ್ಯೆಗೆ ಸಿಲುಕಿರುವವರು ನ್ಯಾಯಕ್ಕಾಗಿ ಕಾಯುತ್ತಿರುವ ಸಂದರ್ಭದಲ್ಲಿ ಸುಳ್ಳು ಪ್ರಕರಣವನ್ನು ವಿಚಾರಣೆಗೊಳಪಡಿಸುವುದು ಒಂದು ರೀತಿಯ ಅಪಹಾಸ್ಯದಂತಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ. ಜತೆಗೆ, ದೂರುದಾರರ ತಂದೆ ಅರ್ಜಿದಾರರಿಗೆ ತಮ್ಮ ಜಮೀನನ್ನು ಮಾರಾಟ ಮಾಡಿದ್ದಾರೆ. ಅಲ್ಲದೇ, ಆ ಆಸ್ತಿಯನ್ನು ಅರ್ಜಿದಾರರು ಕಳೆದ 50 ವರ್ಷಗಳಿಂದ ತಮ್ಮಲ್ಲಿ ಉಳಿಸಿಕೊಂಡಿರುವ ಸಂಬಂಧ ಸರ್ಕಾರದಲ್ಲಿ ದಾಖಲೆಗಳಿವೆ. ಹಾಗೆ, ಅರ್ಜಿದಾರರು ಜಮೀನನ್ನು ಖರೀದಿ ಮಾಡಿದ್ದಾರೆ ವಿನಃ ಅತಿಕ್ರಮ ಮಾಡಿಲ್ಲ ಎಂಬ ಅಂಶ ದಾಖಲೆಗಳಲ್ಲಿ ಎತ್ತಿ ತೋರಿಸುತ್ತಿದೆ, ಆದರೂ ಈ ಅಂಶವನ್ನು ಪರಿಗಣಿಸದೇ ದೂರು ನೀಡಲಾಗಿದೆ. ಹೀಗಾಗಿ ಪ್ರಕರಣ ರದ್ದುಗೊಳಿಸುತ್ತಿರುವುದಾಗಿ ಪೀಠ ತಿಳಿಸಿದೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ