Breaking News

ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ ಬೊಮ್ಮಾಯಿ

Spread the love

ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದ್ದಾರೆ.

ಮಾತುಕತೆಯ ವೇಳೆ ಅಮಿತ್ ಶಾ, “ಆದಷ್ಟು ಬೇಗ ಪ್ರತಿಪಕ್ಷ ನಾಯಕರನ್ನು ಆಯ್ಕೆ ಮಾಡಲಾಗುವುದು. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗುವುದು. ಪಕ್ಷ ಸಂಘಟನೆ ನಿಟ್ಟಿನಲ್ಲಿ ಒಂದು ಉತ್ತಮ ತಂಡವನ್ನು ಆಯ್ಕೆ ಮಾಡಲಾಗುವುದು” ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ.

5 ಗ್ಯಾರಂಟಿಗಳ ಮಾಹಿತಿ ಪಡೆದುಕೊಂಡ ಅಮಿತ್ ಶಾ: ರಾಜ್ಯದಲ್ಲಿನ ರಾಜಕೀಯ ವಿದ್ಯಮಾನಗಳ ಬಗ್ಗೆ ಬೊಮ್ಮಾಯಿ ಅವರು ಅಮಿತ್ ಶಾಗೆ ಮಾಹಿತಿ ನೀಡಿದ್ದಾರೆ. ಪ್ರಮುಖವಾಗಿ, ಕಾಂಗ್ರೆಸ್‌ನ ಪಂಚ ಗ್ಯಾರಂಟಿಗಳ ಬಗ್ಗೆ ಶಾ, ಬೊಮ್ಮಾಯಿ ಬಳಿ ಮಾಹಿತಿ ಕೇಳಿದ್ದಾರೆ. ಯಾವ ರೀತಿ ಪಂಚ ಗ್ಯಾರಂಟಿ ಅನುಷ್ಠಾನವಾಗಿದೆ‌, ಷರತ್ತುಗಳು, ಅನುದಾನ ಕೊರತೆ, ಗ್ಯಾರಂಟಿಗಳ ಬಗ್ಗೆ ಜನಾಭಿಪ್ರಾಯ ಸಂಬಂಧ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದರೊಂದಿಗೆ, ಎರಡು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಂದಿರುವ ಆರೋಪಗಳು, ವರ್ಗಾವಣೆ ದಂಧೆ, ಉಡುಪಿ ಪ್ರಕರಣ ಸಂಬಂಧ ಚರ್ಚಿಸಿದರು ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ