Breaking News
Home / Uncategorized / ವಿರೋಧ ಪಕ್ಷದ ನಾಯಕರ ಆಯ್ಕೆಯಾಗದ ಪರಿಣಾಮ ರಾಜ್ಯ ಪೊಲೀಸ್ ದೂರು ಪ್ರಾಧಿಕಾರ (ಪಿಸಿಎ)ದಲ್ಲಿ ಖಾಲಿಯಿರುವ ಇಬ್ಬರು ಸದಸ್ಯರ ನೇಮಕಾತಿಗೆ ವಿಳಂಬ

ವಿರೋಧ ಪಕ್ಷದ ನಾಯಕರ ಆಯ್ಕೆಯಾಗದ ಪರಿಣಾಮ ರಾಜ್ಯ ಪೊಲೀಸ್ ದೂರು ಪ್ರಾಧಿಕಾರ (ಪಿಸಿಎ)ದಲ್ಲಿ ಖಾಲಿಯಿರುವ ಇಬ್ಬರು ಸದಸ್ಯರ ನೇಮಕಾತಿಗೆ ವಿಳಂಬ

Spread the love

ಬೆಂಗಳೂರು: ವಿರೋಧ ಪಕ್ಷದ ನಾಯಕರ ಆಯ್ಕೆಯಾಗದ ಪರಿಣಾಮ ರಾಜ್ಯ ಪೊಲೀಸ್ ದೂರು ಪ್ರಾಧಿಕಾರ (ಪಿಸಿಎ)ದಲ್ಲಿ ಖಾಲಿಯಿರುವ ಇಬ್ಬರು ಸದಸ್ಯರ ನೇಮಕಾತಿಗೆ ವಿಳಂಬವಾಗುತ್ತಿದೆ ಎಂದು ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಕರ್ನಾಟಕ ಪೊಲೀಸ್ ದೂರು ಪ್ರಾಧಿಕಾರಕ್ಕೆ ಅಧ್ಯಕ್ಷರ ನೇಮಕ ಕುರಿತಂತೆ ನಿರ್ದೇಶಿಸಬೇಕು ಎಂದು ವಕೀಲೆ ಸುಧಾ ಕಟ್ವಾ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.

ಈ ವೇಳೆ ಹಾಜರಾದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ, ರಾಜ್ಯ ಪೊಲೀಸ್ ದೂರು ಪ್ರಾಧಿಕಾರಕ್ಕೆ ನಾಗರಿಕ ಸಮಾಜದಿಂದ (ಸಿವಿಲ್ ಸೊಸೈಟಿ) ಒಬ್ಬರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರೊಬ್ಬರನ್ನು ಸದಸ್ಯರನ್ನಾಗಿ ನೇಮಕ ಮಾಡಬೇಕಿದೆ. ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕವಾಗಿಲ್ಲ.

ಇದಕ್ಕೆ ವಿರೋಧ ಪಕ್ಷದ ನಾಯಕರು ಆಯ್ಕೆಯಾಗಿಲ್ಲದಿರುವುದು ಕಾರಣ. ಆಯ್ಕೆ ಸಮಿತಿಯಲ್ಲಿ ವಿರೋಧ ಪಕ್ಷದ ನಾಯಕರೂ ಒಬ್ಬರಾಗಿದ್ದಾರೆ. ಈ ಕಾರಣಕ್ಕಾಗಿ ರಾಜ್ಯ ಪೊಲೀಸ್ ದೂರು ಪ್ರಾಧಿಕಾರಕ್ಕೆ ಇನ್ನಿಬ್ಬರು ಸದಸ್ಯರ ನೇಮಕಾತಿ ವಿಳಂಬವಾಗುತ್ತಿದೆ ಎಂದು ವಿವರಿಸಿದರು.

ಪೊಲೀಸ್ ದೂರು ಪ್ರಾಧಿಕಾರದಲ್ಲಿ ಅಧ್ಯಕ್ಷರೂ ಸೇರಿ ಐದು ಮಂದಿ ಇದ್ದಾರೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎನ್ ಕೆ ಸುಧೀಂದ್ರ ರಾವ್ ಅವರನ್ನು 2023 ರ ಜುಲೈ 31 ರಂದು ನೇಮಕ ಮಾಡಲಾಗಿದ್ದು, ಅವರು ಅಧಿಕಾರ ಸ್ವೀಕರಿಸಿದ್ದಾರೆ. ಪ್ರಾಧಿಕಾರವು ಮೂರು ಸ್ಥಾನದೊಂದಿಗೆ ಕೆಲಸ ಮಾಡುತ್ತಿದೆ. ಆದರೂ ಪ್ರಾಧಿಕಾರ ಕೆಲಸ ಮಾಡುತ್ತಿಲ್ಲ ಎಂಬ ಭಾವನೆ ಬೇಡ. ಉಳಿದ ಇಬ್ಬರು ಸದಸ್ಯರನ್ನು ಶೀಘ್ರ ನೇಮಕ ಮಾಡಲಾಗುವುದು ಎಂದು ನ್ಯಾಯಪೀಠಕ್ಕೆ ಭರವಸೆ ನೀಡಿದರು. ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ ಮುಂದಿನ ನಾಲ್ಕು ವಾರದಲ್ಲಿ ನಾಲ್ಕು ಸದಸ್ಯರನ್ನು ನೇಮಕ ಮಾಡಬೇಕು ಎಂದು ನಿರ್ದೇಶನ ನೀಡಿ ವಿಚಾರಣೆ ಮುಂದೂಡಿತು.

ಆದಷ್ಟು ಬೇಗ ಪ್ರತಿಪಕ್ಷ ನಾಯಕನ ಆಯ್ಕೆ:- ಅಮಿತ್​ ಶಾ: ಮಾಜಿ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಆಗಸ್ಟ್​ 8 ಮಂಗಳವಾರದಂದು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದ್ದರು.


Spread the love

About Laxminews 24x7

Check Also

ಯಾವ ನೋಟಿಸ್ ಗು ಬಗ್ಗದ ಪ್ರಜ್ವಲ್ : ಇದೀಗ ಕೋರ್ಟ್ ಮೂಲಕ ‘ವಾರೆಂಟ್’ ಜಾರಿಗೆ ‘SIT’ ಸಿದ್ಧತೆ

Spread the love ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದೇಶದಿಂದ ದೇಶಕ್ಕೆ ಜಿಗಿಯುತ್ತ ತಲೆಮರಿಸಿಕೊಂಡಿರುವ ಹಾಸನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ