Breaking News

ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರ ವಾರಾಹಿ ಯಾತ್ರೆಯ ಮೂರನೇ ಹಂತ ಇಂದಿನಿಂದ ವಿಶಾಖಪಟ್ಟಣದಲ್ಲಿ ಆರಂಭವಾಗಲಿದೆ.

Spread the love

 

ವಿಶಾಖಪಟ್ಟಣಂ, ಆಂಧ್ರಪ್ರದೇಶ: ನಟ ರಾಜಕಾರಣಿ ಪವನ್​ ಕಲ್ಯಾಣ್​ ಅವರಿಂದ ನಡೆಯುತ್ತಿರುವ ವಾರಾಹಿ ಯಾತ್ರೆ ಮುಂದುವರಿಯಲಿದೆ.ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರ ಮೂರನೇ ಹಂತದ ವಾರಾಹಿ ಯಾತ್ರೆಗೆ ಇಂದಿನಿಂದ ಚಾಲನೆ ದೊರೆಯಲಿದೆ.

ವಿಶಾಖಪಟ್ಟಣದಲ್ಲಿ ಆರಂಭವಾಗಲಿರುವ ಈ ಯಾತ್ರೆ ಇದೇ ತಿಂಗಳ 19ರವರೆಗೆ ಮುಂದುವರಿಯಲಿದೆ.

ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನದಂದು ತಮ್ಮ ಈ ವಾರಾಹಿ ಯಾತ್ರೆಯನ್ನು ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಇಂದು ಮಧ್ಯಾಹ್ನ ಪವನ್ ಕಲ್ಯಾಣ್ ನಗರವನ್ನು ತಲುಪಲಿದ್ದು, ಸಂಜೆ 5 ಗಂಟೆಗೆ ವಿಶಾಖಪಟ್ಟಣದ ಜಗದಂಬಾ ಕೂಡಲಿಯಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ನಡೆಯುವ ಜನವಾಣಿ ಕಾರ್ಯಕ್ರಮದಲ್ಲಿ ಪವನ್ ಕಲ್ಯಾಣ್ ಅವರು ವಿಶಾಖಪಟ್ಟಣಂ ನಿವಾಸಿಗಳಿಂದ ದೂರು ಮತ್ತುಅಹವಾಲು ಸ್ವೀಕರಿಸಲಿದ್ದಾರೆ.

ಪವನ್ ಕಲ್ಯಾಣ್ ಅವರು ತಮ್ಮ ವಾರಾಹಿ ಯಾತ್ರೆಯಲ್ಲಿ ನಗರದ ಧ್ವಂಸಗೊಂಡ ಮತ್ತು ಆಕ್ರಮಿತ ಪ್ರದೇಶಗಳಿಗೆ, ಮುಖ್ಯವಾಗಿ ಗಂಗವರಂ ಬಂದರು ಮತ್ತು ಇತರ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ಜನಸೇನಾ ಪಕ್ಷದ ಪ್ರಧಾನ ಕಾರ್ಯದರ್ಶಿ ಟಿ ಶಿವಶಂಕರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ