Breaking News

ರಾಜ್ಯದಲ್ಲಿ ನಮ್ಮ ಕ್ಲಿನಿಕ್​ಗಳನ್ನು ಇನ್ನಷ್ಟು ಜನಸ್ನೇಹಿಯನ್ನಾಗಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ

Spread the love

ಬೆಂಗಳೂರು: ಜನಸಾಮಾನ್ಯರಿಗೆ ಉಚಿತ ಚಿಕಿತ್ಸೆ ನೀಡುವ ಉದ್ದೇಶದಿಂದ ಪ್ರಾರಂಭಿಸಲಾಗಿರುವ ನಮ್ಮ ಕ್ಲಿನಿಕ್​​ಗಳಿಗೆ ಆರೋಗ್ಯ ಸಚಿವರು ಜನಸ್ನೇಹಿ ಸ್ಪರ್ಶ ನೀಡಿದ್ದು, ಕ್ಲಿನಿಕ್​​ಗಳ ಸಮಯ ಬದಲಾವಣೆ ಮಾಡಿ ಸಂಜೆ ವೇಳೆಯೂ ಚಿಕಿತ್ಸೆ ಲಭಿಸುವಂತೆ ಮಾಡಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇರುವ ಕ್ಲಿನಿಕ್​​ಗಳ ಪೈಕಿ ಶೇಕಡಾ 25ರಷ್ಟು ನಮ್ಮ ಕ್ಲಿನಿಕ್​ಗಳ ಸಮಯ ಬದಲಾವಣೆ ಮಾಡಲು ಆರೋಗ್ಯ ಸಚಿವರು ಆದೇಶಿಸಿದ್ದಾರೆ. ಸಂಜೆ 4.30ಕ್ಕೆ ಬಾಗಿಲು ಮುಚ್ಚುತ್ತಿದ್ದ ನಮ್ಮ ಕ್ಲಿನಿಕ್​ಗಳು ಇನ್ನು ಮುಂದೆ ರಾತ್ರಿ 8 ಗಂಟೆಯ ತನಕ ಚಿಕಿತ್ಸೆ ನೀಡಲಿವೆ.

ನಗರ ಪ್ರದೇಶಗಳಲ್ಲಿನ ಬಡವರು ಮತ್ತು ಕಡುಬಡವರಿಗೆ ಪ್ರಾಥಮಿಕ ಹಂತದಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸಲು ಆರೋಗ್ಯ ಇಲಾಖೆ ಹಲವಾರು ವಿಭಿನ್ನ ಯೋಜನೆಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಹೆಜ್ಜೆ ಹಾಕುತ್ತಿದೆ. ಇದರ ಒಂದು ಭಾಗವಾಗಿ ನಮ್ಮ ಕ್ಲಿನಿಕ್​ಗಳನ್ನು ನಂ 1 ಕ್ಲಿನಿಕ್​ಗಳನ್ನಾಗಿ ಮಾರ್ಪಡಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಾಗಿದ್ದಾರೆ.

ರಾತ್ರಿ 8 ಗಂಟೆವರೆಗೆ ಕ್ಲಿನಿಕ್​ ಓಪನ್​​: ರಾಜ್ಯದಲ್ಲಿ 415 ನಮ್ಮ ಕ್ಲಿನಿಕ್​ಗಳಿದ್ದು, ಇವುಗಳಲ್ಲಿ ಶೇಕಡಾ 25ರಷ್ಟು ಕ್ಲಿನಿಕ್​ಗಳ ಸಮಯವನ್ನು ಬದಲಾವಣೆ ಮಾಡಲು ಆರೋಗ್ಯ ಸಚಿವರು ಇಲಾಖೆ ಮುಖ್ಯಸ್ಥರಿಗೆ ನಿರ್ದೇಶನ ನೀಡಿದ್ದಾರೆ. ಈ ಕ್ಲಿನಿಕ್​ಗಳು ಬೆಳಗ್ಗೆ 9 ಗಂಟೆಗೆ ಬಾಗಿಲು ತೆಗೆದು ಮಧ್ಯಾಹ್ನ 12.30ಕ್ಕೆ ಮುಚ್ಚಲ್ಪಡುತ್ತಿದ್ದವು. ಮಧ್ಯಾಹ್ನ ಊಟದ ಬಳಿಕ 2 ಗಂಟೆಗೆ ಬಾಗಿಲು ತೆರೆದು ಸಂಜೆ 4.30ಕ್ಕೆ ಬಂದ್ ಆಗುತ್ತಿದ್ದವು. ಈ ಸಮಯದಿಂದ ಹೆಚ್ಚಿನ ಜನರಿಗೆ ಅನುಕೂಲ ಆಗುತ್ತಿರಲಿಲ್ಲ. ಬಹಳಷ್ಟು ರೋಗಿಗಳು ಆಸ್ಪತ್ರೆಗೆ ಬಂದು ಬಾಗಿಲು ಮುಚ್ಚಿರುವುದನ್ನು ನೋಡಿಕೊಂಡು ವಾಪಸ್​​ ತೆರಳಬೇಕಾಗಿತ್ತು.


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ