Breaking News

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಆರೋಪಿಯನ್ನು ಬಂಧಿಸಿರುವುದಾಗಿ ಹುಬ್ಬಳ್ಳಿ -ಧಾರವಾಡ ಪೊಲೀಸ್ ಕಮೀಷನರ್ ಸಂತೋಷ ಬಾಬು ತಿಳಿಸಿದ್ದಾರೆ.

Spread the love

ಹುಬ್ಬಳ್ಳಿ : ನಗರದ ಖಾಸಗಿ ಕಾಲೇಜು ವಿದ್ಯಾರ್ಥಿನಿಯರನ್ನು ಅಸಭ್ಯವಾಗಿ ಬಿಂಬಿಸುವಂತಹ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವ ಘಟನೆ ಇತ್ತೀಚೆಗೆ ನಡೆದಿತ್ತು. ಈ ಸಂಬಂಧ ಅದೇ ಕಾಲೇಜಿನ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಹುಬ್ಬಳ್ಳಿ -ಧಾರವಾಡ ಪೊಲೀಸ್ ಕಮೀಷನರ್ ಸಂತೋಷ ಬಾಬು ಮಾಹಿತಿ ನೀಡಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆರೋಪಿ ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬಂಧಿತನ ಇ-ಮೇಲ್ ಐಡಿ ಮತ್ತು ಸಾಮಾಜಿಕ ಜಾಲತಾಣಗಳ ವಿವರಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಈ ವರದಿ ಬಳಿಕವೇ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳೆಷ್ಟು ಎಂದು ತಿಳಿದು ಬರಲಿದೆ. ಪ್ರಾಥಮಿಕ ತನಿಖೆಯಲ್ಲಿ ಈತನೊಂದಿಗೆ ಇನ್ನೂ ಕೆಲವರಿದ್ದಾರೆ ಎಂಬ ಶಂಕೆ ಇದೆ. ಇದೇ ಆಧಾರದ ಮೇಲೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಇದೇ ಕಾಲೇಜಿನಲ್ಲಿ ಹಾಜರಾತಿ ಕೊರತೆಯಿಂದಾಗಿ ಆರೋಪಿಯನ್ನು ಈ ವರ್ಷ ಅಡ್ಮಿಷನ್ ಮಾಡಿಕೊಂಡಿರಲಿಲ್ಲ. ಬಾಯ್ ಫ್ರೆಂಡ್​ಗಳಿದ್ದ ಹುಡುಗಿಯರನ್ನು ಟಾರ್ಗೆಟ್ ಮಾಡಿಕೊಂಡು ಅಂಥವರ ಫೋಟೋಗಳನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದ. ಹುಡುಗಿಯರು ಬೇರೆ ಹುಡುಗರ ಜೊತೆ ಮಾತನಾಡುತ್ತಿರುವುದು ಹಾಗು ತನ್ನನ್ನು ಸರಿಯಾಗಿ ಮಾತನಾಡಿಸದೇ ಇರುವುದರಿಂದ ಈ ರೀತಿ ಮಾಡಿದ್ದಾನೆ ಎಂದು ಆರೋಪಿ ಹೇಳಿದ್ದಾನೆ.

ಸಮಾಜದಲ್ಲಿ ಅಶಾಂತಿ ಮಾಡಿಸುವ ಬಗ್ಗೆ ಹಾಗೂ ಪೊಲೀಸರನ್ನು ಪ್ರಚೋದಿಸುವ ಬರಹಗಳನ್ನು ಕೂಡ ಪೋಸ್ಟ್ ಮಾಡಿದ್ದರ ಹಿಂದೆ ಪೊಲೀಸರ ದಾರಿ ತಪ್ಪಿಸುವ ಉದ್ದೇಶ ಹೊಂದಿದ್ದ. ಎಲ್ಲ ರೀತಿಯಲ್ಲೂ ತನಿಖೆ ನಡೆಸಲಾಗುತ್ತಿದೆ. ಬ್ರೈನ್ ಮ್ಯಾಪಿಂಗ್ ‌ಮಾಡಿದರೆ ಎಲ್ಲ ‌ಮಾಹಿತಿ ಹೊರಬರಲಿದೆ ಎಂದು ತಿಳಿಸಿದ್ದಾರೆ.

 


Spread the love

About Laxminews 24x7

Check Also

2027ರ ಜನವರಿ ಅಂತ್ಯಕ್ಕೆ ವಿಮಾನಯಾನ – ಕೊನೆ ಹಂತದತ್ತ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ

Spread the loveವಿಜಯಪುರ: ಬಹುನಿರೀಕ್ಷಿತ ವಿಜಯಪುರ ವಿಮಾನ ನಿಲ್ದಾಣ ಕಾರ್ಯಾರಂಭಕ್ಕೆ ಮುಹೂರ್ತ ಕೂಡಿ ಬಂದಿದ್ದು, 2027ರ ವರ್ಷಾರಂಭವಾಗುತ್ತಿದ್ದಂತೆಯೇ ವಿಮಾನ ಹಾರಿಸುವ ಪ್ರಯತ್ನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ